Karnataka Rain 12-05-2023: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಕಳೆದ ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗಿದೆ. ಇಂದು ಮಳೆಯ ಪ್ರಮಾಣ ಹೆಚ್ಚಾಗುವ ಜೊತೆಗೆ ಗುಡುಗು, ಮಿಂಚು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಕೊಹ್ಲಿ ಅಲ್ಲವೇ ಅಲ್ಲ... ಟೆಸ್ಟ್ ತಂಡಕ್ಕೆ ಉಪನಾಯಕನಾಗೋದು ಈ ಮೂವರು ಕಿಲಾಡಿಗಳಲ್ಲಿ ಒಬ್ಬರು..! ಯಾರವರು?
ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಭಾರಿ ಮಳೆಯಾಗಿದೆ. ಬೆಂಗಳೂರಿನಲ್ಲಿ ತಡರಾತ್ರಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿತ್ತು. ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿ ಬಹಿರಂಗಪಡಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ದೇಶದಲ್ಲಿ ಹವಾಮಾನ ಪರಿಸ್ಥಿತಿ ಹೀಗಿದೆ:
ಅಂಡಮಾನ್ ಸಮುದ್ರದಲ್ಲಿ ಸಕ್ರಿಯವಾಗಿರುವ ಮೋಚಾ ಚಂಡಮಾರುತ ಇಂದು ಬಂಗಾಳಕೊಲ್ಲಿಯಲ್ಲಿ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನದ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ಬದಲಾಗಲಿದೆ. ಇದಾದ ನಂತರ ಈಶಾನ್ಯ ದಿಕ್ಕಿಗೆ ತಿರುಗಿ ಮುಂದೆ ಸಾಗುವ ಸಾಧ್ಯತೆ ಇದೆ. ಚಂಡಮಾರುತವು ಭಾರತದ ಗಡಿಯಿಂದ ತಿರುಗಿ ಪೂರ್ವ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ ಕರಾವಳಿಯ ಕಡೆಗೆ ಚಲಿಸುತ್ತದೆ. ಈ ಕಾರಣದಿಂದಾಗಿ ಈ ಎರಡೂ ದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಈ ರಾಜ್ಯಗಳಲ್ಲಿ ಭಾರೀ ಮಳೆ:
ದೇಶದಲ್ಲಿ ಕಳೆದ 24 ಗಂಟೆಗಳ ಹವಾಮಾನದ ಕುರಿತು ಮಾತನಾಡುವುದಾದರೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘುವಾಗಿ ಸಾಧಾರಣ ಮಳೆಯಾಗಿದೆ. ದಕ್ಷಿಣ ಛತ್ತೀಸ್‌ಗಢ, ಪಶ್ಚಿಮ ಬಂಗಾಳದ ಕರಾವಳಿ ಮತ್ತು ಸಿಕ್ಕಿಂನಲ್ಲಿ ಲಘು ಮಳೆಯಾಗಿದೆ. ಕೇರಳ, ತಮಿಳುನಾಡು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಲಘುವಾಗಿ ಸಾಧಾರಣ ಮಳೆಯಾಗಿದೆ. ಈಶಾನ್ಯ ಭಾರತ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಅನೇಕ ಭಾಗಗಳಲ್ಲಿ, ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5 ಡಿಗ್ರಿ ಅಥವಾ ಅದಕ್ಕಿಂತ ಹೆಚ್ಚಿದೆ.
ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಮೇ 12 ರ ರಾತ್ರಿಯಿಂದ ಪಶ್ಚಿಮ ಹಿಮಾಲಯದ ಮೇಲೆ ಹೊಸ ಪಾಶ್ಚಾತ್ಯ ಅಡಚಣೆ ಬರಬಹುದು. ಇದರಿಂದ ದೇಶದ ಉತ್ತರ ರಾಜ್ಯಗಳಲ್ಲಿ ಮಳೆ, ತಣ್ಣನೆಯ ಗಾಳಿ ಬೀಸುವ ಸಾಧ್ಯತೆ ಇದ್ದು, ಇದರಿಂದ ಕೆಲ ದಿನಗಳ ಕಾಲ ಮೇ ತಿಂಗಳ ಬಿಸಿಗಾಳಿಯಿಂದ ಜನರಿಗೆ ನೆಮ್ಮದಿ ಸಿಗಲಿದೆ.
ಸ್ಕೈಮೆಟ್ ಏಜೆನ್ಸಿಯ ಪ್ರಕಾರ, ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗಬಹುದು. ಮುಂದಿನ 2 ದಿನಗಳ ಕಾಲ ಅಂಡಮಾನ್ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಸಮುದ್ರದ ಪರಿಸ್ಥಿತಿ ತುಂಬಾ ಪ್ರಕ್ಷುಬ್ಧವಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ ಬಲವಾದ ಗಾಳಿಯು ಗಂಟೆಗೆ 70-80 ಕಿಮೀ ವೇಗದಲ್ಲಿ ಬೀಸಬಹುದು ಎಂದು ಹೇಳಿದೆ,
ಇದನ್ನೂ ಓದಿ: Budh Mahadasha 2023: 17 ವರ್ಷಗಳವರೆಗೆ ಬುಧ ಮಹಾದಶಾ: ಈ ಜನರಿಗೆ ಇರುವುದಿಲ್ಲ ಸಂಕಷ್ಟ; ಸುಖದ ಸುಪ್ಪತ್ತಿಗೆ ಖಚಿತ!
ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ:
ಆಂಧ್ರಪ್ರದೇಶ, ತಮಿಳುನಾಡು ಮತ್ತು ಲಕ್ಷದ್ವೀಪದಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕರ್ನಾಟಕ, ಕೇರಳ ಮತ್ತು ಈಶಾನ್ಯ ಭಾರತದಲ್ಲಿ ಅಲ್ಲಲ್ಲಿ ಲಘುವಾಗಿ ಸಾಧಾರಣ ಮಳೆಯಾಗಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.