ಬೆಂಗಳೂರು : ರಾಜ್ಯದಲ್ಲಿ ಬಾಲಕಿಯರ ಮಾತ್ರವಲ್ಲದೇ ಬಾಲಕರ ಮೇಲೆಯೂ ಲೈಂಗಿಕ ದೌರ್ಜನ್ಯಗಳಾಗುತ್ತಿವೆ. ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಇಂತಹ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವುದು ವಿಕೃತ ಮನಸ್ಥಿತಿ ವ್ಯಕ್ತಿತ್ವಗಳಿಗೆ ಹಿಡಿದ ಕೈಗನ್ನಡಿಯಾಗಿದೆ.
ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಸರಿ ಸುಮಾರು 114 ಬಾಲಕರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಕಳೆದ ಅಕ್ಟೋಬರ್ ಅಂತ್ಯಕ್ಕೆ ರಾಜ್ಯದಲ್ಲಿ 33 ಪೋಕ್ಸೊ ಕೇಸ್ ಗಳು ದಾಖಲಾಗಿವೆ. ದಾಖಲಾದ 114 ಪ್ರಕರಣಗಳಲ್ಲಿ 7 ಕೇಸ್ ಗಳಲ್ಲಿ ಮಾತ್ರ ಶಿಕ್ಷೆಯಾಗಿದ್ದು, ಉಳಿದ ಪ್ರಕರಣಗಳು ವಿಚಾರಣೆಯ ಹಂತದಲ್ಲಿದೆ ಎಂದು ಪೊಲೀಸ್ ಇಲಾಖೆ ನೀಡಿದ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.
ಇದನ್ನೂ ಓದಿ:ಕಳ್ಳಭಟ್ಟಿ ಸಾಗಿಸುತ್ತಿದ್ದ ಮನೆಮೇಲೆ ಅಬಕಾರಿ ಅಧಿಕಾರಿಗಳ ದಾಳಿ
2021 ರಲ್ಲಿ 24, 2022 ರಲ್ಲಿ 25 ಪ್ರಕರಣಗಳು, 2023ರಲ್ಲಿ 33 ಹಾಗೂ ಈ ವರ್ಷ 32 ಪ್ರಕರಣ ದಾಖಲಾಗಿವೆ. ಬಾಲಕರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪೈಕಿ ಬೆಂಗಳೂರು ನಗರದಲ್ಲಿ ನಾಲ್ಕು ವರ್ಷಗಳಲ್ಲಿ 17 ಪ್ರಕರಣ ವರದಿಯಾಗಿವೆ.
ಬಾಲಕರ ಮೇಲಿನ ನಡೆದ ಲೈಂಗಿಕ ದೌರ್ಜನ್ಯಗಳ ಪ್ರಕರಣಗಳ ಪೈಕಿ ಬಹುತೇಕ ಪುರುಷರೇ ಆರೋಪಿಗಳಾಗಿದ್ದಾರೆ. ಬೆರಳಣಿಕೆ ಪ್ರಕರಣಗಳಲ್ಲಿ ಮಹಿಳೆಯರು ಆರೋಪಿಗಳಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರಹಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿಕ್ಷಕಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಶೈಕ್ಷಣಿಕ ಪ್ರವಾಸದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ಪೊಟೋ ಕ್ಲಿಕ್ಕಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ:ತುಂಗ ಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆಗೆ ಚಿಂತನೆ
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ರು. ಈ ಪ್ರಕರಣವು ವಿಚಾರಣಾ ಹಂತದಲ್ಲಿದೆ. ಇದೇ ರೀತಿ 107 ಪ್ರಕರಣಗಳು ವಿಚಾರಣ ಹಂತದಲ್ಲಿದ್ದು, ಈ ಎಲ್ಲಾ ಪ್ರಕರಣಗಳಿಗೆ ಪೊಲೀಸರು ಮುಕ್ತಿ ನೀಡಕಬೇಕಿದೆ.
ಬಾಲಕರು ಆಟವಾಡಲು ಮನೆಯಿಂದ ಹೊರ ಹೋದಾಗ ದೌರ್ಜನ್ಯಕ್ಕೆ ಒಳಗಾಗುತ್ತಿದ್ಧಾರೆ. ನೆರೆಹೊರೆಯವರು ಮನೆಯವರು, ಪರಿಚಯಸ್ಥರು ಹಾಗೂ ಹತ್ತಿರದ ಸಂಬಂಧಿಗಳೇ ವಿಕೃತಿ ಮರೆಯುತ್ತಿದ್ದಾರೆಮ ಬಾಲಕರೊಂದಿಗೆ ಅಸಭ್ಯ ವರ್ತನೆ, ಆಶ್ಲೀಲವಾಗಿ ಪೋಟೋ ಕ್ಲಿಕ್ಕಿಸಿಕೊಂಡು ಖಾಸಗಿ ಅಂಗ ಮುಟ್ಟಿ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ.
ಬಾಲಕರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿವರ
ವರ್ಷ ಪ್ರಕರಣ
2021-24
2022- 25
2023-33
2024-32 ( ಅಕ್ಟೋಬರ್ ಅಂತ್ಯಕ್ಕೆ)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ