Karnataka Rainfall : ರಾಜ್ಯದಲ್ಲಿ ಇನ್ನೂ 4 ದಿನ ಮಳೆ : ಬೆಂಗಳೂರಲ್ಲಿ ಮೋಡಕವಿದ ವಾತಾವರಣ 

ನಾಳೆಯೂ ರಾಜ್ಯದ ಹಲವೆಡೆ ಗುಡುಗು- ಮಿಂಚಿನ ಸಾಧ್ಯತೆ ಇದೆ. ಎ. 23, ಹಾಗೂ ಎ.24 ರಂದು ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಪಶ್ಚಿಮ ಘಟ್ಟದ ಒಂದೆರಡು ಜಿಲ್ಲೆಗಳಲ್ಲಿ ಹಗುರದಿಂದ ಮದ್ಯಮ ಮಳೆಯಾಗಲಿದೆ. 

Written by - Sowmyashree Marnad | Last Updated : Apr 21, 2022, 05:27 PM IST
  • ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ
  • ಬೆಂಗಳೂರಲ್ಲಿ ಮೋಡಕವಿದ ವಾತಾವರಣ
  • ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Karnataka Rainfall : ರಾಜ್ಯದಲ್ಲಿ ಇನ್ನೂ 4 ದಿನ ಮಳೆ : ಬೆಂಗಳೂರಲ್ಲಿ ಮೋಡಕವಿದ ವಾತಾವರಣ  title=

ಬೆಂಗಳೂರು : ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದ್ದು, ಬೆಂಗಳೂರಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಕರಾವಳಿ, ಉತ್ತರ ಒಳನಾಡು, ಪಶ್ಚಿಮ ಘಟ್ಟಗಳ ಒಂದೆರಡು ಕಡೆ ಮಳೆಯಾಗಲಿದೆ ಎಂದು ವರದಿಯಾಗಿದೆ. ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಮಾತನಾಡಿ, 
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಶ್ರವಣಬೆಳಗೊಳದಲ್ಲಿ ಮಾತ್ರ ಮಳೆಯಾಗಿದೆ. ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರ್ಗಿ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಧಾರವಾಡ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಗುಡುಗು- ಮಿಂಚಿನೊಂದಿಗೆ ಮಳೆಯಾಗಲಿದೆ ಎಂದರು. 

ಇದನ್ನೂ ಓದಿ : Karnataka Crime : ಪರಪುರುಷನ ಜೊತೆ ಪತ್ನಿ ಪೋನ್ ಸಂಪರ್ಕ : ಹೆಂಡತಿ ಕೊಂದು ಎಸ್ಕೇಪ್ ಆಗಿದ್ದ ಪತಿ ಅರೆಸ್ಟ್

ನಾಳೆಯೂ ರಾಜ್ಯದ ಹಲವೆಡೆ ಗುಡುಗು- ಮಿಂಚಿನ ಸಾಧ್ಯತೆ ಇದೆ. ಎ. 23, ಹಾಗೂ ಎ.24 ರಂದು ಕರಾವಳಿ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಪಶ್ಚಿಮ ಘಟ್ಟದ ಒಂದೆರಡು ಜಿಲ್ಲೆಗಳಲ್ಲಿ ಹಗುರದಿಂದ ಮದ್ಯಮ ಮಳೆಯಾಗಲಿದೆ. 

ಏ.25 ರಂದು ಕರಾವಳಿಯ ಎಲ್ಲಾ ಜಿಲ್ಲೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು ಗುಡುಗು ಸಹಿತ ಮಳೆಯಾಗಲಿದೆ ಎಂದರು. 

ಬೆಂಗಳೂರಲ್ಲಿ ಇಂದು 34.1 ಡಿಗ್ರಿ ಗರಿಷ್ಠ ತಾಪಮಾನ ದಾಖಲಾಗಿದೆ.  ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಹವಾಮಾನದಲ್ಲಿ ಕರ್ನಾಟಕದ ಉತ್ತರ ಒಳನಾಡಿನಿಂದ ತಮಿಳ್ನಾಡಿನವರೆಗೂ ಟ್ರಫ್ ಇದೆ. ತಮಿಳ್ನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಪ್ರಭಾವ ಕಡಿಮೆ ಆಗಿದೆ. ಉತ್ತರ ಪೂರ್ವ ಮಧ್ಯಪ್ರದೇಶದಲ್ಲಿ ತೆಲಂಗಾಣದವರೆಗೂ ಮೇಲ್ಮೈ ಸುಳಿಗಾಳಿ ಇದೆ ಎಂದರು.

ಇದನ್ನೂ ಓದಿ : PSI Recruitment Scam : PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ : ಕಾಂಗ್ರೆಸ್ ಶಾಸಕನ ಗನ್ ಮ್ಯಾನ್ ಅರೆಸ್ಟ್!

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News