Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆ..!

Karnataka Weather Updates: ಕರ್ನಾಟಕದ ಹಲವೆಡೆ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ಅಕ್ಟೋಬರ್ 23ರವರೆಗೆ ಬೆಂಗಳೂರು ನಗರದಲ್ಲಿ ಮಳೆ ಸಾಧ್ಯತೆ ಇದೆ.

Written by - Puttaraj K Alur | Last Updated : Oct 21, 2024, 11:10 PM IST
  • ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆಯ ಮುನ್ಸೂಚನೆ
  • ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ
  • ಅಕ್ಟೋಬರ್ 23ರವರೆಗೆ ಬೆಂಗಳೂರು ನಗರದಲ್ಲಿ ಮಳೆ ಸಾಧ್ಯತೆ ಇದೆ
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆ..! title=
ಭಾರೀ ಮಳೆ ಸಾಧ್ಯತೆ!

Karnataka Weather Updates: ಕಳೆದ ಒಂದು ವಾರದಿಂದ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿವಿಧ ಜಿಲ್ಲೆಗಳಲ್ಲಿ ರೈತರು ಬೆಳೆದ ಬೆಳೆಗಳು ನೀರುಪಾಲಾಗಿದ್ದರೆ, ಹಲವೆಡೆ ಮನೆಗಳು ಕುಸಿದು ಬಿದ್ದಿವೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೀಗಾಗಿ ರಾಜ್ಯದ ಜನರು ಮಳೆ ನಿಂತರೆ ಸಾಕಪ್ಪ ಸಾಕು ಅನ್ನುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆರಾಯನ ಆರ್ಭಟ ಜೋರಾಗಲಿದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಈಗಾಗಲೇ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಜನರು ಕಂಗಾಲಾಗಿದ್ದಾರೆ. ರಾಜಧಾನಿಯಲ್ಲಿ ಮಳೆರಾಯನ ಅಬ್ಬರಕ್ಕೆ ಅವಾಂತರ ಸೃಷ್ಟಿಯಾಗಿದೆ. ಮಳೆಯ ಬಗ್ಗೆ ಬೆಂಗಳೂರಿನಲ್ಲಿ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್​ ಪ್ರತಿಕ್ರಿಯಿಸಿದ್ದು, ಕರ್ನಾಟಕದ ಹಲವೆಡೆ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದಾರೆ. ಅಕ್ಟೋಬರ್ 23ರವರೆಗೆ ಬೆಂಗಳೂರು ನಗರದಲ್ಲಿ ಮಳೆ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 23ರವರೆಗೆ ಮಳೆಯ ಅಬ್ಬರ ಜೋರಾಗಿರಲಿದೆ. ಉತ್ತರ ಒಳನಾಡಿನ ಕೆಲವು ಕಡೆ ಸಹ ಮಳೆ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆ

ಯಾವ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ?

ಉತ್ತರ ಕನ್ನಡ 11 CM, ಹಾವೇರಿ 10 CM, ಉಡುಪಿ 9 CM, ದಾವಣಗೆರೆ ಜಿಲ್ಲೆಯಲ್ಲಿ 8 CM ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಯಲ್ಲಿಯೂ ಮಳೆಯಾಗುವ‌ ಸಾಧ್ಯತೆಯಿದೆ ಅಂತಾ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್​ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ 17.7 MM ಮಳೆ ಆಗಿದೆ. HAL​ ಏರ್​​ಪೋರ್ಟ್​ ವ್ಯಾಪ್ತಿಯಲ್ಲಿ 10.8 MM, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 MM, ಬಾಗಲಗುಂಟೆ 5.4 MM, ಶೆಟ್ಟಿಹಳ್ಳಿ 4.2 MM, ನಂದಿನಿ ಲೇಔಟ್ 3.3 MM, ಹೇರೋಹಳ್ಳಿ 2.9 MM, ಕೆಂಗೇರಿ ವ್ಯಾಪ್ತಿಯಲ್ಲಿ 2.1 MM ಮಳೆಯಾಗಿದೆ. ಭಾರೀ ಮಳೆಯ ಕಾರಣ ಬೆಂಗಳೂರಿನ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಮತ ಬಹಿಷ್ಕಾರಕ್ಕೆ ತೀರ್ಮಾನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News