ಶಾಸನ ರಚಿಸಬೇಕಾದವರು ರೆಸಾರ್ಟ್ನಲ್ಲಿ ಕಾಲಹರಣ ಮಾಡುತ್ತಿದ್ದಾರೆ: ಕೋಡಿಹಳ್ಳಿ ಚಂದ್ರಶೇಖರ್

 ಜನರ ಸಮಸ್ಯೆಗಳನ್ನು ಪರಿಹರಿಸಬೇಕಾದ ಶಾಸಕರು ರೆಸಾರ್ಟ್'ನಲ್ಲಿ ಕುಳಿತು ರಾಜಕೀಯ ಮಾಡುತ್ತಿದ್ದಾರೆ  ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಟೀಕಿಸಿದ್ದಾರೆ.

Last Updated : Jan 24, 2019, 07:00 PM IST
ಶಾಸನ ರಚಿಸಬೇಕಾದವರು ರೆಸಾರ್ಟ್ನಲ್ಲಿ ಕಾಲಹರಣ ಮಾಡುತ್ತಿದ್ದಾರೆ: ಕೋಡಿಹಳ್ಳಿ ಚಂದ್ರಶೇಖರ್ title=

ರಾಯಚೂರು: ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುತ್ತಾ, ಶಾಸನ ರಚಿಸಬೇಕಾದ ಶಾಸಕರೇ ರೆಸಾರ್ಟ್ ರಾಜಕಾರಣ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಟೀಕಿಸಿದ್ದಾರೆ.

ಇಂದಿಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಪರಿಹರಿಸಬೇಕಾದ ಶಾಸಕರು ರೆಸಾರ್ಟ್'ನಲ್ಲಿ ಕುಳಿತು ರಾಜಕೀಯ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರಿಗೆ ರಕ್ಷಣೆ ನೀಡಬೇಕಾದವರೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಶಾಸಕರ ಈ ವರ್ತನೆ ಅಸಹ್ಯ ಮೂಡಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ ಹಿನ್ನೆಲೆಯಲ್ಲಿ ಜ.25ರಂದು ರೈತರ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ರೈತರ ಸಾಲಮನ್ನಾ, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ, ರೈತರು ಎದುರಿಸುತ್ತಿರುವ ಸಮಸೆಗಳನ್ನು ಸಿಎಂಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

Trending News