ಭೂಮಿ ನಡುಗಿತು, ಮೇಘ ಅಬ್ಬರಿಸಿತು, ಧರ್ಮ ಸಂಘರ್ಷ ಹೆಚ್ಚಾದೀತು : ಕೋಡಿಮಠದ ಶ್ರೀ

Kodihalli Swamiji : ಇದಕ್ಕೆಲ್ಲ ನೈಜ ಜ್ಞಾನದ ಕೊರತೆಯೇ ಕಾರಣ. ಭವಿಷ್ಯದಲ್ಲಿ ಇದು ಮತ್ತಷ್ಟು ಉಲ್ಬಣವಾಗುತ್ತದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

Written by - Chetana Devarmani | Last Updated : Aug 19, 2022, 03:46 PM IST
  • ಮತಾಂಧತೆಯಿಂದಾಗಿ ಎಲ್ಲೆಡೆ ಧರ್ಮ ಸಂಘರ್ಷಗಳು ನಡೆಯುತ್ತಿದೆ
  • ಭವಿಷ್ಯದಲ್ಲಿ ಇದು ಮತ್ತಷ್ಟು ಉಲ್ಬಣವಾಗುತ್ತದೆ
  • ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ
ಭೂಮಿ ನಡುಗಿತು, ಮೇಘ ಅಬ್ಬರಿಸಿತು, ಧರ್ಮ ಸಂಘರ್ಷ ಹೆಚ್ಚಾದೀತು : ಕೋಡಿಮಠದ ಶ್ರೀ title=
ಕೋಡಿಮಠದ ಶ್ರೀ

Kodihalli Swamiji  : ಮತಾಂಧತೆಯಿಂದಾಗಿ ಎಲ್ಲೆಡೆ ಧರ್ಮ ಸಂಘರ್ಷಗಳು ನಡೆಯುತ್ತಿದೆ. ಇದಕ್ಕೆಲ್ಲ ನೈಜ ಜ್ಞಾನದ ಕೊರತೆಯೇ ಕಾರಣ. ಭವಿಷ್ಯದಲ್ಲಿ ಇದು ಮತ್ತಷ್ಟು ಉಲ್ಬಣವಾಗುತ್ತದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದ ಭವಿಷ್ಯ ನುಡಿದಿದ್ದು, ಪ್ರಕೃತಿಯ ವಿಕೋಪದ ಎಚ್ಚರಿಕೆ ನೀಡಿದ್ದಾರೆ.  ಕಾರ್ತಿಕ ಮಾಸದಲ್ಲಿ ಕೆಡಕುಗಳು ನಡೆಯಲಿವೆ ಎಂದಿದ್ದಾರೆ. 

ಇದನ್ನೂ ಓದಿ:ಸಿದ್ದರಾಮಯ್ಯ, ಡಿಕೆಶಿಗೆ ಕ್ಷಮೆ ಕೇಳುವ ಸೌಜನ್ಯ ಇಲ್ಲ : ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಜಡೆ ಸಂಸ್ಥಾನ ಮಠಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಶ್ರೀಗಳು ಈ ಮಾತನ್ನು ಹೇಳಿದ್ದಾರೆ. ಇಲ್ಲಿನ ಕುಮಾರ ಕಂಪಿನ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಕಟ್ಟಡದ ಕಾಮಗಾರಿ ಗಮನಿಸಿದ ಶ್ರೀಗಳು ಬಳಿಕ ಕರ್ತೃ ಗದ್ದುಗೆಯ ದರ್ಶನ ಪಡೆದು ಮಾತನಾಡಿದರು. 

ಭೂಮಿ ನಡುಗಿತು, ಮೇಘ ಅಬ್ಬರಿಸಿತು, ನೀರು ತಲ್ಲಣಗೊಂಡಿತು. ರಾಜ್ಯದ ಜನರಲ್ಲಿ ಆತಂಕ ಹೆಚ್ಚಳ ಮಾಡಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಧರ್ಮ ಸಂಘರ್ಷಗಳು ನಡೆಯುತ್ತಿವೆ. ಇದಕ್ಕೆ ಕಾರಣ ಜ್ಞಾನದ ಕೊರತೆ. ಈ ಜ್ಞಾನದ ಕೊರತೆಯಿಂದಾಗಿ ದೇಶದಲ್ಲಿ ಅಶಾಂತಿ ನಿರ್ಮಾಣವಾಗುತ್ತಿದೆ. ಶುಭಕೃತನಾಮ ಸಂವತ್ಸರ ಈ ವರ್ಷ ಅಶುಭ ಉಂಟು ಮಾಡುತ್ತದೆ ಎಂದು ಹೇಳಿದರು. ಈ ವೇಳೆ ದೇಶದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷಗಳಿಗೆ ಜ್ಞಾನದ ಕೊರತೆ ಮುಖ್ಯ ಕಾರಣವಾಗಿದೆ. ಇದರಿಂದ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.

ಇದನ್ನೂ ಓದಿ: Rajinikanth as Governor: ರಾಜ್ಯಪಾಲರಾಗಿ ನೇಮಕವಾಗಲಿದ್ದಾರಾ ರಜನಿಕಾಂತ್‌?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News