ಬೆಂಗಳೂರು : ಕೊಳ್ಳೇಗಾಲದ ಶಾಸಕ ಎನ್. ಮಹೇಶ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ(BS Yediyurappa) ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ.
ಇದನ್ನೂ ಓದಿ : ಮೇಕೆದಾಟು ಯೋಜನೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಬಸವರಾಜ್ ಬೊಮ್ಮಾಯಿ
ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್(Nalin Kumar Kateel) ಅವರು ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಹಾಗೂ ಅವರ ಅಭಿಮಾನಿಗಳನ್ನು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಕೊಳ್ಳೆಗಾಲ ಶಾಸಕ ಶ್ರೀ ಎನ್. ಮಹೇಶ್ ಹಾಗೂ ಅವರ ಅಭಿಮಾನಿಗಳನ್ನು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai, ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP, ಸಚಿವರು, ಶಾಸಕರು, ಪ್ರಮುಖರು ಉಪಸ್ಥಿತರಿದ್ದರು. pic.twitter.com/JjtneAqezw
— BJP Karnataka (@BJP4Karnataka) August 5, 2021
ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವರು, ಶಾಸಕರು, ಪ್ರಮುಖರು ಉಪಸ್ಥಿತರಿದ್ದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ನಡೆದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಬಿಜೆಪಿ ಸೇರ್ಪಡೆಯಾದರು.
ಇದನ್ನೂ ಓದಿ : BIG NEWS: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್, ರೋಷನ್ ಬೇಗ್ ಗೆ ಇಡಿ ಶಾಕ್..!
ಈ ಕುರಿತು ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರ್ಕಾರ ಈಡೇರಿಸಲಿದೆ. ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆ ಇರುವ ಸಾಮಾಜಿಕ ನೆಲೆಗಟ್ಟು ಸ್ಥಾಪನೆ ಆಗಲಿದೆ ಎಂದರು.
ಮಹೇಶ್(N Mahesh) ಅವರು ಪಕ್ಷದ ಜೊತೆ ಮತ್ತು ಯಡಿಯೂರಪ್ಪ ಅವರ ಜೊತೆಗೆ ಹೊಂದಿರುವ ಸಂಬಂಧ ಮತ್ತು ಅನುಭವ ಇವತ್ತು ಅವರ ಈ ನಿರ್ಣಯಕ್ಕೆ ಪೂರಕವಾಗಿದೆ. ಅವರನ್ನು ಪಕ್ಷಕ್ಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.
ಇದನ್ನೂ ಓದಿ : BIG NEWS: ಬೊಮ್ಮಾಯಿ ಕ್ಯಾಬಿನೆಟ್ ಅಸ್ತಿತ್ವಕ್ಕೆ, ನೂತನ ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ…
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ, ಎನ್.ಮಹೇಶ್ ಅವರ ಸೇರ್ಪಡೆಯ ಶುಭ ಕ್ಷಣ ಈಗ ಬಂದಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುವುದರ ಮುನ್ಸೂಚನೆ ಇದಾಗಿದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ