DK Shivakumar : 'ಜನರ ಜೀವದ ಜತೆ ಚೆಲ್ಲಾಟ‌ ಬಿಡಿ, ಇಲ್ಲವೇ ಅಧಿಕಾರ ಬಿಟ್ಟು ಇಳಿಯಿರಿ ಕೆಳಗೆ'

ನನಗೆ ಬಂದಿರುವ ಮಾಹಿತಿ ಕೆಲವು ಸಚಿವರು 14-15 ಮಠಗಳಿಗೆ ಭೇಟಿ ನೀಡಿದ್ದಾರೆ

Last Updated : Jun 7, 2021, 06:06 PM IST
  • ಜನ ಕೊಟ್ಟಿರುವ ಅಧಿಕಾರವನ್ನು ಸಾಧ್ಯವಾದರೆ ನಡೆಸಲಿ, ಇಲ್ಲವೇ ಕೆಳಗಿಳಿಯಿರಿ
  • ನನಗೆ ಬಂದಿರುವ ಮಾಹಿತಿ ಕೆಲವು ಸಚಿವರು 14-15 ಮಠಗಳಿಗೆ ಭೇಟಿ ನೀಡಿದ್ದಾರೆ
  • ನನಗೆ ನಮ್ಮ ಕಾರ್ಯಕರ್ತರೇ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ
DK Shivakumar : 'ಜನರ ಜೀವದ ಜತೆ ಚೆಲ್ಲಾಟ‌ ಬಿಡಿ, ಇಲ್ಲವೇ ಅಧಿಕಾರ ಬಿಟ್ಟು ಇಳಿಯಿರಿ ಕೆಳಗೆ' title=

ಬೆಂಗಳೂರು : ಜನಸಾಮಾನ್ಯರು ಸಾಯುತ್ತಿರುವಾಗ ಬಿಜೆಪಿ ನಾಯಕರು ಅಧಿಕಾರದ ಆಸೆಗೆ ಚೆಲ್ಲಾಟವಾಡುತ್ತಿದ್ದಾರೆ. ಜನ ಕೊಟ್ಟಿರುವ ಅಧಿಕಾರವನ್ನು ಸಾಧ್ಯವಾದರೆ ನಡೆಸಲಿ, ಇಲ್ಲವೇ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಕೆಳಗಿಳಿಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ  ಮಾಧ್ಯಮಗಳ ಜೊತೆಮಾತನಾಡಿದ ಡಿಕೆ ಶಿವಕುಮಾರ್(DK Shivakumar), ನನಗೆ ಬಂದಿರುವ ಮಾಹಿತಿ ಪ್ರಕಾರ ಕೆಲವು ಸಚಿವರು 14-15 ಮಠಗಳಿಗೆ ಭೇಟಿ ನೀಡಿದ್ದಾರೆ. ಯಾವ ಸಚಿವರು ಯಾವ ಮಠಕ್ಕೆ ಬಂದಿದ್ದಾರೆ, ಯಾವ ಸಚಿವರು ಲ್ಯಾಪ್ ಟಾಪ್ ಸಮೇತ ಬಂದಿದ್ದರು ಎಂದು ನನಗೆ ನಮ್ಮ ಕಾರ್ಯಕರ್ತರೇ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ ಎಂದರು.

ಇದನ್ನೂ ಓದಿ :Online Ration Card: ಈಗ ನೀವು ಮನೆಯಲ್ಲಿಯೇ ಕುಳಿತು ಪಡಿತರ ಚೀಟಿ ಪಡೆಯಬಹುದು, ಇಲ್ಲಿದೆ ಸುಲಭ ಮಾರ್ಗ

ನಾನು ಕೂಡ ಈ ಮಾಹಿತಿ ಪರಿಶೀಲಿಸಿದ್ದು, ಮಠದವರೇ ಅವರಿಗೆ ಬುದ್ಧಿವಾದ ಹೇಳಲಿ. ಯಾವ ಬುದ್ಧಿಮಾತು ಹೇಳಬೇಕು ಎಂಬುದು ಅವರಿಗೆ ಬಿಟ್ಟದ್ದು, ಅದನ್ನು ಹೇಳುವುದು ನನ್ನ ಕೆಲಸವಲ್ಲ. ಈ ಮಧ್ಯೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ(MP Renukacharya) ಅವರು 65 ಜನ ಶಾಸಕರು ಸಿಎಂ ಬೆಂಬಲ ಪತ್ರಕ್ಕೆ ಸಹಿ ಹಾಕಿರುವುದಾಗಿ ಹೇಳಿದ್ದಾರೆ. ಅವರಿಗೆ ಗೌರವ ಇರುವುದು ನಿಜವೇ ಆದರೆ ಆ ಶಾಸಕರ ಪಟ್ಟಿ ಬಿಡುಗಡೆ ಮಾಡಲಿ. ಅನಂತರ ನಾವು ಮುಂದಿನ ಪ್ರತಿಕ್ರಿಯೆ ನೀಡುತ್ತೇವೆ ಎಂದರು.

ಇದನ್ನೂ ಓದಿ :Siddaramaiah : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ ಸಿದ್ದರಾಮಯ್ಯ!

ಗ್ರಾಮೀಣಾಭಿವೃದ್ಧಿ ಸಚಿವರು ರಾಜ್ಯಪಾಲರಿಗೆ ಪತ್ರ ಬರೆದಿದ್ದನ್ನೂ ನಾವು ನೋಡಿದ್ದೇವೆ. ಮಠ(Matha)ಗಳಿಗೆ ಹೋಗಿದ್ದನ್ನೂ ನೋಡಿದ್ದೇವೆ, ಸಿಡಿ ವಿಚಾರ ನೋಡಿದ್ದೇವೆ. ಯಾರು ಯಾವ ಹೇಳಿಕೆ ಕೊಟ್ಟಿದ್ದಾರೆ, ಅದಕ್ಕೆ ಹೇಗೆ ಉಲ್ಟಾ ಹೊಡೆದಿದ್ದಾರೆ ಎಂಬುದನ್ನೂ ನೋಡಿದ್ದೇವೆ. ಇವರಿಗೆ ಚೆಲ್ಲಾಟ ಜನರಿಗೆ ಪ್ರಾಣ ಸಂಕಟ. ಇವರು ಜನರನ್ನು ರಕ್ಷಿಸುವ ಬದಲು, ಹೆಣಗಳ ಬೂದಿ ನೀಡುತ್ತಿದ್ದಾರೆ ಎಂದು ಬಿಎಸ್ ವೈ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ :Rain in Karnataka : ರಾಜ್ಯಕ್ಕೆ ಮುಂಗಾರು ಪ್ರವೇಶದಿಂದ ಕರಾವಳಿ, ಮಲೆನಾಡಿನಲ್ಲಿ ಇಂದು ಭಾರೀ ಮಳೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News