ಬೆಂಗಳೂರು: ಡಿಜೆ ಹಳ್ಳಿ ಕೆಜೆಹಳ್ಳಿ ಪ್ರಕರಣ ಕುರಿತು ತಮ್ಮ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಗೆ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಡಿಜೆಹಳ್ಳಿ-ಕೆಜೆಹಳ್ಳಿ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೇ ಡಿಕೆಶಿ(DK Shivakumar) ತಮಗೆ ಅನ್ಯಾಯ ಮಾಡುತ್ತಿದ್ದು, ಸಿದ್ದರಾಮಯ್ಯ ಜೊತೆಗೂಡಿ ದೆಹಲಿಯ ಹೈಕಮಾಂಡ್ ಗೆ ದೂರು ನೀಡುವುದಾಗಿ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದರು.
Ramesh Jarkiholi: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ CD ರಿಲೀಸ್..!
ಅಖಂಡ ಹೇಳಿಕೆಗಿಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಅಖಂಡ ಶ್ರೀನಿವಾಸ್ ಮೂರ್ತಿ(Akhanda Srinivas Murthy)ಯಾಗಿರಬಹುದು ಅಥವಾ ಪಕ್ಷದಲ್ಲಿ ಯಾರೇ ಇರಬಹುದು, ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕೇ ವಿನಃ ಬಹಿರಂಗವಾಗಿ ಚರ್ಚಿಸಬಾರದು. ಪಕ್ಷದ ಯಾವುದೇ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ನೀಡಿದರು.
DK Shivakumar: 'ಎಸ್.ಎಂ.ಕೃಷ್ಣ ರೀತಿ ಪಾಂಚಜನ್ಯ ಮೊಳಗಿಸಿ ಮತ್ತೆ ಕೈ ಅಧಿಕಾರಕ್ಕೆ'
ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್(Congress-JDS) ಮೈತ್ರಿ ವಿಚಾರವಾಗಿ ಎಐಸಿಸಿ ಮುಖಂಡ ಮಧು ಯಸ್ಕಿಗೌಡ್ ಮೈಸೂರಿಗೆ ಭೇಟಿ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆ ಏಕೆ ಮೇಯರ್ ಸ್ಥಾನ ಸಿಗಲಿಲ್ಲ ಎಂಬ ಬಗ್ಗೆ ಮಾಹಿತಿ ಪಡೆಯುತ್ತಾರೆ. ಮಧು ಯಸ್ಕಿಗೌಡ ನನ್ನನ್ನೂ ಸಹ ಭೇಟಿಯಾಗಿದ್ದಾರೆ. ಪಕ್ಷದಲ್ಲಿ ಯಾವುದೇ ಅಶಿಸ್ತನ್ನು ಸಹಿಸುವುದಿಲ್ಲ. ಇಲ್ಲಿ ಶಿಸ್ತು ಮುಖ್ಯ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
Dishaank App: ಈಗ ಕುಳಿತಲ್ಲೆ ಸಿಗುತ್ತೆ ಸೈಟಿನ ಸಮಸ್ತ ಮಾಹಿತಿ.! ಭೂಬಕಾಸುರರ ಮೋಸಕ್ಕೆ ಬ್ರೇಕ್..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.