KPSC : ಗ್ರೂಪ್ 'ಸಿ' ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ 70 ಗ್ರೂಪ್ 'ಸಿ' ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 

Written by - Zee Kannada News Desk | Last Updated : Mar 20, 2024, 07:38 PM IST
  • ಗ್ರೂಪ್ 'ಸಿ' ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
  • ಆಸಕ್ತರು 22/4/2024 ರಿಂದ 21/5/2024ರ ತನಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 33,450-62,600 ರೂ. ವೇತನ ನಿಗದಿ ಮಾಡಲಾಗಿದೆ.
  • ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
KPSC : ಗ್ರೂಪ್ 'ಸಿ' ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ title=

KPSC : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು 70 ಹುದ್ದೆಗಳನ್ನು ಭರ್ತಿ ಮಾಡಲಾಗುವ ಉದ್ದೇಶದಲ್ಲಿ ಕರ್ನಾಟಕ ಲೋಕಸೇವಾ ಆಯೋಗ 70 ಗ್ರೂಪ್ 'ಸಿ' ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.  

 ಆಸಕ್ತರು 22/4/2024 ರಿಂದ 21/5/2024ರ ತನಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 33,450-62,600 ರೂ. ವೇತನ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡುವ ಮೊದಲು ಎಲ್ಲಾ ವಿವರ ಓದಿಕೊಂಡು ತಮಗೆ ಅನ್ವಯವಾಗುವ ವಿವರಗಳನ್ನು ಮಾತ್ರ ಭರ್ತಿ ಮಾಡಬೇಕಿದೆ. 

ಒಮ್ಮೆ ಅರ್ಜಿ ಸಲ್ಲಿಕೆ ಮಾಡಿದ ಬಳಿಕ ಅರ್ಜಿಯಲ್ಲಿ ಮೀಸಲಾತಿ ಸೇರಿದಂತೆ ಯಾವುದೇ ವಿವರ ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಮನವಿಗಳನ್ನು ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಿದ್ಯಾರ್ಹತೆ: 
ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಮೂರು ವರ್ಷಗಳ ಅವಧಿಯ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯು ನೀಡುವ ಮೂರು ವರ್ಷಗಳ ಅವಧಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರಬೇಕು 
ಕಾನೂನಿನಿಂದ ಸ್ಥಾಪಿಸಲಾದ ವಿಶ್ವವಿದ್ಯಾಲಯದಿಂದ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಕಾನೂನಿನಿಂದ ಸ್ಥಾಪಿಸಲಾದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ. 
ಇಲಾಖೆಯ ಸ್ಪಷ್ಟೀಕರಣದನ್ವಯ ಕಾನೂನಾತ್ಮಕವಾಗಿ ಸ್ಥಾಪಿಸಲಾದ ವಿಶ್ವವಿದ್ಯಾಲಯದಿಂದ B.Tech (Automobile Engineering) or B.Tech (Mechanical Engineering) ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದು. 
ಗೇರ್ ಮತ್ತು ಲಘು ಮೋಟಾರು ವಾಹನಗಳೊಂದಿಗೆ ಮೋಟಾರ್ ಸೈಕಲ್ ಓಡಿಸಲು ಅಧಿಕಾರ ನೀಡುವ ಚಾಲನಾ ಪರವಾನಗಿಯನ್ನು ಹೊಂದಿರುವುದು.

ಇದನ್ನು ಓದಿ : 

ಇತರ ಮಾಹಿತಿ: ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಒಮ್ಮೆ ಶುಲ್ಕವನ್ನು ಪಾವತಿ ಮಾಡಿದ ಬಳಿಕ ಯಾವುದೇ ಕಾರಣಕ್ಕೂ ಅದನ್ನು ವಾಪಸ್ ನೀಡಲಾಗುವುದಿಲ್ಲ. ಆಯೋಗ ನಡೆಸುವ ಇತರ ಪರೀಕ್ಷೆ, ನೇಮಕಾತಿಗೆ ಹೊಂದಿಕೆ ಮಾಡಿಕೊಳ್ಳುವುದಿಲ್ಲ. ಅರ್ಜಿ ಶುಲ್ಕ ಪಾವತಿ ಮಾಡದಿದ್ದರೆ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ ಎಂದು ಸೂಚನೆ ನೀಡಲಾಗಿದೆ.

ಶುಲ್ಕ : 
ಸಾಮಾನ್ಯ ವರ್ಗದವರು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕರು 50 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಅಂಕಪಟ್ಟಿ, ಪ್ರಮಾಣ ಪತ್ರ, ಘಟಿಕೋತ್ಸವ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ನಿಗದಿಗಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.

ಇದನ್ನು ಓದಿ : 

ವಯೋಮಿತಿ:

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ವಿಭಾಗದಲ್ಲಿ NOTIFICATION FOR POST OF MOTOR VEHICLE INSPECTOR(RPC) ಅಧಿಸೂಚನೆ ನೋಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News