ಕರ್ನಾಟಕ ಲೋಕಸೇವಾ ಆಯೋಗ ಹೈದರಾಬಾದ್-ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 97 ಹುದ್ದೆಗಳಿದ್ದು, ಏಪ್ರಿಲ್ 29ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿ ,ಮೇ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ತಿಳಿಸಿದೆ.
ಕಿರಿಯ ಇಂಜಿನಿಯರ್, ನೀರು ಸರಬರಾಜುದಾರರು, ಸಹಾಯಕ ನೀರು ಸರಬರಾಜುದಾರರು, ಕಿರಿಯ ಆರೋಗ್ಯ ನಿರೀಕ್ಷಕರು, ಸಹಾಯಕ ಗ್ರಂಥಪಾಲಕ ಹುದ್ದೆಗಳಿದ್ದು, ಒಟ್ಟು 10 ಇಲಾಖೆಗಳು ಸೇರಿ 97 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಸಲು :
ಏಪ್ರಿಲ್ 29ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿ ,ಮೇ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಮತ್ತು ಅರ್ಜಿ ಶುಲ್ಕ ಪಾವತಿಸಲು ಮೇ 28 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಲು ಮೊದಲು ಅಧಿಸೂಚನೆಯಲ್ಲಿರುವ ಎಲ್ಲಾ ವಿವರಗಳನ್ನು ಓದಿಕೊಳ್ಳಬೇಕು ಎಂದು ತಿಳಿಸಲಾಗಿದೆ ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗಕ್ಕೆ 600 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ.ಗಳ ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ.
ವಯೋಮಿತಿ :
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದ್ದು, ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ಹೊಂದಿರಬೇಕು. \
ಇದನ್ನು ಓದಿ : ಚಂದನ್ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಿತ್ರೀಕರಣ ಮುಗಿಸಿಕೊಂಡು ಮಾಧ್ಯಮ ಮುಖಾಮುಖಿ!
ವೇತನ :
ಕಿರಿಯ ಇಂಜಿನಿಯರ್ ಹುದ್ದೆಗೆ 33,450-62,600 ರೂ.
ನೀರು ಸರಬರಾಜುದಾರರು ಹುದ್ದೆಗೆ 27,650-52,650 ರೂ.
ಸಹಾಯಕ ನೀರು ಸರಬರಾಜುದಾರ ಹುದ್ದೆಗೆ 21,400-42,000 ರೂ
ಕಿರಿಯ ಆರೋಗ್ಯ ನಿರೀಕ್ಷಕ ಹುದ್ದೆಗೆ 23,500-47,650 ರೂ
ಸಹಾಯಕ ಗ್ರಂಥಪಾಲಕ 30,350-58,250 ರೂ ನಿಗದಿ ಮಾಡಲಾಗಿದೆ.
ಈ ಅಧಿಸೂಚನೆಯು ಜಾರಿಯಾದ ಮೇಲೆ ಈ ಅಧಿಸೂಚನೆಯಲ್ಲಿ ನಮೂದಿಸಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಯಾವುದೇ ನಿಯಮಗಳು ಮತ್ತು ನಿರ್ದೇಶನಗಳನ್ನು ಜಾರಿ ಮಾಡಿದಲ್ಲಿ, ತಿದ್ದುಪಡಿ ಮಾಡಿದಲ್ಲಿ, ಪರಿಷ್ಕರಿಸಿದಲ್ಲಿ, ಅವುಗಳನ್ನು ನೇಮಕಾತಿ ಪ್ರಕ್ರಿಯೆಯ ಸಮುಚಿತ ಹಂತದಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.
ವಿಳಾಸ ಬದಲಾವಣೆ ಇದ್ದಲ್ಲಿ ಅಭ್ಯರ್ಥಿಗಳು ಲಿಖಿತ ಮನವಿಯ ಮೂಲಕ ಆಯೋಗದ ಗಮನಕ್ಕೆ ತರತಕ್ಕದ್ದು. ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ಆಯೋಗವು ಪ್ರಯತ್ನಿಸುವುದು, ಆದಾಗ್ಯು ಈ ವಿಚಾರದಲ್ಲಿ ಆಯೋಗವು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಈ ಬಗ್ಗೆ ಅಭ್ಯರ್ಥಿಗಳು ಎಚ್ಚರ ವಹಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು. 080-30574957/ 30574901 0821-2545956. 0831-2475345, 08472-227944, 08182-228099.
ಇದನ್ನು ಓದಿ : IPL 2024: ಬೆಂಗಳೂರು ವಿರುದ್ಧ ಪಂಜಾಬ್ ಸೆಣಸಾಟ: ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ವರದಿ ಹೀಗಿದೆ…!
ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಟ್ಯಾಬ್‌ನಲ್ಲಿ NOTIFICATION FOR VARIOUS GROUP-C(HK) POSTS WITH BELOW DEGREE QUALIFICATION IN VARIOUS DEPTS ಕ್ಲಿಕ್ ಮಾಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.