KPSC Recruitment 2023: ಕೆಪಿಎಸ್‍ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ 4 ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್‌ವರ್ಕ್ ಅಡ್ಮಿನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Written by - Puttaraj K Alur | Last Updated : Jul 30, 2023, 04:31 PM IST
  • ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಜೂನಿಯರ್ ಪ್ರೋಗ್ರಾಮರ್, ನೆಟ್‌ವರ್ಕ್ ಅಡ್ಮಿನ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಆಸಕ್ತ ಅಭ್ಯರ್ಥಿಗಳು ಜುಲೈ 31ರೊಳಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
KPSC Recruitment 2023: ಕೆಪಿಎಸ್‍ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ title=
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಪ್ರೋಗ್ರಾಮರ್, ನೆಟ್‌ವರ್ಕ್ ಅಡ್ಮಿನ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಜುಲೈ 31ರೊಳಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ: ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ 4 ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್‌ವರ್ಕ್ ಅಡ್ಮಿನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 4 ಹುದ್ದೆಗಳ ಪೈಕಿ ಜೂನಿಯರ್ ಪ್ರೋಗ್ರಾಮರ್ 1, ಡೇಟಾ ಬೇಸ್ ಅಡ್ಮಿನ್ 1, ನೆಟ್‌ವರ್ಕ್ ಅಡ್ಮಿನ್ 1 ಮತ್ತು ಹಾರ್ಡ್‌ವೇರ್ ಟೆಕ್ನಿಷಿಯನ್ 1 ಹುದ್ದೆಗಳಿವೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಇದನ್ನೂ ಓದಿ: 13 ಸಾವಿರ ಸಿಬ್ಬಂದಿ ನೇಮಕಕ್ಕೆ ಸರ್ಕಾರ ಸಜ್ಜು

ಶೈಕ್ಷಣಿಕ ಅರ್ಹತೆ:

ಜೂನಿಯರ್ ಪ್ರೋಗ್ರಾಮರ್: ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ  

ಡೇಟಾ ಬೇಸ್ ಅಡ್ಮಿನ್: ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ  

ನೆಟ್‌ವರ್ಕ್ ಅಡ್ಮಿನ್: ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್‌ನಲ್ಲಿ ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ  

ಹಾರ್ಡ್‌ವೇರ್ ಟೆಕ್ನಿಷಿಯನ್: ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್‌ನಲ್ಲಿ ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ 

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ.  

ಅರ್ಜಿ ಕಳುಹಿಸಬೇಕಾದ ವಿಳಾಸ: Sri Suralkar Vikas Kishor, Secretary, Karnataka Public Service Commission, Udyoga Soudha, Bengaluru - 560001.

ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿಗೆ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್ kpsc.kar.nic.inಗೆ ಭೇಟಿ ನೀಡಬಹುದು.

ಇದನ್ನೂ ಓದಿ: ಗಾರ್ಡನ್ ಸಿಟಿಯಲ್ಲಿ ಹೆಚ್ಚಾಯ್ತು ಸೈಬರ್ ಕ್ರೈಂ: 7 ವರ್ಷಗಳಲ್ಲಿ 50 ಸಾವಿರ ಕೇಸ್..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News