ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ 2 ಕುಟುಂಬದ ಅವಲಂಬಿತರಿಗೆ ತಲಾ 1 ಕೋಟಿ ರೂ. ಅಪಘಾತ ಪರಿಹಾರ ಚೆಕ್ ವಿತರಿಸಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವರೂ ಆಗಿರುವ KSRTC ಅಧ್ಯಕ್ಷ ರಾಮಲಿಂಗ ರೆಡ್ಡಿಯವರು ನಿಗಮದ ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಅವರ ಅವಲಂಭಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಯಡಿ 1 ಕೋಟಿ ರೂ. ಅಪಘಾತ ಪರಿಹಾರ ವಿಮೆಯ ಚೆಕ್ ಹಸ್ತಾಂತರ ಮಾಡಲಾಯಿತು.
ಬೆಂಗಳೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಇಬ್ಬರು ಚಾಲಕರ ಕುಟುಂಬಸ್ಥರಿಗೆ ಈ ಪರಿಹಾರದ ಚೆಕ್ ವಿತರಿಸಲಾಯಿತು. ಈ ಯೋಜನೆಯ ಜಾರಿಯ ನಂತರ KSRTC ಚಾಲನಾ ಸಿಬ್ಬಂದಿ ಜಿ.ವಿ.ಚಲಪತಿ (41) ಬೆಂಗಳೂರು ಕೇಂದ್ರೀಯ ವಿಭಾಗದ ನಿಗಮದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿದ್ದರು. 2023ರ ಜನವರಿ 29ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಅಫಘಾತ ಸಂಭವಿಸಿ ಮೃತಪಟ್ಟಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ: Shakti Yojana: 19 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣ, ₹461ಕೋಟಿ ದಾಟಿದ ಟಿಕೆಟ್ ಮೊತ್ತ!
ಜಿ.ವಿ.ಚಪತಿಯವರ ಕುಟುಂಬದವರಿಗೆ ವಿಮಾ ಪರಿಹಾರ 1 ಕೋಟಿ ರೂ. ಹೊರತುಪಡಿಸಿ, ನಿಗಮದ ವತಿಯಿಂದ 17.21 ರೂ. ಲಕ್ಷ ಪರಿಹಾರ ನೀಡಲಾಗಿದೆ. ಈ ಪೈಕಿ 12.71 ಲಕ್ಷ ರೂ. ಪರಿಹಾರವನ್ನು ಈಗಾಗಲೇ ವಿತರಿಸಲಾಗಿದೆ. ಬಾಕಿ 4.50 ಲಕ್ಷ ರೂ.ವನ್ನು ಮೃತ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದರೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ.
ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಎರಡು ಕುಟುಂಬದ ಅವಲಂಬಿತರಿಗೆ ತಲಾ ರೂ.1 ಕೋಟಿ ಅಪಘಾತ ಪರಿಹಾರ ಚೆಕ್ ವಿತರಣೆ. pic.twitter.com/a5AePQGzCC
— KSRTC (@KSRTC_Journeys) July 15, 2023
ಇನ್ನೂ ಹಾಸನ ವಿಭಾಗದ ನಿಗದಲ್ಲಿ 17 ವರ್ಷಗಳ ಸೇವೆ ಸಲ್ಲಿಸಿರುವ ಪಿ.ಎನ್.ನಾಗರಾಜು(52) 2023ರ ಫೆಬ್ರವರಿ 1ರಂದ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ್ದರು. ಮೃತರು ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆಗೆ ಜುಲೈ 19 ರಂದು ಚಾಲನೆ
ಪಿ.ಎನ್.ನಾಗರಾಜ ಕುಟುಂಬಸ್ಥರಿಗೆ ವಿಮಾ ಪರಿಹಾರವಾಗಿ 1 ಕೋಟಿ ರೂ. ಹೊರತುಪಡಿಸಿ, ನಿಗಮದ ವತಿಯಿಂದ 21.94 ಲಕ್ಷ ರೂ. ಪರಿಹಾರ ನೀಡಲಾಗಿದೆ. ಈ ಪೈಕಿ 16.19 ಲಕ್ಷ ರೂ.ವನ್ನು ಈಗಾಗಲೇ ವಿತರಿಸಲಾಗಿದ್ದು, ಬಾಕಿ 5.75 ಲಕ್ಷ ರೂ.ವನ್ನು ಸೂಕ್ತ ದಾಖಲಾತಿ ಸಲ್ಲಿಸಿದ ಬಳಿಕ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರವೇ ವಿತರಿಸಲಾಗುತ್ತದೆ.
ಏನಿದು ವಿಮಾನ ಯೋಜನೆ: KSRTC ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆಯಡಿ ತನ್ನ ಸಿಬ್ಬಂದಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ (on Duty and Off Duty)ಯನ್ನು ಜಾರಿಗೊಳಿಸಿದೆ. ಈ ಯೋಜನೆಯೊಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ 50 ಲಕ್ಷ ರೂ.ಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ವತಿಯಿಂದ ವಾರ್ಷಿಕ 885 ರೂ.ಗಳ ಪ್ರೀಮಿಯಂ(ನೌಕರರಿಂದ) ಪಾವತಿಯ ಮೇರೆಗೆ 50 ಲಕ್ಷ ರೂ.ಗಳ ಪರಿಹಾರ ನೀಡಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.