ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಗೆ ಕೆಎಸ್‌ಆರ್‌ಟಿಸಿ ಸಿದ್ಧತೆ!

ಕಳೆದ 8 ವರ್ಷಗಳಿಂದ ಬಸ್ ಪಾಸ್ ದರ ಏರಿಕೆಯಾಗಿಲ್ಲ ಎಂದು ಕೆಎಸ್‌ಆರ್‌ಟಿಸಿ ಮೂಲಗಳು ತಿಳಿಸಿವೆ.

Last Updated : Jun 14, 2019, 10:28 AM IST
ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಗೆ ಕೆಎಸ್‌ಆರ್‌ಟಿಸಿ ಸಿದ್ಧತೆ! title=

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಕೂಡ ಬಸ್ ಪಾಸ್ ದರವನ್ನು ಏರಿಸಲು ಸಿದ್ಧತೆ ನಡೆಸಿದೆ.

ಈ ಬಗ್ಗೆ ಕೆಎಸ್‌ಆರ್‌ಟಿಸಿ ಮೂಲಗಳಿಂದ ಮಾಹಿತಿ ಲಭಿಸಿದ್ದು, ಕಳೆದ 8 ವರ್ಷಗಳಿಂದ ಬಸ್ ಪಾಸ್ ದರ ಏರಿಕೆಯಾಗಿಲ್ಲ. ಹಾಗಾಗಿ ಕೆಎಸ್‌ಆರ್‌ಟಿಸಿಯಿಂದ ಇಟ್ಟಿದ್ದ ಬೇಡಿಕೆಗೆ ಸರ್ಕಾರದ ಅನುಮೋದನೆ ದೊರೆತಿದ್ದು, ಈ ವರ್ಷ ಬಸ್ ಪಾಸ್ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಯಿಂದ ಬಸ್ ಪಾಸ್ ದರ ಏರಿಕೆಗೆ ಸಿದ್ಧತೆ ನಡೆದಿದ್ದು, ವಿದ್ಯಾರ್ಥಿಗಳ ಬಸ್ ಪಾಸ್ ದರವನ್ನು ಕನಿಷ್ಠ 100 ರಿಂದ 200 ರೂ. ಏರಿಸಲು ಯೋಜಿಸಲಾಗುತ್ತಿದೆ. ಮೂಲಗಳ ಪ್ರಕಾರ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಲಾಗಿದೆ.

Trending News