ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

Dk Shivakumar: “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.  

Written by - Savita M B | Last Updated : Jul 5, 2024, 07:05 PM IST
  • ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ
  • ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ
ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ title=

DK Shivakumar on HD Kumarswamy: ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರ ನೀಡಿದ ಶಿವಕುಮಾರ್ ಅವರು, “ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ-ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ, ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ: ಆರ್‌.ಅಶೋಕ

ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ” ಎಂದು ತಿರುಗೇಟು ನೀಡಿದರು.

ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ” ಎಂದರು.

ಇದನ್ನೂ ಓದಿ-ಉಡುಪಿಯ ಅಮಾವಾಸ್ಯೆ ಬೈಲು ರತ್ತಾಡಿ ಗ್ರಾಮವನ್ನ ಅಪೋಷಣ ತೆಗೆದುಕೊಂಡ ಸುಂಟರಗಾಳಿ :ಒಂದು ಕೋಟಿಗೂ ಅಧಿಕ ನಷ್ಟ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News