ಶೆಟ್ಟರ್ ಸ್ಥಿತಿ ಬಂದ ಪುಟ್ಟ.. ಹೋದ ಪುಟ್ಟ ಅನ್ನೋ ಹಾಗಾಯಿತು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 

ಶೆಟ್ಟರ್ ಅವರಿಗಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದರು. ಆದ್ರೆ ಅವರು ಯಾಕೆ ಇಂಥ ನಿರ್ಧಾರ ಕೈಗೊಂಡರು ಅಂತ ಗೊತ್ತಿಲ್ಲ. ಇದು ಬಂದ ಪುಟ್ಟ, ಹೋದ್ಯ ಪುಟ್ಟ ಅನ್ನೋ ಹಾಗೆ ಆಯಿತು ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Written by - Krishna N K | Last Updated : Jan 26, 2024, 12:14 PM IST
  • ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸ್ಥಾನಮಾನ ನೀಡಿತ್ತು.
  • ಸೋತರೂ ಅವರನ್ನ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು.
  • ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ.
ಶೆಟ್ಟರ್ ಸ್ಥಿತಿ ಬಂದ ಪುಟ್ಟ.. ಹೋದ ಪುಟ್ಟ ಅನ್ನೋ ಹಾಗಾಯಿತು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  title=

ಉಡುಪಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸ್ಥಾನಮಾನ ನೀಡಿತ್ತು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ 35 ಸಾವಿರ ಮತಗಳಿಂದ ಸೋತರೂ ಅವರನ್ನ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಜಗದೀಶ್ ಶೆಟ್ಟರ್ ಅವರು ವಾಪಸ್ ಬಿಜೆಪಿಗೆ ಹೋಗಿದ್ದು ನೋಡಿ ದಿಗ್ಭ್ರಮೆ ಉಂಟಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಇಲ್ಲಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆದ 75ನೇ‌‌ ಗಣರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ಶೆಟ್ಟರ್ ಅವರಿಗಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದರು. ಶೆಟ್ಟರ್ ಯಾಕೆ ಇಂಥ ನಿರ್ಧಾರ ಕೈಗೊಂಡರು ಅಂತ ಗೊತ್ತಿಲ್ಲ ಎಂದರು. ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ಬಿಡಲು ಕಾರಣ, ಯಾಕಾಗಿ ಬಿಟ್ಟರು ಅನ್ನೋದಕ್ಕೆ ಅವರೇ ಉತ್ತರಿಸಬೇಕು. ರಾಜಕಾರಣದಲ್ಲಿ ಈ ರೀತಿ ಆಗಬಾರದು. ಇದು ಬಂದ ಪುಟ್ಟ, ಹೋದ್ಯ ಪುಟ್ಟ ಅನ್ನೋ ಹಾಗೆ ಆಯಿತು ಎಂದರು. 

ಇದನ್ನೂ ಓದಿ: ಜಗದೀಶ್ ಶೆಟ್ಟರ್ ಏನೇನು ಬೇಡಿಕೆ ಇಟ್ಟಿದ್ದಾರೋ ಗೊತ್ತಿಲ್ಲ: ಶಾಸಕ ಮಹೇಶ್ ಟೆಂಗಿನಕಾಯಿ

ಲಕ್ಷ್ಮಣ್ ಸವದಿ ಪಕ್ಷದಲ್ಲೆ ಉಳಿವರು : ಬೆಳಗಾವಿ ಜಿಲ್ಲೆಯ ಶಾಸಕ ಲಕ್ಷ್ಮಣ್ ಸವದಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ನಮ್ಮ ಪಕ್ಷದಲ್ಲೆ ಮುಂದುವರಿಯುತ್ತಾರೆ ಎಂದು‌‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಸವದಿ ಅವರ ಸ್ವಾಭಿಮಾನಕ್ಕೆ ಬಿಜೆಪಿಯಲ್ಲಿ ಧಕ್ಕೆಯಾಗಿದ್ದಕ್ಕೆ ಅವರು ಕಾಂಗ್ರೆಸ್ ಸೇರಿದ್ದಾರೆ. ಅವರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದರು. 

ಜನರಿಗೆ ನೆಮ್ಮದಿ ತಂದ ಗ್ಯಾರಂಟಿ ಯೋಜನೆಗಳು : ರಾಜ್ಯದಲ್ಲಿ ಬರಗಾಲ ಆವರಿಸಿದೆ. ಇದರ ನಡುವೆಯೂ ಜನ ಸಾಮಾನ್ಯರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಇದಕ್ಕೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇದುವರೆಗೂ 100 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಅಧ್ಯಯನ ಮಾಡಿ, ಮಹಿಳೆಯರ ಸಬಲೀಕರಣದ ಬಗ್ಗೆ ತಿಳಿದು ಕೊಳ್ಳಲಾಗುವುದು ಎಂದರು.

ಸೂಕ್ತ ಅಭ್ಯರ್ಥಿಗಳು ಕಣಕ್ಕೆ : ಮುಂಬರುವ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಫೆಬ್ರವರಿ 15ರ ವೇಳೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮತ್ತೊಂದು ಹಂತದ ಚರ್ಚೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News