ಆಗುಂಬೆ ಘಾಟ್'ನಲ್ಲಿ ಭೂ ಕುಸಿತ; ವಾಹನ ಸಂಚಾರ ನಿಷೇಧ

ಭಾರಿ ಮಳೆಯಿಂದಾಗಿ ಆಗುಂಬೆ ಘಾಟ್ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿದೆ.

Last Updated : Jun 28, 2018, 08:47 PM IST
ಆಗುಂಬೆ ಘಾಟ್'ನಲ್ಲಿ ಭೂ ಕುಸಿತ; ವಾಹನ ಸಂಚಾರ ನಿಷೇಧ title=
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ರಾಜ್ಯದ ಮಲೆನಾಡಿನ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗುಂಬೆ ಘಾಟ್ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿದೆ.

ಶಿವಮೊಗ್ಗ ಮತ್ತು ಉಡುಪಿಯನ್ನು ಸಂಪರ್ಕಿಸುವ ಮಾರ್ಗದ ಆಗುಂಬೆ ಘಾಟ್ 7ನೇ ತಿರುವಿನಲ್ಲಿ ಗುರುವಾರ ಬೆಳಿಗ್ಗೆ ಭೂ ಕುಸಿತ ಉಂಟಾದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಘಟನಾ ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. 

ಕಳೆದ ಹಲವು ದಿನಗಳ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ನಲ್ಲಿ ಭೂ ಕುಸಿತ ಉಂಟಾಗಿತ್ತು. ಈ ಸಂದರ್ಭದಲ್ಲಿ 500ಕ್ಕೂ ಹೆಚ್ಚು ವಾಹನಗಳು ಮತ್ತು ಪ್ರಯಾಣಿಕರು ಮುಂದಕ್ಕೂ ಹೋಗಲಾಗದೆ, ಹಿಂದಕ್ಕೂ ತೆರಳಲಾಗದೆ ರಸ್ತೆಯಲ್ಲಿ 12 ಗಂಟೆಗಳಿಗೂ ಹೆಚ್ಚು ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

Trending News