ನಾಳೆ ಉತ್ತರ ಕರ್ನಾಟಕ ಬಂದ್ ಹಿನ್ನೆಲೆ : ಕಾನೂನು ಪರೀಕ್ಷೆ ಮುಂದೂಡಿಕೆ

ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ಡಿ. 31ರಂದು ಭಾನುವಾರ ನಡೆಸಲು ಆದೇಶ ನೀಡಲಾಗಿದೆ. ಮೌಲ್ಯಮಾಪನ ಕುಲಸಚಿವ ಜಿ.ಬಿ.ಪಾಟೀಲ್ ಈ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.‌

Last Updated : Dec 26, 2017, 06:47 PM IST
  • ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ.
  • ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ಡಿ.31ರ ಭಾನುವಾರ ನಡೆಸಲು ಆದೇಶ.
  • ಹುಬ್ಬಳ್ಳಿ- ಧಾರವಾಡ, ಗದಗ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಸಂಪೂರ್ಣ ಬಂದ್ ಆಚರಣೆ.
  • ಸಂಘಟನೆಗಳು ಶಾಂತಿಯುತವಾಗಿ, ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದೆ ಬಂದ್ ಆಚರಿಸುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಮನವಿ.
ನಾಳೆ ಉತ್ತರ ಕರ್ನಾಟಕ ಬಂದ್ ಹಿನ್ನೆಲೆ : ಕಾನೂನು ಪರೀಕ್ಷೆ ಮುಂದೂಡಿಕೆ title=

ಬೆಂಗಳೂರು: ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನಾಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾಳೆ(ಡಿ.27) ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಿ ಆದೇಶ ನೀಡಲಾಗಿದೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ಡಿ.31ರ ಭಾನುವಾರ ನಡೆಸಲು ವಿಶ್ವವಿದ್ಯಾನಿಲಯ ಮೌಲ್ಯಮಾಪನ ಕುಲಸಚಿವ ಜಿ.ಬಿ.ಪಾಟೀಲ್ ಈ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.‌

ಹುಬ್ಬಳ್ಳಿ- ಧಾರವಾಡ, ಗದಗ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತದೆ. ಅಕ್ಕಪಕ್ಕದ ಜಿಲ್ಲೆಗಳಲ್ಲಿ ಬಂದ್ ತೀವ್ರಗೊಳ್ಳುವ ನಿರೀಕ್ಷೆಯಿದೆ. ಬುಧವಾರದಂದು ಆಸ್ಪತ್ರೆ, ಮೆಡಿಕಲ್ ಸ್ಟೋರ್, ತುರ್ತು ಸೇವೆ ಹೊರತುಪಡಿಸಿ ಸಂಪೂರ್ಣ ಬಂದ್ ಆಚರಿಸಲಾಗುತ್ತದೆ.

ಬಂದ್ ಕರೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಭಾಗದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಿಗಿ ಪೋಲಿಸ್ ಬಂದೊಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸಂಘಟನೆಗಳು ಶಾಂತಿಯುತವಾಗಿ, ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದೆ ಬಂದ್ ಆಚರಿಸುವಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಜನತೆಯಲ್ಲಿ ಮನವಿ ಮಾಡಿದ್ದಾರೆ. 

Trending News