ಕೊರೊನಾ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

Home Minister Araga Gnanendra: ಕೊರೊನಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದರು. 

Edited by - Zee Kannada News Desk | Last Updated : Jan 6, 2022, 12:15 PM IST
  • ರಾಜ್ಯ ಸರ್ಕಾರ ವಿಧಿಸಿದ ನಿರ್ಬಂಧಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗುವುದು
  • ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು
  • ಗೃಹ ಸಚಿವ ಆರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ
ಕೊರೊನಾ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ  title=

ಬೆಂಗಳೂರು:  ಸಾರ್ವಜನಿಕ ಹಿತಾಸಕ್ತಿಗಾಗಿ ರಾಜ್ಯ ಸರ್ಕಾರ ವಿಧಿಸಿದ ನಿರ್ಬಂಧಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗುವುದು. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ (Legal action against corona rule violators) ಜರಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Gnanendra) ಖಡಕ್ ಎಚ್ಚರಿಕೆ ನೀಡಿದರು. 

ಕಾಂಗ್ರೆಸ್ ನಾಯಕರ (Congress Leaders) ಉದ್ದೇಶಿತ ಪಾದಯಾತ್ರೆ ಕಾರ್ಯಕ್ರಮದ ಬಗ್ಗೆ ಮರು ಆಲೋಚಿಸಬೇಕು. ಅಲ್ಲದೆ ಮುಂದಕ್ಕೆ ಹಾಕುವುದು ಒಳಿತು ಎಂದು  ಹೇಳಿದರು. 

ರಾಜ್ಯದಲ್ಲಿ ಅದರಲ್ಲಿಯೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ, ಕೊವಿಡ್ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಉಲ್ಬಣ ಗೊಳ್ಳುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದರು.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಿರಿಯರು. ತಮಗಿರುವ ಅನುಭವ ಹಾಗೂ ಹಿರಿತನದ ಹಿನ್ನೆಲೆಯಲ್ಲಿ ಸರ್ಕಾರದ ಕಾಳಜಿಯನ್ನು ಅರ್ಥೈಸಿ ಕೊಳ್ಳಬೇಕು ಎಂದು ಮನವಿ ಮಾಡಿದರು.

ಕೊರೊನಾ ಭೀತಿಯ (Corona) ಹಿನ್ನೆಲೆ ನಗರದಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮೂರು ದಿನಗಳ ಪಕ್ಷದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕಾಂಗ್ರೆಸ್ ಸಹ ತಮ್ಮ ಕಾರ್ಯಕ್ರಮ ಮುಂದೂಡಬೇಕು. ಸೋಂಕು ತಡೆಗಟ್ಟುವ ಸಲುವಾಗಿ ಸರ್ಕಾರದ ಜೊತೆಗೆ ಕೈ ಜೋಡಿಸಿ ಸಹಕರಿಸಬೇಕು ಎಂಡು ಹೇಳಿದರು. 

ಇದನ್ನೂ ಓದಿ: Corona ಆರ್ಭಟ: ಭಾರತದಲ್ಲಿ 90,000 ಹೊಸ ಕೋವಿಡ್ ಪ್ರಕರಣಗಳು, 56.5% ಹೆಚ್ಚಳ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News