ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮಾಡಿರುವ ಆರೋಪಗಳಿಗೆ ಈಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಲೀಗಲ್ ನೋಟಿಸ್ ನ್ನು ಜಾರಿ ಮಾಡಿದ್ದಾರೆ.
ಇದನ್ನೂ ಓದಿ: ಮತ್ತಷ್ಟು ಜನಸ್ನೇಹಿಯಾದ್ರು ಆಗ್ನೇಯ ಪೊಲೀಸ್ : ಕ್ಯೂಆರ್ ಕೋಡ್ ಮೂಲಕ ನೇರವಾಗಿ ಅಧಿಕಾರಿಗಳ ಸಂಪರ್ಕ
ಹಿರಿಯ ವಕೀಲ ಸಿ.ವಿ ನಾಗೇಶ್ ಅವರ ಮೂಲಕ ಸಿಂಧೂರಿ ಒಟ್ಟು 21 ಅಂಶಗಳನ್ನ ಮುಂದಿಟ್ಟು ಲೀಗಲ್ ನೊಟೀಸ್ ಹೊರಡಿಸಿದ್ದು, ಒಂದು ವೇಳೆ ಇವುಗಳನ್ನು ಪಾಲಿಸದಿದ್ದಲ್ಲಿ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: Crime News: ಬಡ್ಡಿ ಹಣ ಕೊಡಲಿಲ್ಲವೆಂದು ರಸ್ತೆಯಲ್ಲಿಯೇ ವ್ಯಕ್ತಿಗೆ ಥಳಿತ!
ಡಿ ರೂಪಾ ಅವರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಮಾಡಿದ್ದ ಆರೋಪಗಳ ಹಿನ್ನೆಲೆಯಲ್ಲಿ ಈಗ ರೋಹಿಣಿ ಸಿಂಧೂರಿ ಅವರ ನೋಟಿಸ್ ಬಂದಿದೆ. ಅಷ್ಟೇ ಅಲ್ಲದೆ ಈ ನೋಟಿಸ್ ತಲುಪಿದ 24 ಗಂಟೆಗಳ ಒಳಗೆ ಡಿ ರೂಪಾ ಅವರು ಫೇಸ್ಬುಕ್ ನಲ್ಲಿ ಬಹಿರಂಗವಾಗಿ ಕ್ಷಮಾಪಣೆ ಕೋರಬೇಕು.ಇಲ್ಲವಾದಲ್ಲಿ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.