MUDA Scam: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಮೈಸೂರು ನಗರಾಭಿವೃದ್ಧಿ (MUDA)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಹ ಸಿದ್ದರಾಮಯ್ಯರ ವಿರುದ್ಧ FIR ದಾಖಲಿಸಿ ತನಿಖೆ ನಡೆಸುವಂತೆ ಮೈಸೂರಿನ ಲೋಕಾಯುಕ್ತ ಎಸ್ಪಿಗೆ ಆದೇಶ ನೀಡಿದೆ. ಹಗರಣ ಸಂಬಂಧ CRPC ಸೆ.156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಇದನ್ನೂ ಓದಿ: ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ : ಕೇಂದ್ರ ಸಚಿವ ವಿ. ಸೋಮಣ್ಣ
ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬಿದ್ದಿದೆ.
ಇದರಿಂದ ಸಿಎಂ ಸಿದ್ದರಾಮಯ್ಯನವರಿಗೆ ಇದೀಗ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಪ್ರಕರಣ ಸಂಬಂಧ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಪಕ್ಷಕ್ಕೆ ಮುಜುಗರ ಉಂಟಾಗುವ ಪರಿಸ್ಥಿತಿ ಇರುವುದರಿಂದ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ಎಷ್ಟೇ ಕಳಂಕ ರಹಿತವಾದ್ರೂ ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಮೋದಿಯವರೇ ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ಬಿಜೆಪಿ ನಾಯಕನನ್ನು ತೋರಿಸಿ : ಸಿಎಂ ಸವಾಲ್
ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ಇದೆ. ಬಿಜೆಪಿಯವರು ಸಿದ್ದರಾಮಯ್ಯರ ವಿಚಾರದಲ್ಲಿ ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತಿದ್ದಾರೆ. ನಾನು 50 ವರ್ಷದ ರಾಜಕೀಯ ಜೀವನದಲ್ಲಿ ಅನೇಕ ಸಿಎಂಗಳನ್ನು ನೋಡಿದ್ದೇನೆ. ವಿಪಕ್ಷದವರ ಕುತಂತ್ರದಿಂದ ಸುಳ್ಳು ಆಪಾದನೆ ಸಿದ್ದರಾಮಯ್ಯರ ಮೇಲೆ ಬಂದಿದೆ. ಸಿದ್ದರಾಮಯ್ಯ ಕಪ್ಪುಚುಕ್ಕೆ ಇಲ್ಲದಂತೆ ಕೆಲಸ ಮಾಡಿದ ನಂಬರ್ 1 ಸಿಎಂ ಎಂದು ಕೆಬಿ ಕೋಳಿವಾಡ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಜೊತೆಗೆ 136 ಶಾಸಕರು ಇದ್ದಾರೆ. ತನಿಖೆಯಲ್ಲಿ ನಿಷ್ಕಳಂಕರಾಗಿ ಹೊರಬಂದ ಬಳಿಕ ಅವರು ಮತ್ತೆ ಸಿಎಂ ಆಗಲಿ. ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೀಡು ಮಾಡುವ ಕುತಂತ್ರವನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡ್ತಿದ್ದಾರೆ ಎಂದು ಇದೇ ವೇಳೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.