ಕೊರೋನಾದಿಂದ ಆರ್ಥಿಕ ಸಂಕಷ್ಟದಲ್ಲಿ ‘ಬಿಎಸ್ ವೈ ಸರ್ಕಾರ'

ತೆರಿಗೆಗಳ ವಸೂಲಿ ಸರಿಯಾಗಿ ಆಗಿಲ್ಲ. ಕಳೆದ ವರ್ಷಕ್ಕಿಂತ ತೆರಿಗೆ ಸಂಗ್ರಹ ಕಡಿಮೆಯಾಗಿದೆ. ಜಿಎಸ್‌ಟಿ ಸಹ ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಹೀಗಿರುವಾಗ ಯಾವ ಮೂಲದಿಂದ ಆದಾಯ ಕ್ರೋಢೀಕರಣ ಮಾಡಲಾಗುತ್ತದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು

Last Updated : Dec 10, 2020, 07:59 PM IST
  • ಕೊರೋನಾ‌ ಮತ್ತು ಪ್ರವಾಹ ಸೇರಿದಂತೆ ಯೋಜನೇತರ ಕಾರ್ಯಗಳಿಗಾಗಿ ವೆಚ್ಚ ಮಾಡಲಾದ 3320.40 ಕೋಟಿ ರೂ. ಮೊತ್ತದ ಎರಡನೇ ಕಂತಿನ ಪೂರಕ ಅಂದಾಜಿಗೆ ಸದನದಲ್ಲಿ ಧ್ವನಿ ಮತ ಒಪ್ಪಿಗೆ
  • ತೆರಿಗೆಗಳ ವಸೂಲಿ ಸರಿಯಾಗಿ ಆಗಿಲ್ಲ. ಕಳೆದ ವರ್ಷಕ್ಕಿಂತ ತೆರಿಗೆ ಸಂಗ್ರಹ ಕಡಿಮೆಯಾಗಿದೆ. ಜಿಎಸ್‌ಟಿ ಸಹ ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಹೀಗಿರುವಾಗ ಯಾವ ಮೂಲದಿಂದ ಆದಾಯ ಕ್ರೋಢೀಕರಣ ಮಾಡಲಾಗುತ್ತದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು
  • ಬಿಎಂಟಿಸಿ ನೌಕರರ ವೇತನಕ್ಕಾಗಿ 168 ಕೋಟಿ ರೂ., ಕೋವಿಡ್‌ ನಿಯಂತ್ರಣ ಸಂಬಂಧ ತುರ್ತು ಔಷಧಿ, ಆರ್‌ಟಿಪಿಸಿಆರ್‌ ಕಿಟ್ಸ್‌, ಎಕ್ಸ್‌ ಟ್ರಾಕ್ಸನ್‌ ಕಿಟ್‌ ಖರೀದಿಗೆ ಸಂಬಂಧಿಸಿದಂತೆ 170.72 ಕೋಟಿ ರೂ. ಮತ್ತು ವೆಂಟಿಲೇಟರ್‌, ಪಲ್ಸ್‌ ಆಕ್ಸಿಮೀಟರ್‌ ಖರೀದಿಗೆ 34.68 ಕೋಟಿ ರೂ. ವೆಚ್ಚ
ಕೊರೋನಾದಿಂದ ಆರ್ಥಿಕ ಸಂಕಷ್ಟದಲ್ಲಿ ‘ಬಿಎಸ್ ವೈ ಸರ್ಕಾರ' title=

ಬೆಂಗಳೂರು: ಲಾಕ್‌ಡೌನ್‌ ಜಾರಿಯಿಂದಾಗಿ ರಾಜ್ಯವು ಆರ್ಥಿಕ ಸಂಕಷ್ಟಎದುರಿಸಿದ್ದು, ರಾಜಸ್ವ ಸಂಗ್ರಹದಲ್ಲಿ ಮತ್ತು ಜಿಎಸ್‌ಟಿ ಕ್ರೋಢೀಕರಣ ಮಾಡುವಲ್ಲಿ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗಿಲ್ಲ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಕೊರೋನಾ(Corona)‌ ಮತ್ತು ಪ್ರವಾಹ ಸೇರಿದಂತೆ ಯೋಜನೇತರ ಕಾರ್ಯಗಳಿಗಾಗಿ ವೆಚ್ಚ ಮಾಡಲಾದ 3320.40 ಕೋಟಿ ರೂ. ಮೊತ್ತದ ಎರಡನೇ ಕಂತಿನ ಪೂರಕ ಅಂದಾಜಿಗೆ ಸದನದಲ್ಲಿ ಧ್ವನಿ ಮತದ ಮೂಲಕ ಒಪ್ಪಿಗೆ ನೀಡಿದೆ.

Tejasvi Surya: ಯುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಯ್ತು ಎಫ್‌ಐಆರ್!

ಬುಧವಾರ ಪೂರಕ ಅಂದಾಜಿಗೆ ಅನುಮೋದನೆ ನೀಡುವಂತೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಸದನವನ್ನು ಕೋರಿದರು. ಪೂರಕ ಅಂದಾಜಿನ ಮೇಲೆ ಚರ್ಚೆ ನಡೆದ ಬಳಿಕ ಸದನವು ಧ್ವನಿ ಮತದ ಮೂಲಕ ಅಂಗೀಕರಿಸಿತು.

ಗ್ರಾ. ಪಂ. ಚುನಾವಣೆ: ಅಭ್ಯರ್ಥಿಗಳಿಂದ ಚುನಾವಣೆ ಪ್ರಚಾರಕ್ಕೆ 'ಹೈಟೆಕ್ ಟಚ್'..!

ಬಿಎಂಟಿಸಿ ನೌಕರರ ವೇತನಕ್ಕಾಗಿ 168 ಕೋಟಿ ರೂ., ಕೋವಿಡ್‌ ನಿಯಂತ್ರಣ ಸಂಬಂಧ ತುರ್ತು ಔಷಧಿ, ಆರ್‌ಟಿಪಿಸಿಆರ್‌ ಕಿಟ್ಸ್‌, ಎಕ್ಸ್‌ ಟ್ರಾಕ್ಸನ್‌ ಕಿಟ್‌ ಖರೀದಿಗೆ ಸಂಬಂಧಿಸಿದಂತೆ 170.72 ಕೋಟಿ ರೂ. ಮತ್ತು ವೆಂಟಿಲೇಟರ್‌, ಪಲ್ಸ್‌ ಆಕ್ಸಿಮೀಟರ್‌ ಖರೀದಿಗೆ 34.68 ಕೋಟಿ ರೂ. ವೆಚ್ಚ ಮಾಡಲಾಗಿದೆ. ಆಗಸ್ಟ್‌-ಸೆಪ್ಟೆಂಬರ್‌ ತಿಂಗಳಲ್ಲಿ ಉಂಟಾದ ಪ್ರವಾಹದಿಂದ ಹಾನಿಗೀಡಾದ ಮನೆಗಳ ದುರಸ್ತಿ, ಪುನರ್‌ ನಿರ್ಮಾಣಕ್ಕಾಗಿ ಪರಿಹಾರ ನೀಡಲು ಕಂದಾಯ ಇಲಾಖೆ 74.19 ಕೋಟಿ ರೂ. ನಷ್ಟುಖರ್ಚು ಮಾಡಿದೆ. ಕೇಂದ್ರ ಸರ್ಕಾರ ಘೋಷಿಸಿರುವ ಪಿಎಂಜಿಕೆಎವೈ ಯೋಜನೆಯನ್ನು ಅನುಷ್ಠಾನಗೊಳಿಸಲು 711.62 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಮೊತ್ತವು ರಾಜ್ಯಕ್ಕೆ ವಾಪಸ್‌ ಬರಲಿದೆ ಎಂದು ಹೇಳಿದರು.

ನೂತನ ಸಂಸತ್ ಭವನ ಕಟ್ಟಡಕ್ಕೆ 'ಕರ್ನಾಟಕದ ಪುರೋಹಿತರಿಂದ ಭೂಮಿ ಪೂಜೆ' ನೆರವೇರಿಸಿದ ಪ್ರಧಾನಿ ಮೋದಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಮೊದಲನೇ ಕಂತಿನಲ್ಲಿ 4008 ಕೋಟಿ ರೂ. ಮಂಡಿಸಲಾಗಿದ್ದು, ಎರಡನೇ ಕಂತಿನಲ್ಲಿ 3320 ಕೋಟಿ ರೂ. ಮಂಡಿಸಲಾಗಿದೆ. ತೆರಿಗೆಗಳ ವಸೂಲಿ ಸರಿಯಾಗಿ ಆಗಿಲ್ಲ. ಕಳೆದ ವರ್ಷಕ್ಕಿಂತ ತೆರಿಗೆ ಸಂಗ್ರಹ ಕಡಿಮೆಯಾಗಿದೆ. ಜಿಎಸ್‌ಟಿ ಸಹ ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಹೀಗಿರುವಾಗ ಯಾವ ಮೂಲದಿಂದ ಆದಾಯ ಕ್ರೋಢೀಕರಣ ಮಾಡಲಾಗುತ್ತದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದು ಒತ್ತಾಯಿಸಿದರು.

'ಕಾಂಗ್ರೆಸ್​​ ಅವತ್ತು ಮಾಡಿದ ಅವಮಾನಕ್ಕೆ ಇವತ್ತು ಸೇಡು ತೀರಿಸಿಕೊಂಡಿದ್ದೇವೆ’

Trending News