Lok Sabha Election 2024: ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡ ಸಖಿ ಮತಗಟ್ಟೆ ಕೇಂದ್ರಗಳು

 ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 07 ರಂದು ಮಂಗಳವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 50 ವಿಶೇಷ ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.

Written by - Manjunath N | Last Updated : May 4, 2024, 01:06 PM IST
  • ಬೇಸಿಗೆ ಹಿನ್ನಲೆಯಲ್ಲಿ ಮತದಾನಕ್ಕೆ ಬರುವ ಮತದಾರರಿಗೆ ನೆರಳಿನ ವ್ಯವಸ್ಥೆ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ.
  • ಜಿಲ್ಲೆಯಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಿಸಲು ಮತ್ತು ಮತದಾರರನ್ನು ವಿಶೇಷವಾಗಿ ಆಕರ್ಷಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯು ವಿಶೇಷ ವ್ಯವಸ್ಥೆ ಮಾಡಲಾಗಿದೆ.
  • ಪ್ರತಿಯೊಬ್ಬ ಮತದಾರರು ಮೇ 07 ರಂದು ತಪ್ಪದೇ ಮತದಾನ ಮಾಡಬೇಕು
Lok Sabha Election 2024: ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡ ಸಖಿ ಮತಗಟ್ಟೆ ಕೇಂದ್ರಗಳು title=

ಬಳ್ಳಾರಿ:  ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 07 ರಂದು ಮಂಗಳವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 50 ವಿಶೇಷ ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು, ಅಲಂಕೃತ ಮತಗಟ್ಟೆಗಳು ಮತದಾರರನ್ನು ಕೈ ಬೀಸಿ ಕರೆಯುತ್ತಿವೆ.

ಪ್ರಜಾಪ್ರಭುತ್ವದ ಹಬ್ಬ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ವಿಶೇಷ ವಿನ್ಯಾಸದಲ್ಲಿ ಸಖಿ ಮತಗಟ್ಟೆ, ವಿಶೇಷ ಚೇತನರ ಮಾದರಿ ಮತಗಟ್ಟೆ, ಯುವ ಮತಗಟ್ಟೆ, ಸಾಂಪ್ರದಾಯಿಕ ಮತಗಟ್ಟೆ ಹಾಗೂ ವಿಷಯಾಧಾರಿತ (ಥೀಮ್) ಮತಗಟ್ಟೆಗಳು ಸಿಂಗಾರಗೊಂಡು ಕಂಗೊಳಿಸುತ್ತಿವೆ.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ 50 ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಮಹಿಳಾ ಮತದಾರರನ್ನು ಉತ್ತೇಜಿಸಲು ಪ್ರತಿ ವಿಧಾನಸಭಾ ಕ್ಷೇತ್ರವಾರು, ಮಹಿಳಾ ಮತದಾರರು ಹೆಚ್ಚಿರುವ ಕಡೆ 5 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಬಹುತೇಕ ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಚುನಾವಣಾ ಕಾರ್ಯ ನಿರ್ವಹಿಸುವರು. ಇದೇ ಮಾದರಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ರಂತೆ ವಿಶೇಷ ಚೇತನರ ಮತಗಟ್ಟೆ, ಯುವ ಮತಗಟ್ಟೆ, ವಿಷಯಾಧಾರಿತ (ಸ್ಥಳೀಯ ಇತಿಹಾಸ, ಪರಂಪರೆ, ಸಂಸ್ಕøತಿ ಬಿಂಬಿಸುವ) ಮತಗಟ್ಟೆ ಹಾಗೂ 2 ರಂತೆ ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: ಸಿನಿಮಾ ಆಗುತ್ತಿದೆ ಅಣ್ಣಾಮಲೈ ಜೀವನ ಚರಿತ್ರೆ..! ಹೀರೋ ಯಾರು ಗೊತ್ತೆ..? 

ಸಿಂಗಾರಗೊಂಡ ಸಖಿ ಮತಗಟ್ಟೆಗಳು:

May be an image of text

ಮಹಿಳಾ ಮತದಾರರಿಗಾಗಿ ತೆರೆಯಲಾಗಿರುವ ಸಖಿ ಮತಗಟ್ಟೆಗಳು ತಳಿರು-ತೋರಣ, ರಂಗೋಲಿ, ಹೂ-ಗಿಡ ಅಲಂಕಾರದೊಂದಿಗೆ ಸಿಂಗಾರಗೊಳ್ಳಲಿವೆ.

ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಂಪ್ಲಿ ಪಟ್ಟಣದ ಶಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಉತ್ತರ ವಲಯ), ಕುರುಗೋಡು ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ(ಕುರುಬರ ಓಣಿ) ಮತ್ತು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ಸಿರುಗುಪ್ಪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಿರುಗುಪ್ಪ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ರಾಜೀವ್‍ಗಾಂಧಿ ನಗರ) ಪಶ್ಚಿಮ ವಲಯ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ರಾರಾವಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತೆಕ್ಕಲಕೋಟೆಯ ವಾರ್ಡ್ ನಂ.12ರ ಅಂಗನವಾಡಿ ಕೇಂದ್ರ ಮತ್ತು ಹಳೇಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಣಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಿರಿವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆ, ಬಳ್ಳಾರಿಯ ಕೌಲ್‍ಬಜಾರ್‍ನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ರೇಡಿಯೋ ಪಾರ್ಕ್), ಕೋಟೆ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಹೊಸದು) ಮತ್ತು ಸಂಗನಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಳ್ಳಾರಿ ನಗರದ ತಾಳೂರು ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಟೇಲ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಪ್ಪಗಲ್ಲು ರಸ್ತೆಯ ಶೆಟ್ರು ಗುರುಶಾಂತಪ್ಪ ಪದವಿ ಪೂರ್ವ ಕಾಲೇಜು ಮತ್ತು ರಾಘವೇಂದ್ರ ಕಾಲೋನಿಯ ನಂದಿ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ & ಸೈನ್ಸ್ ಕಾಲೇಜು ಮತ್ತು ಆರ್‍ಟಿಜಿ ಪ್ರೌಢಶಾಲೆ(ಮಕ್ಕಳ ಮಂಟಪ).

ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಡೂರು ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕೃಷ್ಣ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಣಜಿತ್‍ಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಡುತಿನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ತೋರಣಗಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ವಿಶೇಷಚೇತನರ ಮಾದರಿ ಮತಗಟ್ಟೆ:

ವಿಶೇಷ ಚೇತರನ ಮತದಾನವನ್ನು ಪೆÇ್ರೀತ್ಸಾಯಿಸುವ ಸಲುವಾಗಿ ವಿಕಲಚೇತನರ ಮಾದರಿ ಮತಗಟ್ಟೆ ಸ್ಥಾಪಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರವಾರು ತಲಾ 1 ವಿಶೇಷ ಚೇತನರ ಮಾದರಿ ಮತಗಟ್ಟೆ ಸ್ಥಾಪಿಸಲಾಗಿದ್ದು, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 5 ವಿಶೇಷಚೇತನರ ಮಾದರಿ ಮತಗಟ್ಟೆ ಸ್ಥಾಪಿಸಲಾಗಿದೆ.

ಕಂಪ್ಲಿ ಕ್ಷೇತ್ರದ ಎಮ್ಮಿಗನೂರು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸಿರುಗುಪ್ಪ ಕ್ಷೇತ್ರದ ಸಿರುಗುಪ್ಪ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೌಲ್‍ಬಜಾರ್‍ನ ಸರ್ಕಾರಿ ಉರ್ದು ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, ಬಳ್ಳಾರಿ ನಗರ ಕ್ಷೇತ್ರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು(ಅಂಚೆ ಕಚೇರಿ ಹತ್ತಿರ) ಮತ್ತು ಸಂಡೂರು ಕ್ಷೇತ್ರದ ಸಂಡೂರು ಪಟ್ಟಣದ ಪುರಸಭೆ ಕಚೇರಿಯಲ್ಲಿ ವಿಶೇಷ ಚೇತನರ ಮಾದರಿ ಮತಗಟ್ಟೆ ಸ್ಥಾಪಿಸಲಾಗಿದೆ.

ಇದನ್ನೂ ಓದಿ: ರಾಹುಲ್ ಅಲ್ಲ ಅವರ ತಾತ - ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲಾಗಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಯುವ ಮತಗಟ್ಟೆ:

ಪ್ರತಿ ವಿಧಾನಸಭಾ ಕ್ಷೇತ್ರವಾರು ತಲಾ 5 ಯುವ ಜನರ ಮತಗಟ್ಟೆ ಸ್ಥಾಪಿಸಲಾಗಿದ್ದು, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 5 ಯುವ ಮತಗಟ್ಟೆ ಸ್ಥಾಪಿಸಲಾಗಿದೆ.

May be an image of 1 person and text

ಕಂಪ್ಲಿ ಕ್ಷೇತ್ರದ ಸೋಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಿರುಗುಪ್ಪ ಕ್ಷೇತ್ರದ ತೆಕ್ಕಲಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಬಾಲಕರ), ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೊಳಗಲ್ಲು ಗ್ರಾಮಪಂಚಾಯತ್ ಕಚೇರಿ, ಬಳ್ಳಾರಿ ನಗರ ಕ್ಷೇತ್ರದ ಬಳ್ಳಾರಿಯ ಎಸ್.ಎನ್.ಪೇಟೆಯ ಎಸ್‍ಎಸ್‍ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಂಡೂರು ಕ್ಷೇತ್ರದ ಸಂಡೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯುವ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಸಾಂಪ್ರದಾಯಿಕ (ಎಥ್ನಿಕ್) ಮತಗಟ್ಟೆ:

ಸ್ಥಳೀಯ ಇತಿಹಾಸ, ಪರಂಪರೆ, ಸಂಸ್ಕøತಿ ಬಿಂಬಿಸುವ ಸಾಂಪ್ರದಾಯಿಕ (ಎಥ್ನಿಕ್) ಮತಗಟ್ಟೆಗಳನ್ನು ಪ್ರತಿ ವಿಧಾನಸಭಾ ಕ್ಷೇತ್ರವಾರು ತಲಾ 2 ಎಥ್ನಿಕ್ ಮತಗಟ್ಟೆ ಸ್ಥಾಪಿಸಲಾಗಿದ್ದು, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 10 ಎಥ್ನಿಕ್ ಮತಗಟ್ಟೆ ಸ್ಥಾಪಿಸಲಾಗಿದೆ.

ಕಂಪ್ಲಿ ಕ್ಷೇತ್ರದ ಅರಳಿಹಾಳ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೋಮಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ಹೊಸದು), ಸಿರುಗುಪ್ಪ ಕ್ಷೇತ್ರದ ಸಿರುಗುಪ್ಪ ಪಟ್ಟಣದ ನಗರಸಭೆ ಕಚೇರಿ, ತೆಕ್ಕಲಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆ (ಸಿಂಧುಳ್ಳಿ ಕಾಲೋನಿ), ಬಳ್ಳಾರಿ ಗ್ರಾಮೀಣ ಕ್ಷೇತ್ರದ ಹೊನ್ನಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೋಕಾದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಬಳ್ಳಾರಿ ನಗರ ಕ್ಷೇತ್ರದ ಬಳ್ಳಾರಿಯ ಹವಂಭಾವಿಯ ಶ್ರೀ ಚೈತನ್ಯ ಬಾಲಕಿಯ ಪದವಿ ಪೂರ್ವ ಕಾಲೇಜು, ಇನ್‍ಫ್ಯಾಂಟರಿ ರಸ್ತೆಯ ವಾಸವಿ ಇಂಗ್ಲೀಷ್ ಮಾಧ್ಯಮ ಶಾಲೆ ಮತ್ತು ಸಂಡೂರು ಕ್ಷೇತ್ರದ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಡುತಿನಿಯ ಅಂಗನವಾಡಿ ಕೇಂದ್ರ(ಜಕ್ಕೇರ್ ಬಾವಿ)ದಲ್ಲಿ ಎಥ್ನಿಕ್ ಮತಗಟ್ಟೆ ಸ್ಥಾಪಿಸಲಾಗಿದೆ.

ವಿಷಯಾಧಾರಿತ (ಥೀಮ್) ಮತಗಟ್ಟೆ:

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 1 ರಂತೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 5 ವಿಷಯಾಧಾರಿತ (ಥೀಮ್) ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಕಂಪ್ಲಿ ಕ್ಷೇತ್ರದ ದಮ್ಮೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸಿರುಗುಪ್ಪ ಕ್ಷೇತ್ರದ ಕೆಂಚನಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೌಲ್‍ಬಜಾರ್‍ನ ಮೊಹಮ್ಮದೀಯ ಇಂಗ್ಲೀಷ್ ಮಾಧ್ಯಮ ಶಾಲೆ, ಬಳ್ಳಾರಿ ನಗರ ಕ್ಷೇತ್ರದ ಬಳ್ಳಾರಿಯ ಬಸವೇಶ್ವರ ನಗರದ ವುಂಕಿ ಮರಿಸಿದ್ದಮ್ಮ ಇಂಗ್ಲೀಷ್ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮತ್ತು ಸಂಡೂರು ಕ್ಷೇತ್ರದ ಸುಶೀಲಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಷಯಾಧಾರಿತ (ಥೀಮ್) ಮತಗಟ್ಟೆ ಸ್ಥಾಪಿಸಲಾಗಿದೆ.

ಬೇಸಿಗೆ ಹಿನ್ನಲೆಯಲ್ಲಿ ಮತದಾನಕ್ಕೆ ಬರುವ ಮತದಾರರಿಗೆ ನೆರಳಿನ ವ್ಯವಸ್ಥೆ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಿಸಲು ಮತ್ತು ಮತದಾರರನ್ನು ವಿಶೇಷವಾಗಿ ಆಕರ್ಷಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬ ಮತದಾರರು ಮೇ 07 ರಂದು ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಕೋರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News