ಬೆಂಗಳೂರಿನಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗೆ ಚಾಕುವಿನಿಂದ ಇರಿತ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ವ್ಯಕ್ರಿಯೊಬ್ಬ ಚಾಕುವಿನಿಂದ ಇರಿದ ಘಟನೆ ಬುಧವಾರ ಇಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ. 

Last Updated : Mar 7, 2018, 02:28 PM IST
ಬೆಂಗಳೂರಿನಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗೆ ಚಾಕುವಿನಿಂದ ಇರಿತ title=

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ವ್ಯಕ್ರಿಯೊಬ್ಬ ಚಾಕುವಿನಿಂದ ಇರಿದ ಘಟನೆ ಬುಧವಾರ ಇಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ. 

ಆರೋಪಿಯನ್ನು ತುಮಕೂರು ಮೂಲದ ತೇಜಸ್ ಶರ್ಮಾ ಎಂದು ಗುರುತಿಸಲಾಗಿದ್ದು, ಲೋಕಾಯುಕ್ತ ಕಚೇರಿಗೆ ವಿಚಾರಣೆಗೆಂದು ಬಂದಿದ್ದ ಎನ್ನಲಾಗಿದೆ. ಆದರೆ, ಈ ಘಟನೆಗೆ ಕಾರಣವೇನು ಎಂಬುದು ತಿಳಿದ ಬಂದಿಲ್ಲ. ಸದ್ಯ ಆರೋಪಿ ತೇಜಸ್'ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮ ಮೂಲಗಳು ತಿಳಿಸಿವೆ.

ಬೆಂಗಳೂರಿನ ವಿಧಾನಸೌಧದ ಸಮೀಪದಲ್ಲಿರುವ ಲೋಕಾಯುಕ್ತ ಕಚೇರಿ ಸದಾ ಜನಜಂಗುಳಿಯಲ್ಲಿರುವ ಪ್ರದೇಶವಾದರೂ ಈ ಘಟನೆ ಸಂಭವಿಸಿರುವುದು, ಅದರಲ್ಲೂ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತರಿಗೆ ಚಾಕುವಿನಿಂದ ಇರಿದಿರುವುದು ಇನ್ನಷ್ಟು ಆತಂಕ ಸೃಷ್ಟಿಸಿದೆ. 

ಗಾಯಗೊಂಡಿರುವ ವಿಶ್ವನಾಥ್ ಶೆಟ್ಟಿ ಅವರನ್ನು ಮಲ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. 

Trending News