ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿದ ಆರೋಪಿ ಯಾರು? ಆತ ಹೇಳಿದ್ದೇನು?

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ಚಾಕು ಇರಿದ ಆರೋಪಿ ತೇಜ್ ರಾಜ್ ಶರ್ಮಾ ಪೋಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

Last Updated : Mar 7, 2018, 07:50 PM IST
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿದ ಆರೋಪಿ ಯಾರು? ಆತ ಹೇಳಿದ್ದೇನು? title=

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ಚಾಕು ಇರಿದ ಆರೋಪಿ ತೇಜ್ ರಾಜ್ ಶರ್ಮಾ ಪೋಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ತಾನು ನೀಡಿದ್ದ ದೂರುಗಳನ್ನೆಲ್ಲಾ ವಜಾಗೊಳಿಸಿದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವುದಾಗಿ ಹೇಳಿದ್ದಾನೆ. 

ಸರ್ಕಾರಿ ಅಧಿಕಾರಿಗಳ ವಿರುದ್ಧ ದೂರು ನೀಡಿ ಸಾಕಷ್ಟು ಸಾಕ್ಷ್ಯ ಒದಗಿಸಲಾಗಿದ್ದರೂ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣವನ್ನು ವಜಾಗೊಳಿಸಲಾಗಿತ್ತು. ಇದರಿಂದಾಗಿ ಬೇಸತ್ತಿದ್ದ ತೇಜ್ ರಾಜ್ ಶರ್ಮಾ ನಿನ್ನೆಯೇ ಲೋಕಾಯುಕ್ತ ಕಚೇರಿಗೆ ಬಂದು ಬೆದರಿಕೆ ಹಾಕಿದ್ದನಂತೆ. ಅಲ್ಲದೆ, ಈ ಹತ್ಯೆಗೆ ಪೂರ್ವ ತಯಾರಿಯನ್ನೂ ನಡೆಸಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. 

ಬೆಂಗಳೂರಿನಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗೆ ಚಾಕುವಿನಿಂದ ಇರಿತ

ತೇಜ್ ರಾಜ್ ಶರ್ಮಾ ಯಾರು?
ಮೂಲತಃ ರಾಜಸ್ಥಾನದವನು ಎನ್ನಲಾಗಿರುವ ತೇಜ್ ರಾಜ್ ಶರ್ಮಾ ತುಮಕೂರಿನಲ್ಲಿ ಹಲವು ವರ್ಷಗಳಿಂದ ವಾಸವಿದ್ದು, ಸರ್ಕಾರಿ ಕಚೇರಿಗಳಿಗೆ ಪೀಠೋಪಕರಣಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದ. ಈ ವಿಚಾರದಲ್ಲಿ ಅಧಿಕಾರಿಗಳು ಹಾಗೂ ತೇಜ್ ರಾಜ್ ನಡುವೆ ಭಿನಾಭಿಪ್ರಾಯ ಉಂಟಾಗಿ ಬಾಲಕಿಯರ ಬಾಲಮಂದಿರದಲ್ಲಿ ಮಂಚ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಅಧಿಕಾರಿಗಳ ವಿರುದ್ಧ ಸಿಟ್ಟಿಗೆದ್ದಿದ್ದ ತೇಜ್‌ ರಾಜ್‌ ಶರ್ಮಾ 18 ಅಧಿಕಾರಿಗಳ ವಿರುದ್ಧ ದೂರು ನೀಡಿದ್ದ ಎನ್ನಲಾಗಿದೆ. ಆದರೆ ಎಲ್ಲಾ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದರೂ ಲೋಕಾಯುಕ್ತ ನ್ಯಾಯಾಲಯದಲ್ಲಿ ಈ ದೂರು ಸುಳ್ಳು ಎಂದು ಪ್ರಕರಣ ವಜಾಗೊಂಡಿದ್ದ ಹಿನ್ನೆಲೆಯಲ್ಲಿ ಇಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ. 

Trending News