5 ಲಕ್ಷ ಲಂಚಕ್ಕೆ ಬೇಡಿಕೆ; ರೆಡ್‌ಹ್ಯಾಂಡ್ ಆಗಿ ʼಲೋಕಾʼ ಬಲೆಗೆ ಬಿದ್ದ PSI & ಪೇದೆ..!

Lokayukta Riad in Haveri District: ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.

Written by - Puttaraj K Alur | Last Updated : May 18, 2024, 12:15 AM IST
  • ಹಾವೇರಿಯಲ್ಲಿ ಲೋಕಾಯುಕ್ತ ದಾಳಿ, ತಡಸ ಠಾಣೆ PSI & ಪೇದೆ ಲೋಕಾ ಬಲೆಗೆ
  • ಗ್ಯಾಂಬಲಿಂಗ್‌ಗೆ ಅನುಮತಿ ನೀಡಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ
  • 5 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ತಡಸ ಠಾಣೆಯ PSI ಶರಣ ಬಸಪ್ಪ
5 ಲಕ್ಷ ಲಂಚಕ್ಕೆ ಬೇಡಿಕೆ; ರೆಡ್‌ಹ್ಯಾಂಡ್ ಆಗಿ ʼಲೋಕಾʼ ಬಲೆಗೆ ಬಿದ್ದ PSI & ಪೇದೆ..! title=
ತಡಸ ಠಾಣೆ PSI & ಪೇದೆ ಲೋಕಾ ಬಲೆಗೆ!

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಡಸ ಠಾಣೆ PSI ಮತ್ತು ಪೇದೆಯನ್ನು ಬಂಧಿಸಿದ್ದಾರೆ.   

ತಡಸ ಠಾಣೆ PSI ಶರಣ ಬಸಪ್ಪ ಮತ್ತು ಪೇದೆ ಸುರೇಶ್‌ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದವರು. ಗ್ಯಾಂಬಲಿಂಗ್‌ಗೆ ಅನುಮತಿ ನೀಡಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 

ಇದನ್ನೂ ಓದಿ: ಪಾಕಿಸ್ತಾನದ ಸಂಸತ್ತಿನಲ್ಲಿ ಭಾರತದ ಚಂದ್ರಯಾನ ಸಾಹಸ ಸದ್ದು!

ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.

ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, PSI ಮತ್ತು ಪೇದೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. 

ಇದನ್ನೂ ಓದಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಆರೋಪಿ ಅರೆಸ್ಟ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News