Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರ

Loksabha Election : ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಇಂದು ಶನಿವಾರ (ಏ. 20 ರಂದು) ಬೆಂಗಳೂರು ಹಾಗೂ ಚಿಕ್ಕಬಳಾಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

Written by - Zee Kannada News Desk | Last Updated : Apr 20, 2024, 10:47 AM IST
  • ಬೆಂಗಳೂರು ಉತ್ತರ, ಮಧ್ಯ, ದಕ್ಷಿಣ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
  • ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಕಾರ್ಕಳ ಮಾತನಾಡಿ, ಈ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.
  • . ಈ ಹಿನ್ನೆಲೆ ಇಂದು ಮೋದಿ ಬೆಂಗಳೂರು ಸೇರಿದಂತೆ ಆರು ಲೋಕಸಭಾ ಕ್ಷೇತ್ರಗಳಿಗೆ ಪ್ರಚಾರ ನಡೆಸಲಿದ್ದಾರೆ.
Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರ title=

PM Modi in Bangalore : ಪ್ರಧಾನಿ ನರೇಂದ್ರ ಇಂದು  (ಏ. 20 ರಂದು) ಬೆಂಗಳೂರು ಹಾಗೂ ಚಿಕ್ಕಬಳಾಪುರದಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಚಾರ ನಡೆಸಲಿದ್ದಾರೆ . ಪ್ರಧಾನಿ ಮೋದಿ ಮಂಗಳೂರು ರೋಡ್ ಶೋ ನಂತರ ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದ ಆರು ಲೋಕಸಭಾ ಕ್ಷೇತ್ರಗಳಿಗೆ ಪ್ರಚಾರ ನಡೆಸಲಿದ್ದಾರೆ ಮತ್ತು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ .

ಇದನ್ನು ಓದಿ : ಎಲ್ಲಿ ಹೋದ್ರು "ಗಾಳಿಪಟ ಬ್ಯೂಟಿ" ಡೈಸಿ..! 2012 ರ ನಂತರ ಸಿನಿಮಾ ರಂಗದಿಂದ ದೂರ ಉಳಿಯಲು ಆ ಘಟನೆ ಕಾರಣ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಕಾರ್ಕಳ ಮಾತನಾಡಿ, ಈ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಚುನಾವಣೆ ನಡೆಯಲಿದೆ. ಚುನಾವಣಾ ವೇಳಾಪಟ್ಟಿ ಪ್ರಕಟವಾದ ದಿನದಂದು ಕಲಬುರಗಿಗೆ ಭೇಟಿ ನೀಡಿದ್ದು ಸೇರಿದಂತೆ ಈ ಚುನಾವಣಾ ಋತುವಿನಲ್ಲಿ ಪ್ರಧಾನಿ ಕರ್ನಾಟಕಕ್ಕೆ ಇದು ಮೂರನೇ ಭೇಟಿಯಾಗಿದೆ .

ಎಐಸಿಸಿ ನಾಯಕ ರಾಹುಲ್ ಗಾಂಧಿ ನೆರೆಯ ಕೋಲಾರಕ್ಕೆ ಭೇಟಿ ನೀಡಿದ ಮೂರು ದಿನಗಳ ನಂತರ ಮೋದಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಬಿಜೆಪಿ ತೆಕ್ಕೆಗೆ ಬಂದಿದ್ದು, ಕಾಂಗ್ರೆಸ್‌ ಪಕ್ಷವು ಸೀಟುಗಳನ್ನು ವಶಪಡಿಸಿಕೊಳ್ಳಲು ತೀವ್ರ ಪೈಪೋಟಿ ನಡೆಸುತ್ತಿದೆ. 

ಅರಮನೆ ಮೈದಾನದಲ್ಲಿ ನಡೆಯುವ ರ್ಯಾಲಿಯಲ್ಲಿ ಮೋದಿ ಅವರು ಬೆಂಗಳೂರು ಉತ್ತರ, ಮಧ್ಯ, ದಕ್ಷಿಣ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. 

ಇದನ್ನು ಓದಿ : ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಏಪ್ರಿಲ್ 26 ರಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ  ಹಿನ್ನೆಲೆ ಇಂದು ಮೋದಿ ಬೆಂಗಳೂರು ಸೇರಿದಂತೆ ಆರು ಲೋಕಸಭಾ ಕ್ಷೇತ್ರಗಳಿಗೆ ಪ್ರಚಾರ ನಡೆಸಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News