MLA Madal Virupakshappa Latest News: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು ಯಾವುದೇ ಕ್ಷಣದಲ್ಲಿ ಅವರ ಬಂಧನವಾಗುವ ಸಾಧ್ಯತೆಯಿದೆ. ಇಂದು ಹೈಕೋರ್ಟ್ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ-ವಿವಾದಗಳನ್ನು ಆಲಿಸಿದ ಏಕಸದಸ್ಯ ಪೀಠ ಅಂತಿಮವಾಗಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಕಳೆದ ತಿಂಗಳು ಲೋಕಾಯುಕ್ತರು ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಬೆಂಗಳೂರಿನ ವೈಯಕ್ತಿಕ ಕಚೇರಿ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶಾಸಕರ ಪುತ್ರ ಮಾಡಾಳು ಪ್ರಶಾಂತ ಅವರು 40 ಲಕ್ಷ ರೂ. ಹಣವನ್ನು ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು. ಇನ್ನು ಕಚೇರಿ ಹಾಗೂ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಬರೋಬ್ಬರಿ 6 ಕೋಟಿ ರೂ. ಹಣ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಒಟ್ಟು 6 ಜನ ಆರೋಪಿಗಳನ್ನಾಗಿ ಚಾರ್ಜ್ ಶೀಟ್ ಸಿದ್ಧಪಡಿಸಿದ್ದರು.
ಇದನ್ನೂ ಓದಿ- ಶಾಸಕ ಮಾಡಳ್ ವಿರೂಪಾಕ್ಷಪ್ಪ ಪುತ್ರನ ವಿರುದ್ಧ ಮತ್ತೆ ಎರಡು ಎಪ್ಐಆರ್ ದಾಖಲಿಸಿದ ಲೋಕಾಯುಕ್ತ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಖಾಸಗಿ ಕಂಪನಿಯೊಂದರ ಪ್ರಕರಣವನ್ನು ಖುಲಾಸೆ ಮಾಡುವ ಕಾರಣಕ್ಕೆ ಲಂಚ ಪಡೆಯುತ್ತಿದ್ದರು ಎಂದು ಆರೋಪಿಸಿ ಅವರನ್ನೇ ಎ1 ಆರೋಪಿಯನ್ನಾಗಿ ಮಾಡಲಾಗಿತ್ತು. ಉಳಿದಂತೆ ಅವರ ಪುತ್ರ ಮಾಡಾಳು ಪ್ರಶಾಂತ, ಹಣ ಕೊಡಲು ಬಂದಿದ್ದ ಕಂಪನಿಯ ಇಬ್ಬರು ವ್ಯಕ್ತಿಗಳು ಹಾಗೂ ಮಾಡಾಳು ವಿರುಪಾಕ್ಷಪ್ಪ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಇದನ್ನೂ ಓದಿ- ಲೋಕಾಯುಕ್ತರು ತೆಗೆದುಕೊಂಡು ಹೋಗಿದ್ದು ಭ್ರಷ್ಟಾಚಾರದ ಹಣವಲ್ಲ, ನಮ್ಮ ಹಣ
ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಹಣದೊಂದಿಗೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು. ನಂತರ ನಿರೀಕ್ಷಣಾ ಜಾಮೀನು ಸಿಕ್ಕಿ ಬೆನ್ನಲ್ಲೇ ಮನೆಗೆ ವಾಪಸ್ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದರು. ಇದು ರಾಜಕೀಯ ವಲಯ, ಸಾರ್ವಜನಿಕವಾಗಿ ಸಾಕಷ್ಟು ಟೀಕೆಗೆ ವ್ಯಕ್ತವಾಗಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.