ದೆಹಲಿಯಲ್ಲಿ ಪ್ರತಿಭಟನೆಗಾಗಿ ತೆರಳುತ್ತಿದ್ದ ರೈತರನ್ನು ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಖಂಡನೀಯ: ಸಿಎಂ ಸಿದ್ದರಾಮಯ್ಯ

Delhi Chalo: ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು- ಸಿಎಂ ಸಿದ್ದರಾಮಯ್ಯ 

Written by - Yashaswini V | Last Updated : Feb 12, 2024, 01:20 PM IST
  • ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು.
  • ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು.
  • ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ.
ದೆಹಲಿಯಲ್ಲಿ ಪ್ರತಿಭಟನೆಗಾಗಿ ತೆರಳುತ್ತಿದ್ದ ರೈತರನ್ನು ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಖಂಡನೀಯ: ಸಿಎಂ ಸಿದ್ದರಾಮಯ್ಯ  title=

ಬೆಂಗಳೂರು: ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ  ದುಷ್ಕೃತ್ಯದ ಹಿಂದಿನ ಕ್ರಿಮಿನಲ್  ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ ಎಂದವರು ಆರೋಪಿಸಿದರು.

ಇದನ್ನೂ ಓದಿ- ದೆಹಲಿ ಚಲೋಗೆ ಹೊರಟಿದ್ದ ನೂರಾರು ರೈತರು ಪೊಲೀಸರ ವಶಕ್ಕೆ

ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು ಎಂದು ನೆನೆಸಿದರು.

ಇದನ್ನೂ ಓದಿ- ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಲ್ಲಬೇಡಿ, ಹಾಲು ಕೊಡುವ ಕೆಚ್ಚಲು ಕತ್ತರಿಸಬೇಡಿ: ಸಿದ್ದರಾಮಯ್ಯ

ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News