ಗಡಿ ಭಾಗದ 865 ಗ್ರಾಮಗಳಲ್ಲಿ ಆರೋಗ್ಯ ವಿಮೆ ಜಾರಿಗೆ ಮುಂದಾದ ಮಹಾರಾಷ್ಟ್ರ ಸರ್ಕಾರ: ಸಿಎಂ ಹೇಳಿದ್ದೇನು?

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು  ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. 

Written by - Yashaswini V | Last Updated : Jan 17, 2024, 03:08 PM IST
  • ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ.
  • ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು.
  • ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗಡಿ ಭಾಗದ  865 ಗ್ರಾಮಗಳಲ್ಲಿ  ಆರೋಗ್ಯ ವಿಮೆ ಜಾರಿಗೆ ಮುಂದಾದ ಮಹಾರಾಷ್ಟ್ರ ಸರ್ಕಾರ: ಸಿಎಂ ಹೇಳಿದ್ದೇನು?  title=

ಬೆಳಗಾವಿ:   ಕರ್ನಾಟಕದ ಗಡಿ ಭಾಗದ  865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ  ಆರೋಗ್ಯ ವಿಮೆ  ಜಾರಿ ಮಾಡಲು ಮುಂದಾಗಿರುವ ಬಗ್ಗೆ   ಪ್ರತಿಕ್ರಿಯೆ ನೀಡಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು  ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು. 

ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ  ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ತಿಳಿಸಿದರು. 

ಕನ್ನಡದವರಿಗೆ ಶೇ. 65 ರಷ್ಟು ಸೀಟುಗಳು: 
ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.  

ಇದನ್ನೂ ಓದಿ- ನಕಲಿ ಮೈಸೂರ್ ಸ್ಯಾಂಡಲ್ ಸೋಪ್ ತಯಾರಿಕರ ಜತೆ ಬಿಜೆಪಿ ನಂಟು: ಪ್ರಿಯಾಂಕ್ ಖರ್ಗೆ ಆರೋಪ

ಸಂಗೊಳ್ಳಿ ರಾಯಣ್ಣನ ಸ್ಮರಣಾರ್ಥ ರಾಕ್ ಗಾರ್ಡನ್: 
ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು  ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ ಎಂದರು. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದರು. 

ಇದನ್ನೂ ಓದಿ- ಹಿಟ್ ಅಂಡ್ ರನ್ ಕಾನೂನು ತಿದ್ದುಪಡಿ: ಸರ್ಕಾರದ ವಿರುದ್ಧ ಸಿಡಿದೆದ್ದ ಲಾರಿ ಮಾಲೀಕರು, ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ

ಪಕ್ಷ ತೀರ್ಮಾನಿಸುತ್ತದೆ:
ಲೋಕಸಭೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಅವರೇ 5 ವರ್ಷಗಳು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಈ ಬಗ್ಗೆ ಪಕ್ಷದ ವರಿಷ್ಠರರು ತೀರ್ಮಾನ ಮಾಡುತ್ತಾರೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News