ವಯನಾಡ್ ದುರಂತ : ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ. ಪಾಟೀಲ್‌ ಮನವಿ

ಕೇರಳದ ವಯನಾಡ್‌ನಲ್ಲಿ ಜರುಗಿದ ಭೂ ಕುಸಿತದಲ್ಲಿ 250 ಕ್ಕೂ ಹೆಚ್ಚು ಜನರ ಮೃತಪಟ್ಟಿದ್ದಾರೆ... ಈ ದುರಂತಕ್ಕೆ ಈಡಿ ದೇಶವೇ ಮುರುಗಿದೆ.. ಅಲ್ಲದೆ, ರಾಜಕೀಯ ನಾಯಕರು, ನಟ ನಟಿಯರು ಸಹಾಯ ಹಸ್ತ ಚಾಚುತ್ತಿದ್ದಾರೆ.. ಇದೀಗ ಉದ್ಯಮಿಗಳೂ ಸಹ ಸಂತ್ರಸ್ತರ ನೆರವಿಗೆ ಬರುವಂತೆ ಸಚಿವ ಎಂ.ಬಿ. ಪಾಟೀಲ್‌ ಕರೆ ನೀಡಿದ್ದಾರೆ..

Written by - Prashobh Devanahalli | Edited by - Krishna N K | Last Updated : Aug 10, 2024, 04:26 PM IST
    • ವಯನಾಡ್‌ನಲ್ಲಿ ಜರುಗಿದ ಭೂ ಕುಸಿತದಲ್ಲಿ 250 ಕ್ಕೂ ಹೆಚ್ಚು ಜನರ ಮೃತಪಟ್ಟಿದ್ದಾರೆ..
    • ರಾಜಕೀಯ ನಾಯಕರು, ನಟ ನಟಿಯರು ಸಹಾಯ ಹಸ್ತ ಚಾಚುತ್ತಿದ್ದಾರೆ..
    • ಉದ್ಯಮಿಗಳೂ ಸಹ ಸಂತ್ರಸ್ತರ ನೆರವಿಗೆ ಬರುವಂತೆ ಸಚಿವ ಎಂ.ಬಿ. ಪಾಟೀಲ್‌ ಕರೆ
ವಯನಾಡ್ ದುರಂತ : ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ. ಪಾಟೀಲ್‌ ಮನವಿ title=

ಬೆಂಗಳೂರು: ಕಂಡುಕೇಳರಿಯದ ಭೂಕುಸಿತದಿಂದ ನಲುಗಿರುವ ಕೇರಳದ ವಯನಾಡ್ ಜನತೆಯ ನೆರವಿಗೆ ರಾಜ್ಯದ ಕೈಗಾರಿಕೋದ್ಯಮಿಗಳು ಧಾವಿಸಿ, ಸಹಾಯಹಸ್ತ ಚಾಚಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮನವಿ ಮಾಡಿದ್ದಾರೆ.

ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಸಂಬಂಧ ಯಾವುದೇ ಮಾಹಿತಿ/ಮಾರ್ಗದರ್ಶನ ಬೇಕಾದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಅವರನ್ನು ದೂರವಾಣಿ ಸಂಖ್ಯೆ 080-22386796 ಅಥವಾ ಮಿಂಚಂಚೆ officeofdicommissioner@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ: ಬೆಂಗಳೂರಿನ ಪಿಜಿಗಳಿಗೆ ಮಾರ್ಗಸೂಚಿ ಪ್ರಕಟ, ಪ್ರತಿ 6 ತಿಂಗಳಿಗೊಮ್ಮೆ ಪರಿಶೀಲಿಸಲು ಸೂಚನೆ

ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ನೆರೆಯ ರಾಜ್ಯವು ಈಗ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ತತ್ತರಿಸಿದೆ. ಆ ರಾಜ್ಯಕ್ಕೆ ನೆರವು ನೀಡಲು ಕರ್ನಾಟಕ ಸರಕಾರ ಬದ್ಧವಾಗಿದೆ ಎಂದು ಅವರು ವಿವರಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News