ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್..!: ಸಿಎಂ ಹೇಳಿದ್ದೇನು..?

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರಕ್ಕೆ ತೆರಳಿದ್ದ ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ.

Written by - Zee Kannada News Desk | Last Updated : Aug 25, 2021, 06:16 PM IST
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ ಸಂಸ್ಕೃತಿಹೀನ ಕೃತ್ಯ
  • ಎಂಬಿಎ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆಸಿದ ಕಾಮುಕರು
  • ಆರೋಪಿಗಳ ವಿರುದ್ಧ ಕಠಣ ಕ್ರಮಕ್ಕೆ ಆದೇಶಿಸಿದ ಸಿಎಂ ಬಸವರಾಜ್ ಬೊಮ್ಮಾಯಿ
ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್..!: ಸಿಎಂ ಹೇಳಿದ್ದೇನು..?     title=
ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ (Photo Courtesy: @Zee News)

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಸ್ಕೃತಿಹೀನ ಕೃತ್ಯವೊಂದು ನಡೆದಿದೆ. ಹೆಚ್ಚಾಗಿ ಹೊರ ರಾಜ್ಯಗಳಲ್ಲಿ ನಡೆಯುತ್ತಿದ್ದ ಗ್ಯಾಂಗ್ ರೇಪ್(Gang Rape) ಪ್ರಕರಣ ಇದೀಗ ಅರಮನೆ ನಗರಿಗೂ ವಕ್ಕರಿಸಿದೆ. ಮೈಸೂರಿನ ಲಲಿತಾದ್ರಿಪುರದ ಹೊರವಲಯದಲ್ಲಿ ಎಂಬಿಎ ವಿದ್ಯಾರ್ಥಿನೊಬ್ಬಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಮಂಗಳವಾರ ಸಂಜೆ(ಆಗಸ್ಟ್ 24) ಸ್ನೇಹಿತ ಜೊತೆಗೆ ಚಾಮುಂಡಿ ಬೆಟ್ಟ(Chamundi Hill)ದ ತಪ್ಪಲಿನಲ್ಲಿರುವ ಲಲಿತಾದ್ರಿಪುರಕ್ಕೆ ತೆರಳಿದ್ದ ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿ ಮೇಲೆ ಐದಾರು ಕಾಮುಕರ ತಂಡ ಹೀನ ಕೃತ್ಯ ಎಸಗಿದೆ ಎಂದು ತಿಳಿದುಬಂದಿದೆ.   

ದುಷ್ಕರ್ಮಿಗಳು ಮೊದಲು ಯುವಕನ ಮೇಲೆ ಹಲ್ಲೆ ನಡೆಸಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ(Gang Rape) ನಡೆಸಿದ್ದಾರೆ. ಇಳಿಸಂಜೆ ಹೊತ್ತಲ್ಲಿ ಚಾಮುಂಡಿ ಬೆಟ್ಟದ ಬಳಿ ದುಷ್ಕೃತ್ಯ ವೆಸಗಿದ್ದಾರೆ ಎಂದು ತಿಳಿದುಬಂದಿದೆ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸ(Alanahalli Police Station)ರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬಡಮಕ್ಕಳ ಪಾಲಿನ ಸ್ವೆಟರ್‌, ಮೊಟ್ಟೆ ಎಲ್ಲವನ್ನೂ ತಿನ್ನುತ್ತಿದ್ದಾರೆ: ಕಾಂಗ್ರೆಸ್ ಆರೋಪ

ಗ್ಯಾಂಗ್ ರೇಪ್ ಆರೋಪಿಗಳ ವಿರುದ್ಧ ಕಠಿಣ ಕ್ರಮ

ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಸಂಬಂಧ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಆರೋಪಿಗಳು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ‘ಗ್ಯಾಂಗ್ ರೇಪ್ ಆರೋಪಿಗಳು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: NEP : 'ದೇಶದಲ್ಲಿ 'ಹೊಸ ರಾಷ್ಟ್ರೀಯ ಶಿಕ್ಷಣ ನೀತಿ' ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ'

ಆರೋಪಿಗಳ ಪತ್ತೆಗೆ ಬಲೆ ಬೀಸಿದ ಮೈಸೂರು ಪೊಲೀಸರು

ಅತ್ಯಾಚಾರಕ್ಕೊಳಗಾಗಿರುವ ವಿದ್ಯಾರ್ಥಿನಿಯ ಸ್ನೇಹಿತ ಸದ್ಯ ಶಾಕ್ ಗೆ ಒಳಗಾಗಿದ್ದಾನೆ. ಘಟನೆ ಬಗ್ಗೆ ಯಾವುದೇ ಮಾಹಿತಿ ನೀಡುವ ಸ್ಥಿತಿಯಲ್ಲಿ ಆತ ಇಲ್ಲೆ ಎನ್ನುವ ಮಾಹಿತಿ ತಿಳಿದುಬಂದಿದೆ. ಹೀಗಾಗಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸದ್ಯ 5-6  ಜನರಿಂದ ರೇಪ್ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳ ಪತ್ತೆಗೆ ಮೈಸೂರು ಪೊಲೀಸರು(Mysore Police) ಬಲೆ ಬೀಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News