ತಂಬಾಕು ಬೆಳೆಗಾರರ ಸಮಸ್ಯೆ ಕುರಿತು ಇಂದು ಸಭೆ

ರಾಜ್ಯದಲ್ಲಿ ಹೊಸದಾಗಿ ರೇಷನ್ ಕಾರ್ಡ್‌ ಗೆ  2.5 ಲಕ್ಷ ಅರ್ಜಿಗಳು ಬಂದಿದ್ದು, ಅವರೆಲ್ಲರಿಗೂ ಸಹ ರೇಷನ್ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು ಎರಡು ಮೂರು ದಿ‌ನದಲ್ಲಿ ಅನುಷ್ಠಾನ ಗೊಳಿಸಲಾಗುವುದು ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

Written by - Yashaswini V | Last Updated : Apr 15, 2020, 08:35 AM IST
ತಂಬಾಕು ಬೆಳೆಗಾರರ ಸಮಸ್ಯೆ ಕುರಿತು ಇಂದು ಸಭೆ title=
File Image

ಬೆಂಗಳೂರು: ತಂಬಾಕು ಬೆಳೆಗಾರರ ಸಮಸ್ಯೆ ಚರ್ಚಿಸಲು ಇಂದು ಮೈಸೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದ್ದಾರೆ.

ಹುಣಸೂರಿನಲ್ಲಿ ನಿನ್ನೆ ಅಧಿಕಾರಿಗಳ ಸಭೆ ನಡೆಸಿದ ಎಸ್.ಟಿ. ಸೋಮಶೇಖರ್ (ST Somashekhar) ತಂಬಾಕು ಬೆಳೆಯುವ ರೈತರು (Farmers), ಖರೀದಿದಾರರು, ಶಾಸಕರು, ಸಂಸದರ ಜೊತೆ ಮೈಸೂರಿನಲ್ಲಿ ಚರ್ಚಿಸಿ, ನಂತರ ಈ ಪ್ರದೇಶಗಳ ವ್ಯಾಪ್ತಿಯ 4 ಸಂಸದರು, 6 ಶಾಸಕರು ತಂಬಾಕು ಮಂಡಳಿ ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಸಲು ಕ್ರಮವಹಿಸಲಾಗುವುದು. ಮುಖ್ಯಮಂತ್ರಿಗಳ ಸಭೆಯಲ್ಲಿ ಕೈಗೊಂಡ ನಿರ್ಧಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಸನ್ಮಾನ ಬೇಡ, ಸಂಕಷ್ಟದಿಂದ ಪಾರಾಗೋಣ: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಕರೆ

ರಾಜ್ಯದಲ್ಲಿ ಹೊಸದಾಗಿ ರೇಷನ್ ಕಾರ್ಡ್‌ (Ration Card)ಗೆ  2.5 ಲಕ್ಷ ಅರ್ಜಿಗಳು ಬಂದಿದ್ದು, ಅವರೆಲ್ಲರಿಗೂ ಸಹ ರೇಷನ್ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು ಎರಡು ಮೂರು ದಿ‌ನದಲ್ಲಿ ಅನುಷ್ಠಾನ ಗೊಳಿಸಲಾಗುವುದು. ಯಾವುದೇ ಕಾರ್ಖಾನೆಯವರು ಕಾರ್ಮಿಕರ ವೇತನ ಕಡಿತ ಮಾಡುವಂತಿಲ್ಲ, ಹಾಗೂ ಕೆಲಸದಿಂದ ತೆಗೆಯುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ತಿಳಿಸಿದರು.

ಕೊರೊನಾವೈರಸ್  ಕೋವಿಡ್ 19 (Covid-19) ಹರಡುವುದನ್ನು ತಡೆಯಲು ಜಾರಿಗೆ ತರಲಾದ  ಲಾಕ್‍ಡೌನ್ (Lockdown) ಅವಧಿ ಮೇ 3ವಿಸ್ತರಿಸಲಾಗಿದೆ. ಈ ವರೆಗೂ ಲಾಕ್ ಡೌನ್ ಆದೇಶವನ್ನು ಜಿಲ್ಲಾಡಳಿತ ಅಚ್ಚುಕಟ್ಟಾಗಿ ನಿರ್ವಹಿಸಿದೆ, ಜನರೂ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲೂ ಬಿಗಿಯಾಗಿ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದರು.

ಮಾವಿನ ಬೆಳೆ ಬರುತ್ತಿದೆ. ಮಾವಿನಹಣ್ಣು ರಾಜ್ಯ ಒಳಗೆ ಹಾಗೂ ಹೊರಗೆ  ಸಾಗಣೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವರ್ತಕರ ಸಭೆ ಕರೆದು ಎರಡು ಮೂರು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.‌‌ ಕೋವಿಡ್-19ಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕ್ರಮಹಿಸಿದ್ದಾರೆ. ರೇಷನ್ ವಿತರಣೆಗೆ ಸಂಬಂಧಿಸಿದ ಸಣ್ಣ ಪುಟ್ಟ ಸಮಸ್ಯೆ ನಿವಾರಿಸಿ, ಪ್ರತಿ ಕುಟುಂಬಕ್ಕೂ ಸಿಗುವಂತೆ‌ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಹಣ್ಣು-ತರಕಾರಿಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಪರಿಶೀಲನೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಸಣ್ಣ ಪುಟ್ಟ ಕಾಯಿಲೆಗೆ ಚಿಕಿತ್ಸೆ ನೀಡಲು ಅನುವಾಗುವಂತೆ ಖಾಸಗಿ ಕ್ಲಿನಿಕ್ ಗಳನ್ನು ತೆರೆಯುವಂತೆ ಈಗಾಗಲೇ  ಜಿಲ್ಲಾಧಿಕಾರಿಗಳು ಖಾಸಗಿ ವೈದ್ಯರಿಗೆ ಸೂಚನೆ ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಲಾಗುವುದು ಎಂದರು.

ಸಭೆಯಲ್ಲಿ ಶಾಸಕ ಹೆಚ್.ಪಿ.ಮಂಜುನಾಥ್, ಮಾಜಿ ಸಚಿವರಾದ ಹೆಚ್. ವಿಶ್ವನಾಥ್,  ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ , ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿ.ಇ.ಒ. ಪ್ರಶಾಂತ್ ಕುಮಾರ್ ಮಿಶ್ರ, ಉಪವಿಭಾಗಾಧಿಕಾರಿ ವೀಣಾ ಮತ್ತಿತರರು ಉಪಸ್ಥಿತರಿದ್ದರು.

Trending News