ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPFs)ಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ(MHA) ಶನಿವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ಮೋದಿಯವರ ನೇತೃತ್ವದ ಸರ್ಕಾರ ಕೈಗೊಂಡಿದೆ’ ಎಂದು ಸಂಸತ ಹಂಚಿಕೊಂಡಿದ್ದಾರೆ.
‘ಸ್ವತಂತ್ರ ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸರ್ಕಾರವೊಂದು ಇಂತಹ ನಿರ್ಣಯ ಕೈಗೊಂಡು ಸ್ಥಳೀಯ ಭಾಷೆಗಳಿಗೆ ಗೌರವ ನೀಡುವ ಹಾಗೂ ಅಭಿವೃದ್ಧಿಗೆ ಪೂರಕವಾದ ಕಾರ್ಯವನ್ನು ಮಾಡಿದೆ. ಈ ನಿರ್ಣಯದಿಂದ ರಾಜ್ಯದ ಹೆಚ್ಚು ಅಭ್ಯರ್ಥಿಗಳಿಗೆ ಈ ಸೇವೆಗೆ ಸೇರುವ ಅವಕಾಶ ದೊರೆಯಲಿದೆ’ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನ ಮಂತ್ರಿ ಶ್ರೀ @narendramodi ಅವರ ನೇತೃತ್ವದ ಸರ್ಕಾರ ಕೈಗೊಂಡಿದೆ. pic.twitter.com/nNK9o2nD7P
— Pralhad Joshi (@JoshiPralhad) April 15, 2023
ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸಮನ್ಸ್ ಜಾರಿ
‘ಈ ಐತಿಹಾಸಿಕ ಹಾಗೂ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಗೃಹ ಸಚಿವ ಅಮಿತ್ ಶಾರನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ’ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ!
ಈ ಐತಿಹಾಸಿಕ ಹಾಗೂ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ಗೃಹ ಸಚಿವ ಶ್ರೀ @AmitShah ಅವರನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ.
— Pralhad Joshi (@JoshiPralhad) April 15, 2023
‘2024ರ ಜನವರಿ 1ರಿಂದ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಭಕ್ತರ ಗಮನಕ್ಕೆ : ತಿರುಪತಿಯಲ್ಲಿ ಈ ತಪ್ಪು ಮಾಡಿದ್ರೆ ದೇವರ ದರ್ಶನ ಸಿಗಲ್ಲ..!
ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಇರಲಿದೆ. ಕೇಂದ್ರದ ಈ ನಿರ್ಧಾರದಿಂದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ತಮ್ಮ ಮಾತೃಭಾಷೆ ಮತ್ತು ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಸಹಕಾರಿಯಾಗಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.