ಬೆಂಗಳೂರು : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಮೂರನೇ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಜ್ಯಾದ್ಯಂತ ಬಿಸಿಯೂಟ ಬಂದ್ ಮಾಡುವ ಮೂಲಕ ಹೋರಾಟವನ್ನು ತ್ರೀವ್ರಗೊಳಿಸುವ ನಿರ್ಧಾರ ಕೈಗೊಂಡಿದ್ದು, ವಿಧಾನಸೌಧ ಮುತ್ತಿಗೆಗೆ ಮುಂದಾಗಿದ್ದಾರೆ.
ಮೈಕೊರೆಯುವ ಚಳಿಯಲ್ಲೂ ಫ್ರೀಡಂ ಪಾರ್ಕ್ ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದ ಮಹಿಳೆಯರಿಗೆ MEP ಪಕ್ಷದ ಕಾರ್ಯಕರ್ತರು ನಿನ್ನೆ ರಾತ್ರಿ 50 ಕ್ಕೂ ಹೆಚ್ಚು ಬೆಡ್ ಶೀಟ್ ವಿತರಿಸಿದರು. ಕನಿಷ್ಟ ವೇತನ ಬೇಡಿಕೆ ಈಡೇರಿಸದ ಹಿನ್ನಲೆ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.
ಕನಿಷ್ಠ ವೇತನ ಹತ್ತು ಸಾವಿರ ಮಾಡುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದಿರುವ ಕಾರ್ಯಕರ್ತರು ಪ್ರತಿಭಟನೆ ಇನ್ನಷ್ಟೂ ತೀವ್ರಗೊಳ್ಳುವ ಸಾಧ್ಯತೆ ಇದೆ. ಇದುವರೆಗೂ ಜನಪ್ರತಿನಿಧಿಗಳು ಬಂದು ತಮ್ಮ ಬೇಡಿಕೆಗಳನ್ನು ಆಲಿಸಿಲ್ಲ ಎಂದು ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.