ಬೆಂಗಳೂರು : ರಾಜಾಜೀನಗರ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಗಾಂಧಿನಗರದ ಓಕಳಿಪುರಂನಲ್ಲಿರುವ ಪ್ರಿಯಾ ನಿವಾಸಕ್ಕೆ ಭೇಟಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್ ಬಳಿ ಕುಟುಂಬ ವರ್ಗದವರು ಅಳಲು ತೋಡಿಕೊಂಡಿದ್ದಾರೆ. ಶೋ ರೂಮ್ ಮಾಲೀಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.ಶೋ ರೂಮ್ ಮಾಲೀಕರು ಇಲ್ಲಿಯವರೆಗೆ ಏನೂ ಕೇಳಲು ಬಂದಿಲ್ಲ ಎಂದು ಸಚಿವರ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .
ಇದನ್ನೂ ಓದಿ : ಗೌತಮ್ ಅದಾನಿ ಪ್ರಕರಣ : ಬಂಧನ ಸಾಧ್ಯತೆ ಹಾಗೂ ಶಿಕ್ಷೆ ಪ್ರಮಾಣ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಈ ವೇಳೆ ಯುವತಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ದಿನೇಶ್ ಗುಂಡೂರಾವ್, ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಶೋ ರೂಮ್ ಮಾಲೀಕರನ್ನ ಕರೆದು ಚರ್ಚಿಸುವುದಾಗಿ ಪ್ರಿಯಾ ಅವರ ತಂದೆ ತಾಯಿಗೆ ಭರವಸೆ ನೀಡಿದರು.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಹುಟ್ಟು ಹಬ್ಬ ಇರುವಾಗಲೇ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ್ದು ಬೇಸರ ತರಿಸಿದೆ. ಅವರ ತಂದೆ ತಾಯಿ ಮಕ್ಕಳನ್ನ ಕಷ್ಟಪಟ್ಟು ಓದಿಸಿದ್ದಾರೆ. ಅಚಾನಕ್ಕಾಗಿ ಈ ರೀತಿ ಸಾವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತ ಪಡಿಸಿದರು. ಕುಟುಂಬ ವರ್ಗಕ್ಕೆ ಪರಿಹಾರ ಒದಗಿಸಿಕೊಡಬೇಕು. ಇನ್ಸೂರೆನ್ಸ್ ಇದೆಯಾ ಎಂಬುದನ್ನ ವಿಚಾರಿಸಬೇಕಿದೆ. ಶೋ ರೂಮ್ ಮಾಲೀಕರೊಂದಿಗೂ ಚರ್ಚಿಸಿದ ಬಳಿಕ ಪರಿಹಾರ ದೊರಕಿಸಿಕೊಡುವುದಾಗಿ ಸಚಿವರು ಹೇಳಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.