ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಮನೆಗಳ ಅಕ್ಕಪಕ್ಕದಲ್ಲಿರುವ ತೆಂಗಿನ ಚಿಪ್ಪು,ಟಬ್ ಗಳು,ಟಯರ್ ಸೇರಿದಂತೆ ಮನೆಯ ಮಹಡಿ ಮೇಲೆ ನಿಂತಿರುವ ನೀರಿನಲ್ಲಿ ಈಡಿಸ್ ಸೊಳ್ಳೆಯ ಲಾರ್ವಾಗಳು ಉತ್ಪತ್ತಿಯಾಗಿರುವ ಸ್ಥಳಗಳನ್ನ ರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪರಿಶೀಲಿಸಿದ್ದಾರೆ. 

Written by - Ranjitha R K | Last Updated : Jul 5, 2024, 02:17 PM IST
  • ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು
  • ನೀರು ನಿಂತ ಸ್ಥಳಗಳಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳ ಪರಿಶೀಲನೆ
  • ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ನಿವಾಸಿಗಳಿಗೆ ಸೂಚನೆ
ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ  title=

ಮಂಗಳೂರು : ಡೆಂಗ್ಯು ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು,ನೀರು ನಿಂತ ಸ್ಥಳಗಳಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ಪರಿಶೀಲಿಸಿದರು.‌

ಮನೆಗಳ ಅಕ್ಕಪಕ್ಕದಲ್ಲಿರುವ ತೆಂಗಿನ ಚಿಪ್ಪು,ಟಬ್ ಗಳು,ಟಯರ್ ಸೇರಿದಂತೆ ಮನೆಯ ಮಹಡಿ ಮೇಲೆ ನಿಂತಿರುವ ನೀರಿನಲ್ಲಿ ಈಡಿಸ್ ಸೊಳ್ಳೆಯ ಲಾರ್ವಾಗಳು ಉತ್ಪತ್ತಿಯಾಗಿರುವ ಸ್ಥಳಗಳನ್ನ ಪರಿಶೀಲಿಸಿದ ಸಚಿವರು,ಲಾರ್ವಾ ನಾಶಪಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೈಗೊಳ್ಳುತ್ತಿರುವ ಕ್ರಮಗಳನ್ನ ವೀಕ್ಷಿಸಿದರು.ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸ್ಥಳೀಯ ನಿವಾಸಿಗಳಿಗೆ ಸಲಹೆ ನೀಡಿದರು.‌

ಇದನ್ನೂ ಓದಿ : ಇಂದು ಮಂಡ್ಯದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಪವರ್ ಶೋ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಡೆಂಗ್ಯು ನಿಯಂತ್ರಣಕ್ಕೆ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶಪಡಿಸುವ ನಿಟ್ಟಿನಲ್ಲಿ ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಅಭಿಯಾನದ ರೀತಿಯಲ್ಲಿ ಕಾರ್ಯಕ್ರಮವನ್ನ ಹಾಕಿಕೊಂಡಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಬೇಕು.ಆರೋಗ್ಯ ಸಿಬ್ಬಂದಿಗಳು ಪ್ರತಿ ಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಜನರು ತಮ್ಮ ಮನೆಯ ಸುತ್ತಮುತ್ತಲಿನ ಸ್ಥಳಗಳಲ್ಲಿ ನೀರು ನಿಲ್ಲದಂತೆ ಎಚ್ವರಿಕೆ ವಹಿಸುವುದು ಅಗತ್ಯ ಎಂದು ಹೇಳಿದರು.  

ಡೆಂಗ್ಯು ಜ್ವರ ಹೆಚ್ಚು ಕಂಡುಬಂದಿರುವ ಹಾಟ್ ಸ್ಪಾಟ್ ಗಳನ್ನ ಗುರುತಿಸಿ, ಫೀವರ್ ಕ್ಲಿನಿಕ್ ಗಳನ್ನ ತೆರಯಲು ಸೂಚಿಸಲಾಗಿದೆ.ಇಂಥಹ ಸ್ಥಳಗಳಲ್ಲಿ ಯಾರಿಗೆ ಜ್ವರ ಬಂದರೂ ಡೆಂಗ್ಯು ಟೆಸ್ಟಿಂಗ್ ನಡೆಸಿ ಸಾಧ್ಯವಾದಷ್ಟು ಮುಂಚಿತವಾಗಿಯೇ ಪತ್ತೆ ಮಾಡಿ ಚಿಕಿತ್ಸೆ ಒದಗಿಸಲು ಸೂಚಿಸಲಾಗಿದೆ. ಇದರಿಂದ ಸಾವುಗಳನ್ನ ತಡೆಯಲು ಸಾಧ್ಯ.ಡೆಂಗ್ಯು ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಗ್ರಾಮೀಣಾಭಿವೃದ್ದಿ ಇಲಾಖೆ,ಜಿಲ್ಲಾಡಳಿತ, ಸ್ಥಳೀಯ ಪಾಲಿಕೆ ಅಧಿಕಾರಿಗಳು ಹಾಗೂ ಶಿಕ್ಷಕರನ್ನ ಬಳಸಿಕೊಳ್ಳಲಾಗುತ್ತಿದೆ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ಇದನ್ನೂ ಓದಿ : ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಆರ್ಭಟ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News