ಸರ್ಕಾರ 108 ಸಿಬ್ಬಂದಿಗಳ ವೇತನ ಬಾಕಿ ಉಳಿಸಿಕೊಂಡಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏಜನ್ಸಿ ಹಾಗೂ ಚಾಲಕರ ನಡುವಿನ ಸಮಸ್ಯೆಯನ್ನ ಇಲಾಖೆ ಮಧ್ಯಸ್ಥಿಕೆ ವಹಿಸಿ ಸರಿಪಡಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

Written by - Krishna N K | Last Updated : Nov 14, 2024, 08:03 PM IST
    • ಅಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ
    • ವೇತನವನ್ನ ಕಾಲ ಕಾಲಕ್ಕೆ ಸರಿಯಾಗಿ ಸಂಬಂಧಿಸಿದ ಏಜನ್ಸಿಯವರಿಗೆ ಸರ್ಕಾರ ನೀಡುತ್ತಾ ಬಂದಿದೆ
    • ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಸರ್ಕಾರ 108 ಸಿಬ್ಬಂದಿಗಳ ವೇತನ ಬಾಕಿ ಉಳಿಸಿಕೊಂಡಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ title=

ಬೆಂಗಳೂರು : 108 ಆರೋಗ್ಯ ಕವಚದ ಅಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅಂಬ್ಯುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನ ಕಾಲ ಕಾಲಕ್ಕೆ ಸರಿಯಾಗಿ ಸಂಬಂಧಿಸಿದ ಏಜನ್ಸಿಯವರಿಗೆ ಸರ್ಕಾರ ನೀಡುತ್ತಾ ಬಂದಿದೆ ಎಂದರು. 

ಚಾಲಕರ ವೇತನ ಬಾಕಿ ಉಳಿಸಿಕೊಳ್ಳದಂತೆ ಇ.ಎಂ.ಆರ್ ಏಜನ್ಸಿಯವರಿಗೂ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಅಗಸ್ಟ್, ಸೆಪ್ಟೆಂಬರ್ ತಿಂಗಳ ವೇತನವನ್ನ ಏಜನ್ಸಿಯವರು ಚಾಲಕರಿಗೆ ಪಾವತಿ ಮಾಡಿದ್ದಾರೆ. ಅಕ್ಟೋಬರ್ ತಿಂಗಳ ವೇತನ ಪಾವತಿ ಕೂಡ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. 

ಇದನ್ನೂ ಓದಿ:ಮೊನ್ನೆ ಮದುವೆಯಾದ 20ರ ಯುವತಿ ಅಂಟಿ ತರ ಕಾಣ್ತಾಳೆ.. ಆದ್ರೆ ನಯತಾರಾ 40 ರಲ್ಲೂ 20ರ ಲುಕ್‌..! ಫೊಟೋಸ್‌ ಇಲ್ಲಿವೆ..

ವಿಪಕ್ಷ ನಾಯಕರಾದ ಆರ್. ಅಶೋಕ್ ಅರೆಬರೆ ಮಾಹಿತಿ ಪಡೆದು ಅನಗತ್ಯ ಗೊಂದಲ‌ ಸೃಷ್ಟಿಸುತ್ತಿದ್ದಾರೆ. ಒಬ್ಬ ವಿಪಕ್ಷ ನಾಯಕರಾಗಿ ವಾಸ್ತವಾಂಶಗಳನ್ನ ಅರಿತ ಮಾತನಾಡಬೇಕು. 108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏಜನ್ಸಿ ಹಾಗೂ ಚಾಲಕರ ನಡುವಿನ ಸಮಸ್ಯೆಯನ್ನ ಇಲಾಖೆ ಮಧ್ಯಸ್ಥಿಕೆ ವಹಿಸಿ ಸರಿಪಡಿಸುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠಿ ವೇತನದ ಜಾರಿಗೊಳಿಸಿದ್ದಲ್ಲದೇ ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ ಶೇ 45 ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. 

ಇದೀಗ 108 ಸಿಬ್ಬಂದಿಗಳು ಶೇ 45 ರಷ್ಟು ವೇತನ ಹೆಚ್ಚಳ ಮಾಡಿರುವುದನ್ನ ಕಡಿತಗೊಳಿಸದಂತೆ ಬೇಡಿಕೆ ಇಡುತ್ತಿದ್ದಾರೆ. ನಮ್ಮ ಸರ್ಕಾರ ನಿಯಮಾನುಸಾರ ಕನಿಷ್ಠ ವೇತನ ನೀಡಲು ಬದ್ಧವಾಗಿದ್ದು, ಅದರಂತೆ ಅನುದಾನವನ್ನ ನೀಡುತ್ತಾ ಬಂದಿದೆ. ಪ್ರತಿಯೊಬ್ಬ ಅಂಬ್ಯುಲೆನ್ಸ್ ಚಾಲಕರಿಗೆ 35 ಸಾವಿರಕ್ಕೂ ಹೆಚ್ವು ವೇತನ ದೊರೆಯುತ್ತಿದೆ. ಇದರ ಮೇಲೂ ಮೂಲ ವೇತನದಲ್ಲಿ ಶೇ 45 ರಷ್ಟು ಹೆಚ್ಚಳ ಮಾಡುವ ಬಗ್ಗೆ ಸಿಬ್ಬಂದಿಗಳು ಬೇಡಿಕೆ ಇಟ್ಟಿದ್ದು, ನಿಯಮಬಾಹಿರವಾಗಿ ಈ ಕ್ರಮ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. 

ಇದನ್ನೂ ಓದಿ:49 ನೇ ವಯಸ್ಸಿನಲ್ಲಿ ತನಗಿಂತ 19 ವರ್ಷ ಚಿಕ್ಕ ಉದ್ಯಮಿಯೊಂದಿಗೆ ಡೇಟಿಂಗ್! ಲವರ್‌ ತೊಡೆಯ ಮೇಲೆ ಕುಳಿತ ಖ್ಯಾತ ನಟಿ ಫೋಟೋ ವೈರಲ್‌

ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ : 2024-25 ನೇ ಸಾಲಿನಲ್ಲಿ 108-ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 260.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ವಾರ್ಷಿಕ ರೂ. 162.40 ಕೋಟಿಗಳ ಅನುದಾನವನ್ನು ಬಿಡುಗಡೆಗೊಳಿಸಲಾಗುತ್ತಿದೆ.. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್‌.ಐ ಗ್ರೀನ್‌ ಹೆಲ್ತ್‌ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ಪ್ರತಿ ತ್ರೈಮಾಸಿಕಕ್ಕೆ  ರೂ. 40.60 ಕೋಟಿಗಳಂತೆ ವಾರ್ಷಿಕ ರೂ. 162.40 ಕೋಟಿಗಳ ಅನುದಾನವನ್ನು ಕಾಲ ಕಾಲಕ್ಕೆ ಬಿಡುಗಡೆಗೊಳಿಸಲಾಗುತ್ತಿದೆ. 

ಈ ಬಗ್ಗೆ 108 ಸಿಬ್ಬಂದಿಗಳನ್ನ ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ನ್ಯಾಯಯುತ ಕನಿಷ್ಢ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. 

ಹಿಂದಿನ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನ ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಟೆಂಡರ್ ಗಳನ್ನ ಕರೆಯದೇ ಜಿವಿಕೆ ಇಎಂಆರ್ ಸಂಸ್ಥೆಯೊಂದಿಗೆ ಒಡಂಬಡಿಕೆಯ ಮೂಲಕವೇ 108 ವ್ಯವಸ್ಥೆಯನ್ನ ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಸರ್ಕಾರ ಬಂದ ಬಳಿಕ ನಿಯಮನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತಿದೆ. ವ್ಯವಸ್ಥೆಯಲ್ಲಾದ‌ ಲೋಪಗಳನ್ನ ಸರಿಪಡಿಸುತ್ತಿರುವಾಗ  ಸಿಬ್ಬಂದಿಗಳು ಸಹಕರಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News