ಆನೆ ದಾಳಿಯಿಂದ ಅರಣ್ಯ ಸಿಬ್ಬಂದಿ ಮಾದಣ್ಣ ನಿಧನ: ಮೃತರ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ- ಸಚಿವ ಈಶ್ವರ ಖಂಡ್ರೆ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದ ಬಳಿ ಮೃತ ಮಾದಣ್ಣನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ನಮನ ಸಲ್ಲಿಸಿದ ಈಶ್ವರ ಖಂಡ್ರೆ, ಆನೆಗಳ ಇರುವಿಕೆಯನ್ನು ತಿಳಿಯುವಲ್ಲಿ ನೈಪುಣ್ಯತೆ ಹೊಂದಿದ್ದ ಮಾದಣ್ಣ ನಿಧನದಿಂದ ಇಲಾಖೆ ಒಬ್ಬ ಪ್ರಾಮಾಣಿಕ ಸಿಬ್ಬಂದಿಯನ್ನು ಕಳೆದುಕೊಂಡಿದೆ ಎಂದರು.

Written by - Prashobh Devanahalli | Last Updated : Jul 12, 2024, 05:19 PM IST
    • ಆನೆ ದಾಳಿಗೆ ತುತ್ತಾಗಿ ಮೃತಪಟ್ಟ ಸಿಬ್ಬಂದಿ ಮಾದಣ್ಣ
    • ಮಾದಣ್ಣ ನಿಧನಕ್ಕೆ ಸಂತಾಪ ಸೂಚಿಸಿರುವ ಸಚಿವ ಈಶ್ವರ ಖಂಡ್ರೆ
    • ಮೃತರ ಕುಟುಂಬಕ್ಕೆ ಒಂದು ವಾರದೊಳಗೆ 25 ಲಕ್ಷ ರೂ. ಪರಿಹಾರ
ಆನೆ ದಾಳಿಯಿಂದ ಅರಣ್ಯ ಸಿಬ್ಬಂದಿ ಮಾದಣ್ಣ ನಿಧನ: ಮೃತರ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ- ಸಚಿವ ಈಶ್ವರ ಖಂಡ್ರೆ title=
File Photo

ಬೆಂಗಳೂರು: ಬನ್ನೇರುಘಟ್ಟ ವನ್ಯಜೀವಿ ವಲಯದ ಕಲ್ಕೆರೆ ಗಸ್ತಿನಲ್ಲಿ ಕಾವಲು ಕಾಯುವಾಗ ಆನೆ ದಾಳಿಗೆ ತುತ್ತಾಗಿ ಮೃತಪಟ್ಟ ಸಿಬ್ಬಂದಿ ಮಾದಣ್ಣ ನಿಧನಕ್ಕೆ ಸಂತಾಪ ಸೂಚಿಸಿರುವ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಮೃತರ ಕುಟುಂಬಕ್ಕೆ ಒಂದು ವಾರದೊಳಗೆ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್-ಪ್ರಜ್ವಲ್ ರೇವಣ್ಣ ಭೇಟಿ! ಮುಖಾಮುಖಿ ವೇಳೆ ಆಗಿದ್ದೇನು?

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದ ಬಳಿ ಮೃತ ಮಾದಣ್ಣನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ನಮನ ಸಲ್ಲಿಸಿದ ಈಶ್ವರ ಖಂಡ್ರೆ, ಆನೆಗಳ ಇರುವಿಕೆಯನ್ನು ತಿಳಿಯುವಲ್ಲಿ ನೈಪುಣ್ಯತೆ ಹೊಂದಿದ್ದ ಮಾದಣ್ಣ ನಿಧನದಿಂದ ಇಲಾಖೆ ಒಬ್ಬ ಪ್ರಾಮಾಣಿಕ ಸಿಬ್ಬಂದಿಯನ್ನು ಕಳೆದುಕೊಂಡಿದೆ ಎಂದರು.

ಅನುಕಂಪದ ನೌಕರಿ:

ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಅರಣ್ಯ ಇಲಾಖೆಯಲ್ಲಿ ಉದ್ಯೋಗ ದೊರಕಿಸುವ ಪ್ರಯತ್ನ ಮಾಡುವ ಭರವಸೆಯನ್ನೂ ಸಚಿವರು ನೀಡಿದರು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ದೀಕ್ಷಿತ್ ಮತ್ತಿತರರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ಇದನ್ನೂ ಓದಿ: “ನಾನು ಹೋರಡುತ್ತೇನೆ; ನೀವು ನನ್ನನ್ನು ನೋಡಲೂ ಸಾಧ್ಯವಾಗುವುದಿಲ್ಲ”- ಭಾರತ ತೊರೆಯುವ ವದಂತಿ ಮಧ್ಯೆ ವಿರಾಟ್ ಕೊಹ್ಲಿ ಸೆನ್ಸೇಷನಲ್ ಹೇಳಿಕೆ!

ಕಳೆದ ದಿನ ಮಧ್ಯರಾತ್ರಿ 12:30ರ ಸುಮಾರಿನಲ್ಲಿ ಕಲ್ಕೆರೆ ಗಸ್ತಿನ ದೊಡ್ಡ ಬಂಡೆ ಅರಣ್ಯ ಪ್ರದೇಶದ ಬಳಿ ಕಾವಲು ಕಾಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯ ದಾಳಿಯಿಂದ ಮಾದಣ್ಮ ಮೃತಪಟ್ಟಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News