ಕೇರಳ, ಕೊಡಗು ಪ್ರವಾಹ ಪರಿಹಾರಕ್ಕಾಗಿ ಎರಡು ತಿಂಗಳ ವೇತನ ನೀಡಿದ ಸಚಿವ ಜಿ.ಟಿ.ದೇವೇಗೌಡ

ಭಾರೀ ಮಳೆಗೆ ಕರ್ನಾಟಕದ ಕೊಡಗು ಮತ್ತು ಕೇರಳ ರಾಜ್ಯ ಅಕ್ಷರಶಃ ತತ್ತರಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳ ನೆರವಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮುಂದಾಗಿದ್ದಾರೆ. 

Last Updated : Aug 21, 2018, 05:57 PM IST
ಕೇರಳ, ಕೊಡಗು ಪ್ರವಾಹ ಪರಿಹಾರಕ್ಕಾಗಿ ಎರಡು ತಿಂಗಳ ವೇತನ ನೀಡಿದ ಸಚಿವ ಜಿ.ಟಿ.ದೇವೇಗೌಡ title=

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕರ್ನಾಟಕದ ಕೊಡಗು ಮತ್ತು ಕೇರಳ ರಾಜ್ಯ ಅಕ್ಷರಶಃ ತತ್ತರಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳ ನೆರವಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮುಂದಾಗಿದ್ದಾರೆ. 

ಪ್ರವಾಹದಿಂದಾಗಿ ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತರಾಗಿರುವ ಕೊಡಗು ಮತ್ತು ಕೇರಳ ಜನತೆಗೆ ರಾಜ್ಯದ ಮೂಳೆ ಮೂಲೆಗಳಿಂದ ಜನತೆ ನೆರವಿನ ಸಹಾಯಹಸ್ತ ಚಾಚುತ್ತಿದ್ದಾರೆ. ಇದಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರೂ ಹೊರತಾಗಿಲ್ಲ. 

ಕೇರಳ ಮತ್ತು ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಕ್ಕಾಗಿ ಸಚಿವ್ವ ಜಿ.ಟಿ.ದೇವೇಗೌಡ ಅವರು ತಮ್ಮ ಒಂದು ತಿಂಗಳ ವೇತನವನ್ನು ಕರ್ನಾಟಕ ಮುಖ್ಯಮಂತ್ರಿ ನೈಸರ್ಗಿಕ ವಿಪತ್ತು ಪರಿಹಾರ ನಿಧಿಗೆ ಮತ್ತು ಒಂದು ತಿಂಗಳ ವೇತನವನ್ನು ಕೇರಳ ರಾಜ್ಯದ ಅತಿವೃಷ್ಟಿ ಪರಿಹಾರ ನಿಧಿಗೆ ನೀಡಿದ್ದಾರೆ. 

ಅಲ್ಲದೆ, ರಾಜ್ಯ ಸರ್ಕಾರವೂ ಕೂಡ ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಈಗಾಗಲೇ 200 ಕೋಟಿ ರೂ.ಗಳ ನೆರವು ನೀಡಿದ್ದು, 100 ಕೋಟಿ ರೂ.ಗಳ ನೆರವು ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರವನ್ನು ಕೇಳಿದ್ದಾರೆ.
 

Trending News