Govind Karjol : 'ಉಕ್ರೇನ್‌ನಲ್ಲಿ ಸಿಲುಕಿದ್ದಾರೆ ಬೆಳಗಾವಿಯ ಇಬ್ಬರು, ವಿಜಯಪುರ ಓರ್ವ ವಿದ್ಯಾರ್ಥಿ'

ಬೆಳಗಾವಿಯವರು ಇಬ್ಬರು, ವಿಜಯಪುರ ಓರ್ವ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಸರ್ಕಾರ ಹೆಚ್ಚಿನ ಪ್ರಯತ್ನ ಮಾಡಿ ವಿದ್ಯಾರ್ಥಿಗಳನ್ನ ಮರಳಿ ಸುರಕ್ಷಿತವಾಗಿ ಕರೆಸುತ್ತದೆ ಎಂದರು.

Written by - Channabasava A Kashinakunti | Last Updated : Feb 24, 2022, 05:33 PM IST
  • ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳನ್ನ ಸುರಕ್ಷಿತ
  • ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ
  • ಬೆಳಗಾವಿಯವರು ಇಬ್ಬರು, ವಿಜಯಪುರ ಓರ್ವ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ
Govind Karjol : 'ಉಕ್ರೇನ್‌ನಲ್ಲಿ ಸಿಲುಕಿದ್ದಾರೆ ಬೆಳಗಾವಿಯ ಇಬ್ಬರು, ವಿಜಯಪುರ ಓರ್ವ ವಿದ್ಯಾರ್ಥಿ' title=

ಬೆಳಗಾವಿ : ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆಸುವ ಪ್ರಯತ್ನ ಸರ್ಕಾರ ಮಾಡ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. 

ಈ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಗೋವಿಂದ ಕಾರಜೋಳ(Govind Karjol), ಬೆಳಗಾವಿಯವರು ಇಬ್ಬರು, ವಿಜಯಪುರ ಓರ್ವ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಸರ್ಕಾರ ಹೆಚ್ಚಿನ ಪ್ರಯತ್ನ ಮಾಡಿ ವಿದ್ಯಾರ್ಥಿಗಳನ್ನ ಮರಳಿ ಸುರಕ್ಷಿತವಾಗಿ ಕರೆಸುತ್ತದೆ ಎಂದರು.

ಇದನ್ನೂ ಓದಿ : ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ ಬೊಮ್ಮಾಯಿ ಭರವಸೆ

ವಿದ್ಯಾರ್ಥಿಗಳು ಉಕ್ರೇನ್(karnataka students in Ukraine) ನಲ್ಲಿ ಸಿಲುಕರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ನೆರವಿಗೆ ಯಾರಾದರೂ ಹೋಗುವಂತೆ ತಿಳಿಸಲಾಗಿದೆ. ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳು ಪೋಷಕರ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ. ಸಧ್ಯ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.

No description available.

ಉಕ್ರೇನ್ ನಲ್ಲಿ ಸಿಲುಕಿಹಾಕಿಕೊಂಡಿರುವ ಬೆಳಗಾವಿ(Belagavi)ಯ ಇಬ್ಬರು ವಿದ್ಯಾರ್ಥಿಗಳು ಪ್ರಿಯಾ ಭಗವಂತ ನಿಡಗುಂದಿ, ಅಮೋಘಾ ಚೌಗಲಾ ಎಂಬುವವರು ಸಿಲುಕಿಕೊಂಡಿದ್ದಾರೆ. ಪ್ರಿಯಾ ನಿಡಗುಂದಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ನಿವಾಸಿಯಾಗಿದ್ದಾರೆ.ಅಮೋಘಾ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿಯಾಗಿದ್ದಾರೆ. ಈಗ ಈ ಇಬ್ಬರು ವಿದ್ಯಾರ್ಥಿಗಳು ಕಾಲೇಜಿನ ವಸತಿ ನಿಲಯದಲ್ಲೇ ಉಳಿದುಕೊಂಡಿದ್ದಾರೆ. ಉಕ್ರೇನ್ ನಲ್ಲಿ ಯುದ್ಧ ಆರಂಭವಾದ ಹಿನ್ನೆಲೆ ಇಬ್ಬರು ವಿದ್ಯಾರ್ಥಿಗಳ ಕುಟುಂಬಸ್ಥರ ಮನೆಯಲ್ಲಿ ಆತಂಕ ಶುರುವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News