ಮೈಸೂರಿನ ಕೊಲಂಬಿಯಾ ಏಷಿಯಾ ಬಳಿ ಸಚಿವ ಜಿ.ಟಿ. ದೇವೇಗೌಡ ಕಾರು ಅಪಘಾತ

ಮಳವಳ್ಳಿಗೆ ಪ್ರಯಾಣಿಸುತ್ತಿದ್ದ ವೇಳೆ ಸಂಭವಿಸಿದ ಅವಘಡ, ಕೂದಲೆಳೆ ಅಂತರದಲ್ಲಿ ಪಾರಾದ ಸಚಿವ ಜಿ.ಟಿ. ದೇವೇಗೌಡ.

Last Updated : Apr 2, 2019, 01:27 PM IST
ಮೈಸೂರಿನ ಕೊಲಂಬಿಯಾ ಏಷಿಯಾ ಬಳಿ ಸಚಿವ ಜಿ.ಟಿ. ದೇವೇಗೌಡ ಕಾರು ಅಪಘಾತ title=

ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಮೈಸೂರಿನ ಕೊಲಂಬಿಯ ಏಷಿಯಾ ಆಸ್ಪತ್ರೆ ಬಳಿ ನಡೆದಿದ್ದು, ಸಚಿವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಳವಳ್ಳಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಕಾರಿನಲ್ಲಿದ್ದ ಸಚಿವರೂ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಯಾರಿಗೂ ಯಾವುದೇ ರೀತಿಯ ತೊಂದರೆಯಾಗಿಲ್ಲ.

ಅಪಘಾತದಲ್ಲಿ ಯಾವುದೇ ತೊಂದರೆಯಾಗದ ಹಿನ್ನೆಲೆಯಲ್ಲಿ ಆ ಕಾರನ್ನು ಅಲ್ಲಿಯೇ ಬಿಟ್ಟು ಕಾರ್ಯಕ್ರಮಕ್ಕೆ ತೆರಳಬೇಕಾದ್ದರಿಂದ ಸಚಿವರು ಬೇರೆ ಕಾರಿನಲ್ಲಿ ಮಳವಳ್ಳಿ ಕಡೆಗೆ ಪ್ರಯಾಣಿಸಿದ್ದಾರೆ. 
 

Trending News