ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಬಸವ ತತ್ವದ ಆಧಾರದ ಮೇಲೆ ಆಡಳಿತ ನಡೆಸುತ್ತಿದೆ. ಹಾಗಾಗಿ ವೀರಶೈವ- ಲಿಂಗಾಯತ ಸಮುದಾಯ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ (Industries Minister MB Patil)ಹೇಳಿದರು.
ನಗರದ ಕನಕ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Congress candidate Star Chandru) ಬೆಂಬಲಿತ ವೀರಶೈವ-ಲಿಂಗಾಯತ ಸಮಾಜ ಸಭೆ (Veerashaiva-Lingayat Samaj Sabha) ಉದ್ಘಾಟಿಸಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ, ಬಿಜೆಪಿ ಸಮಾನತೆಯ ಹರಿಕಾರ ಬಸವಣ್ಣನವರ ತತ್ವ ಸಿದ್ಧಾಂತವನ್ನು ಎಂದಿಗೂ ಒಪ್ಪುವುದಿಲ್ಲ; ಅಷ್ಟೇ ಅಲ್ಲದೆ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂಬುದನ್ನೂ ಆ ಪಕ್ಷ ಒಪ್ಪುವುದಿಲ್ಲ. ಆದರೆ, ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರ ಸಂವಿಧಾನ ಮತ್ತು ಬಸವಣ್ಣನವರ ಸಿದ್ಧಾಂತದ ಮೇಲೆ ಹೆಚ್ಚಿನ ನಂಬಿಕೆ ಇಟ್ಟಿದೆ ಎಂದು ವಿವರಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly Elections) ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಬಿ.ಎಸ್ ಯಡಿಯೂರಪ್ಪ (BS Yeddyurappa) ಅವರ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಆ ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ ಎಂದರು.
ಇದನ್ನೂ ಓದಿ- ಲೋಕಸಭಾ ಚುನಾವಣೆಯ ಬಳಿಕ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಎಚ್‌ಡಿಡಿ ಭವಿಷ್ಯ
ವೀರಶೈವ-ಲಿಂಗಾಯತ ಸಮುದಾಯ ಓಲೈಕೆ ಮಾಡಲು ಈ ತಂತ್ರ ಮಾಡಿರುವ ಬಿಜೆಪಿ ವರಿಷ್ಠರು ವಿಜಯೇಂದ್ರ ಅವರ ಅವಧಿಯನ್ನು ಕೇವಲ 3 ವರ್ಷ ಮಾತ್ರ ನಿಗದಿಗೊಳಿಸಿದ್ದಾರೆ. ಅಂದರೆ, ಮುಂದಿನ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಅವರು ಆ ಸ್ಥಾನದಲ್ಲಿ ಇರುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಆ ಪಕ್ಷದ ಅಧ್ಯಕ್ಷ ಸ್ಥಾನವು ಲಿಂಗಾಯತ ಸಮುದಾಯದ ಕೈತಪ್ಪಲಿದೆ. ಆದರೆ ಕಾಂಗ್ರೆಸ್ ಪಕ್ಷ ಸಮುದಾಯದ ಹೆಚ್ಚಿನವರನ್ನು ಮುಖ್ಯಮಂತ್ರಿಯಾಗಲು ಅವಕಾಶ ಕಲ್ಪಿಸಿದೆ ಎಂದು ಪಾಟೀಲ ನುಡಿದರು.
ಈ ಹಿಂದೆ 20-20 ತಿಂಗಳ ಅಧಿಕಾರ ಹಂಚಿಕೆ ಸೂತ್ರದಂತೆ ಮುಖ್ಯಮಂತ್ರಿಯಾದ ಎಚ್.ಡಿ.ಕುಮಾರಸ್ವಾಮಿ (HD Kumaraswamy) 20 ತಿಂಗಳು ಆಡಳಿತ ನಡೆಸಿದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಬಿಡದೆ ವಂಚಿಸಿದ್ದನ್ನು ವೀರಶೈವ- ಲಿಂಗಾಯತರು ಮರೆತಿಲ್ಲ. ಈ ರೀತಿಯಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿ, ಈಗ ಯಡಿಯೂರಪ್ಪನವರನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರಿಗೆ ಈ ಬಾರಿ ಮಂಡ್ಯ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.
ಗ್ಯಾರಂಟಿ ಯೋಜನೆಗಳಿಂದ ( Guarantee Scheme) ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಮಹಿಳೆಯರಿಗೆ ಹೆಚ್ಚಿನ ಸವಲತ್ತು ದೊರಕಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಮಹಿಳೆಯರು, ರೈತರು, ಕಾರ್ಮಿಕರಿಗೆ ಇನ್ನಷ್ಟು ಹೆಚ್ಚು ಲಾಭ ಸಿಗಲಿದೆ. ಈ ನಿಟ್ಟಿನಲ್ಲಿ, ಮಂಡ್ಯ ಲೋಕಸಭಾ ಕ್ಷೇತ್ರ (Mandya Lok Sabha Constituency)ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರಿಗೆ (Venkataramanegowda) ಮತ ನೀಡುವ ಮೂಲಕ ಸಮುದಾಯದ ಜನತೆಯು ಪಕ್ಷಕ್ಕೆ ಬಲ ತುಂಬಬೇಕು ಎಂದರು.
ಇದನ್ನೂ ಓದಿ- Voter ID ಕಳೆದುಹೋಗಿದೆಯೇ? ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು!
ಮುಂದಿನ ದಿನಗಳಲ್ಲಿ ವೀರಶೈವ- ಲಿಂಗಾಯತ ಸಮುದಾಯದ ಜನತೆಗೆ ರಾಜಕೀಯ ಸ್ಥಾನಮಾನ ದೊರಕಿಸಿಕೊಡಲು ಬದ್ಧವಾಗಿರುವುದಾಗಿಯೂ ತಿಳಿಸಿದರು.
ಈ ಸಮಾವೇಶದ ಆಯೋಜಕರಾದ ವೀರಶೈವ-ಲಿಂಗಾಯತ ಮುಖಂಡರಾದ ಆಲಕೆರೆ ಮಹದೇಶ್, ಪ್ರಫುಲ್ಲಚಂದ್ರ, ವಕೀಲ ಎಂ.ಗುರುಪ್ರಸಾದ್, ಸುಂಡಹಳ್ಳಿ ಸೋಮಶೇಖರ್, ಮಲ್ಲಿಗೆರೆ ಆನಂದ್, ಬೇವುಕಲ್ಲು ಮೋಹನ್, ಸೌದೇನಹಳ್ಳಿ ರಮೇಶ್, ಅಮೃತಿ ರಾಜಶೇಖರ್ ಮತ್ತಿತರರನ್ನು ಸಚಿವ ಎನ್.ಚಲುವರಾಯಸ್ವಾಮಿ ಅಭಿನಂದಿಸಿದರು.
ಬಳಿಕ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ (Agriculture Minister Chaluvarayaswamy) ಅವರು, ಮಂಡ್ಯ ಜಿಲ್ಲೆಯ ಜನರು ಮರೆಯದಿರುವಂತಹ ಯಾವುದಾದರೂ ಕೊಡುಗೆಯನ್ನು ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರಾ? ನಿಜವಾಗಲೂ ಅವರ ಕೊಡುಗೆ ದೊಡ್ಡ ಶೂನ್ಯ. ಇಲ್ಲಸಲ್ಲದ ಸುಳ್ಳು ಭರವಸೆಗಳನ್ನು ಹೇಳಿದರೆ ನಂಬಲು ಸಾಧ್ಯವೇ ಎಂದು ಛೇಡಿಸಿದರು.
ಈ ವೇಳೆ ಜಿಪಂ ಮಾಜಿ ಉಪಾಧ್ಯಕ್ಷೆ ಜಗದಾಂಬಾ ಶಿವರಾಜ್, ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ, ಆಲಕೆರೆ ಸರ್ವಮಂಗಳಾ ಸೇರಿದಂತೆ ಸೇರಿದಂತೆ ಜೆಡಿಎಸ್, ಬಿಜೆಪಿ ತೊರೆದ ನೂರಾರು ಜನರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಮಾಜಿ ಶಾಸಕ ಎಂ.ಶ್ರೀನಿವಾಸ್, ಎಂ.ಎಸ್.ಚಿದಂಬರ್, ಕುರುಬರ ಸಂಘದ ಅಧ್ಯಕ್ಷ ಸುರೇಶ್ ಮತ್ತಿತರರು ಇದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.