ಜನವರಿಗೆ ಏಕಗವಾಕ್ಷಿ ವ್ಯವಸ್ಥೆ ಸಿದ್ಧ: ಎಂ‌.ಬಿ. ಪಾಟೀಲ

ಹೂಡಿಕೆ ಯೋಜನೆಗಳಿಗೆ ಮಂಜೂರಾತಿ, ಕೈಗಾರಿಕಾ ನಿವೇಶನ, ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಸಿಎ ನಿವೇಶನ ಇತ್ಯಾದಿಗಳ ಹಂಚಿಕೆ ಈಗಿರುವ ಸಂಕೀರ್ಣ ಮತ್ತು ಬಹುಹಂತಗಳ ಅನುಮತಿ ವಿಧಾನದಿಂದ ವಿಳಂಬವಾಗುತ್ತಿದೆ. ಇದಕ್ಕೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಇತಿಶ್ರೀ ಹಾಡಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು. 

Written by - Prashobh Devanahalli | Edited by - Krishna N K | Last Updated : Nov 26, 2024, 07:03 PM IST
    • ಜನವರಿಯ ವೇಳೆಗೆ ಏಕಗವಾಕ್ಷಿ ಮಂಜೂರಾತಿ
    • ಡಿಸೆಂಬರ್ ಹೊತ್ತಿಗೆ ಈ ತಂತ್ರಾಂಶದ ಭಾಗವಾಗುವಂತೆ ಗಡುವು
    • ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಾಹಿತಿ
ಜನವರಿಗೆ ಏಕಗವಾಕ್ಷಿ ವ್ಯವಸ್ಥೆ ಸಿದ್ಧ: ಎಂ‌.ಬಿ. ಪಾಟೀಲ title=

ಬೆಂಗಳೂರು: ರಾಜ್ಯ ಸರಕಾರವು ಸರಳ, ಸುಗಮ ಮತ್ತು ಉದ್ಯಮಸ್ನೇಹಿ ಉಪಕ್ರಮಗಳಿಗೆ ಬದ್ಧವಾಗಿದ್ದು, ಜನವರಿಯ ವೇಳೆಗೆ ಏಕಗವಾಕ್ಷಿ ಮಂಜೂರಾತಿ ವ್ಯವಸ್ಥೆಗೆ ಅಗತ್ಯವಿರುವ ತಂತ್ರಾಂಶವನ್ನು ಸಿದ್ಧಪಡಿಸಲಾಗುವುದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳಿಗೆಲ್ಲ ಡಿಸೆಂಬರ್ ಹೊತ್ತಿಗೆ ಈ ತಂತ್ರಾಂಶದ ಭಾಗವಾಗುವಂತೆ ಗಡುವು ಕೊಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ತಿಳಿಸಿದ್ದಾರೆ.

ಈ ಸಂಬಂಧ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಇ-ಆಡಳಿತ ಇಲಾಖೆಯ ಮುಖ್ಯಸ್ಥ ಉಜ್ವಲ್ ಘೋಷ್ , ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದರು.

ಇದನ್ನೂ ಓದಿ:2 ಗ್ಯಾರಂಟಿಗಳು ರದ್ದಾದ್ರೆ ಅನುದಾನ ಬರೋದು ಸರಿಯಾಗುತ್ತೆ

ಬಳಿಕ ಮಾತನಾಡಿದ ಅವರು, ಹೂಡಿಕೆ ಯೋಜನೆಗಳಿಗೆ ಮಂಜೂರಾತಿ, ಕೈಗಾರಿಕಾ ನಿವೇಶನ, ಕೈಗಾರಿಕಾ ಪ್ರದೇಶಗಳಲ್ಲಿ ಇರುವ ಸಿಎ ನಿವೇಶನ ಇತ್ಯಾದಿಗಳ ಹಂಚಿಕೆ ಈಗಿರುವ ಸಂಕೀರ್ಣ ಮತ್ತು ಬಹುಹಂತಗಳ ಅನುಮತಿ ವಿಧಾನದಿಂದ ವಿಳಂಬವಾಗುತ್ತಿದೆ. ಇದಕ್ಕೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಇತಿಶ್ರೀ ಹಾಡಲಾಗುವುದು. ಇದಕ್ಕಾಗಿ ಮೈಕ್ರೋಸಾಫ್ಟ್ ಕಂಪನಿಯು ಸಾಫ್ಟ್‌ವೇರ್ ಸಿದ್ಧಪಡಿಸಿದೆ. ಇದರೊಂದಿಗೆ ಎಲ್ಲ ಇಲಾಖೆಗಳ ಜೋಡಣೆ ಬಾಕಿದ್ದು, ಅದನ್ನು ತ್ವರಿತವಾಗಿ ಮಾಡಬೇಕು. ಈ ಉಪಕ್ರಮದ ಪರಿಣಾಮಕಾರಿ ಅನುಷ್ಠಾನದ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿಗಳು ಸದ್ಯದಲ್ಲೇ ಇನ್ನೊಂದು ಸಭೆ ನಡೆಸಲಿದ್ದಾರೆ ಎಂದರು.

ಕೈಗಾರಿಕಾ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆಯನ್ನು ತರಲಾಗುವುದು ಎಂದು ನಾವು ಮಾತು ಕೊಟ್ಟಿದ್ದೆವು.  ಹೊಸ ತಂತ್ರಾಂಶವನ್ನು ಬಳಸುವುದು ಹೇಗೆಂಬ ಬಗ್ಗೆ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗೆ ಸಮರ್ಪಕ ತರಬೇತಿ ಕೊಡಲಾಗುವುದು. ಉದ್ಯಮಿಗಳು ಇನ್ನು ಮುಂದೆ ಹತ್ತಾರು ಇಲಾಖೆಗಳಿಗೆ ಎಡತಾಕುವ ಪ್ರಮೇಯವೇ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ:ಸಂವಿಧಾನ ಅಂಗೀಕಾರವಾಗಿ ಇಂದಿಗೆ 75 ವರ್ಷ

ನೂತನ ಏಕಗವಾಕ್ಷಿ ವ್ಯವಸ್ಥೆ ಸಂಪೂರ್ಣ ಆನ್ಲೈನ್ ಆಗಿರಲಿದೆ. ಉದ್ಯಮಿಗಳು ತಮ್ಮ ಪ್ಯಾನ್ ಮತ್ತು ಆಧಾರ್ ಸಂಖ್ಯೆಗಳನ್ನು ನಮೂದಿಸಿದರೆ ಮಿಕ್ಕೆಲ್ಲ ವಿವರಗಳು ತಾವಾಗಿಯೇ ದೊರೆಯುತ್ತವೆ. ಇದು ಸುಲಲಿತ ಕೈಗಾರಿಕಾ ಸಂಸ್ಕೃತಿಯ ಭಾಗವಾಗಿದೆ. ಒಟ್ಟಿನಲ್ಲಿ ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಡಿಸೆಂಬರಿನಲ್ಲೇ ಮುಗಿಯಲಿದ್ದು, ಜನವರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಉದ್ಘಾಟನೆಗೆ ಸಿದ್ಧವಾಗಲಿದೆ
ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಉದ್ಯಮಿಗಳು ಸಾವಿರಾರು ಕೋಟಿ ರೂಪಾಯಿ ಹೂಡುತ್ತಿದ್ದಾರೆ. ನಾವು ಅವರಿಗೆ ಏಕಗವಾಕ್ಷಿ ಅನುಮತಿಯಂತಹ ಸೌಲಭ್ಯಗಳನ್ನು ಒದಗಿಸಬೇಕು. ಇದರಿಂದ ರಾಜ್ಯವು ಮತ್ತಷ್ಟು ಉದ್ಯಮಸ್ನೇಹಿ ಮತ್ತು ತಂತ್ರಜ್ಞಾನದ ಸಮರ್ಥ ಬಳಕೆಯ ತಾಣವಾಗಲಿದೆ ಎಂದು ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News