ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ!

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.

Written by - Savita M B | Last Updated : May 10, 2024, 12:43 PM IST
  • ಸಮಾಜ, ಸರ್ಕಾರ ಗಂಭೀರವಾಗಿ ಪರಿಗಣಿಸಲು ಸಲಹೆ
  • ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರ್ಯಾಯ ಕ್ರಮ ಕೈಗೊಳ್ಳಬೇಕು
ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ! title=

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.

ಸಮಗ್ರ ಅಧ್ಯಯನ ಅಗತ್ಯ: ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ, ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದು ಅಭಿಪ್ರಾಯಿಸಿದರು.

ಪ್ರಜಾಪ್ರಭುತ್ವಕ್ಕೆ ಧಕ್ಕೆ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೇ, ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ತೀವ್ರ ಆತಂಕ ಹಾಕಿದರು.

ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಪಕ್ಕಾ ಜಾತ್ಯತೀತ ದೇಶವಾಗಿದೆ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು.

ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ. ಈ ಪರಂಪರೆಯೆ ಮುಂದುವರಿಯಬೇಕು ಎಂದು ಸಚಿವ ಜೋಶಿ ಆಶಿಸಿದರು.

ಇದನ್ನೂ ಓದಿ-ಕೊಪ್ಪಳ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆ

ಪ್ರಮುಖವಾಗಿ ಹಿಂದೂಗಳ ದೇಶವೆಂದರೂ ಸರ್ವ ಧರ್ಮೀಯರನ್ನು ಒಳಗೊಂಡಿದೆ. ಆದರೆ, ಈಗ ಹಿಂದೂಗಳ ಸಂಖ್ಯೆಯೇ ಕುಸಿಯುತ್ತಿದೆ ಎಂದರೆ ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಚಿಂತಿಸಬೇಕಾದ ಸಂಗತಿ ಎಂದು ಜೋಶಿ ಎಚ್ಚರಿಸಿದರು.

ಬಸವಣ್ಣನ ಕಲ್ಪನೆಯ ಸಮಾಜ ನಿರ್ಮಾಣ ಆಗಬೇಕು: ಪ್ರಜಾಪ್ರಭುತ್ವದ ರೂವಾರಿ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ. ಇಂದು ಅವರ ಕಲ್ಪನೆಯ ಸಮಾಜ ನಿರ್ಮಾಣ ಮತ್ತು ಆಡಳಿತ ವ್ಯವಸ್ಥೆ ಬರಬೇಕಿದೆ ಎಂದು ಪ್ರಲ್ಹಾದ ಜೋಶಿ ಅವರು ಬಸವ ಜಯಂತಿಯ ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.

ಇದನ್ನೂ ಓದಿ-ವರ್ಷಾಧಾರೆ ಕಂಡು ರೈತರಲ್ಲಿ ಮನೆಮಾಡಿದ ಸಂತಸ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News