ಬೆಂಗಳೂರು: ಖಾತೆ ಹಂಚಿಕೆ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ರಾಜ್ಯದ ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ(Umesh Katti), ರಾಜ್ಯದ ಮಂತ್ರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಬಿಪಿಎಲ್ ಪಡಿತರದಾರರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ. ಪಡಿತರ ಚೀಟಿ ದಾರರಿಗೆ ಜೋಳ, ರಾಗಿ, ದೊರೆಯುವಂತೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
B.S.Yediyurappa: ಹಾಲಿ ಸಚಿವರ ಖಾತೆಗಳು ಅದಲು-ಬದಲು..!? ಇಲ್ಲಿದೆ ಕಂಪ್ಲೀಟ್ ಪಟ್ಟಿ
ಇನ್ನು ಈ ಹಿಂದೆಯೂ 13 ವರ್ಷ ಮಂತ್ರಿಯಾಗಿ ಕೆಲಸ ಮಾಡಿದ ಅನುಭವವಿದೆ. ನನಗೆ ಮಂತ್ರಿ ಸ್ಥಾನ ಹೊಸದೇನು ಅಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ ಎಂದರು.
ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.