"10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೋದಿ ಅವರು ಮೊದಲು ಹೇಳಬೇಕು"

 10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೋದಿ ಅವರು ಮೊದಲು ಹೇಳಬೇಕು.ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Manjunath N | Last Updated : Apr 14, 2024, 04:04 PM IST
  • ಬಿಜೆಪಿ ಪ್ರಣಾಳಿಕೆಯ ರೂಪದಲ್ಲಿ ಹೊಸ ಹೊಸ ಭ್ರಮೆಯನ್ನು ಸೃಷ್ಟಿಸುತ್ತಿದೆ
  • ಹೊಸ ಪ್ರಣಾಳಿಕೆಯ ಬಗ್ಗೆ ಮಾತನಾಡುವ ಮೊದಲು ಅವರು ಈ ಹಿಂದೆ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು
  • ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ಹಾಕಿದರೇ?
"10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೋದಿ ಅವರು ಮೊದಲು ಹೇಳಬೇಕು" title=

ಕೊಡಗು: 10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ಮೋದಿ ಅವರು ಮೊದಲು ಹೇಳಬೇಕು.ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಮಡಿಕೇರಿಯ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮೊದಲು ಬಿಜೆಪಿ 600 ಭರವಸೆಗಳನ್ನು ಕೊಟ್ಟು 60 ಭರವಸೆಗಳನ್ನೂ ಈಡೇರಿಸಿಲ್ಲ.ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂದು ಕಿಡಿ ಕಾರಿದರು.

ಇದನ್ನೂ ಓದಿ: ಗಡಿಯಲ್ಲಿ ಮೂಲಸೌಲಭ್ಯವಿಲ್ಲದೆ ಅಧಿಕಾರಿಗಳ ಪರದಾಟ

ಬಿಜೆಪಿ ಪ್ರಣಾಳಿಕೆಯ ರೂಪದಲ್ಲಿ ಹೊಸ ಹೊಸ ಭ್ರಮೆಯನ್ನು ಸೃಷ್ಟಿಸುತ್ತಿದೆ. ಹೊಸ ಪ್ರಣಾಳಿಕೆಯ ಬಗ್ಗೆ ಮಾತನಾಡುವ ಮೊದಲು ಅವರು ಈ ಹಿಂದೆ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ಹಾಕಿದರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ? ಮೆಕ್ ಇನ್ ಇಂಡಿಯಾ ಏನಾಗಿದೆ? ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ?ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿಜೆಪಿ ಭರವಸೆಗಳನ್ನು ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಶ್ರೀನಿವಾಸ ಪ್ರಸಾದ್ ರಾಜಕೀಯದಲ್ಲಿ ಸಮಕಾಲೀನರು. ಅವರು 74ರಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಿದ್ದರು, ಒಟ್ಟಿಗೆ ರಾಜಕಾರಣದಲ್ಲಿದ್ದೆವು.ದೀರ್ಘ ಕಾಲದ ಸ್ನೇಹಿತ. ಅವರು ರಾಜಕೀಯದಿಂದ ನಿವೃತ್ತರಾಗಿ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂಥ ಸಂದರ್ಭದಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಯವರ ಹೇಳಿಕೆ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದರೆ ಏನರ್ಥ? ಎರಡು ಬಾರಿ ಮುಖ್ಯಮಂತ್ರಿಯಾದವರು ಆಡುವ ಮಾತೇ ಇದು? ಎಂದು ಅವರು ಪ್ರಶ್ನಿಸಿದರು.

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News