ಮೋದಿಯವರು ಮುಂದಿನ ಐದು ವರ್ಷದಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ: ಬಸವರಾಜ ಬೊಮ್ಮಾಯಿ

ಗದಗ: ಕಾಂಗ್ರೆಸ್ ನವರ ತಾತ್ಕಾಲಿಕ ಗ್ಯಾರಂಟಿಯಾಗಿವೆ. ಅವರು ಕೊಡುವ ಗ್ಯಾರಂಟಿಗಳು ಎಲ್ಕರಿಗೂ ತಲುಪುತ್ತಿಲ್ಲ. ಗ್ಯಾರೆಂಟಿ ಹೆಸರಿನಲ್ಲಿ ಕಾಂಗ್ರೆಸ್ ನವರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Written by - Bhavishya Shetty | Last Updated : Apr 29, 2024, 07:17 PM IST
    • ಮುಂದಿನ ಐದು ವರ್ಷದಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ
    • ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿತ್ರಾರ್ಜಿತ ಆಸ್ತಿ ಹಂಚಿಕೆ ಮಾಡುವುದಾಗಿ ಹೇಳುತ್ತಿದ್ದಾರೆ
    • ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿಕೆ
ಮೋದಿಯವರು ಮುಂದಿನ ಐದು ವರ್ಷದಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ: ಬಸವರಾಜ ಬೊಮ್ಮಾಯಿ title=
File Photo

ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಮಮಂದಿರ ಕಟ್ಟಿ ರಾಮರಾಜ್ಯ ಮಾಡಲು ಬಂದಿದ್ದಾರೆ. ಮೋದಿಯವರು ಮುಂದಿನ ಐದು ವರ್ಷದಲ್ಲಿ ಬಡತನ ಮುಕ್ತ ಭಾರತ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ಪಟ್ಡಣ, ಅಡರಕಟ್ಟಿ, ಗೋಜನೂರು ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಅಸಾಧ್ಯವನ್ನು ಸಾಧ್ಯ ಮಾಡಿದ್ದಾರೆ. ಅವರು ಕೊಟ್ಟ ಜಲಜೀವನ‌ ಮಿಷನ್ ಯೋಜನೆಯಿಂದ ದೇಶದ ಪ್ರತಿ ಮನೆಗೂ ನಳದ ನೀರು ಬರುವಂತೆ ಮಾಡಿದ್ದಾರೆ. ನಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಜಲ ಜೀವನ್ ಮಿಷನ್ ಯೋಜನೆಗೆ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದು, ಸುಮಾರು 75 ಲಕ್ದ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷ ವಾದರೂ ಯಾರೂ ಈ ರೀತಿ ಯೋಚಿಸಿರಲಿಲ್ಲ. ಸೂರಿಲ್ಲದ ಬಡವರಿಗೆ ಶಾಸ್ವತ ಮನೆ ನಿರ್ಮಾಣ, ಮನೆಗಳಿಗೆ ಉಜ್ವಲ ಗ್ಯಾಸ್, ಶೌಚಾಲಯ ನಿರ್ಮಾಣ ಮಾಡುವ ಮೂಲಕ  ಮೊದಿಯವರದು ಶಾಸ್ವತ ಗ್ಯಾರೆಂಟಿ ಗಳನ್ನು ನೀಡಿದ್ದಾರೆ. ಮೋದಿಯವರು ಮುಂದಿನ ಐದು ವರ್ಷ ಮತ್ತೆ ಪ್ರಧಾನಿಯಾದರೆ ಬಡತನ ಮುಕ್ತ ಭಾರತ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!

ಕಾಂಗ್ರೆಸ್ ನವರ ತಾತ್ಕಾಲಿಕ ಗ್ಯಾರಂಟಿಯಾಗಿವೆ. ಅವರು ಕೊಡುವ ಗ್ಯಾರಂಟಿಗಳು ಎಲ್ಕರಿಗೂ ತಲುಪುತ್ತಿಲ್ಲ. ಗ್ಯಾರೆಂಟಿ ಹೆಸರಿನಲ್ಲಿ ಕಾಂಗ್ರೆಸ್ ನವರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿತ್ರಾರ್ಜಿತ ಆಸ್ತಿ ಹಂಚಿಕೆ ಮಾಡುವುದಾಗಿ ಹೇಳುತ್ತಿದ್ದಾರೆ. ತಂದೆಯ ಆಸ್ತಿ ಮಗನಿಗೆ ಬರಬೇಕಾದರೆ ಸರ್ಕಾರಕ್ಜೆ ಶೇ 55% ರಷ್ಟು ತೆರಿಗೆ ಕಟ್ಟಬೇಕು. ಇಲ್ಲದಿದ್ದರೆ ಅಷ್ಟು ಮೊತ್ತದ ಆಸ್ತಿ ಸರ್ಕಾರಕ್ಕೆ ಬಿಟ್ಟು ಕೊಡಬೇಕು. ನಮ್ಮ ತಾತ ಮುತ್ತಾತನ ಕಾಲದ ಆಸ್ತಿಯನ್ನು ಸರ್ಕಾರಕ್ಕೆ ಕೊಡಿ ಎಂದು ಕೇಳಿದರೆ ಯಾರು ಕೊಡುತ್ತಾರೆ ಎಂದರು.

ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ನಾವು ಒಂದೇ ತಿಂಗಳಲ್ಲಿ 17 ಲಕ್ಚ ರೈತರಿಗೆ ನೇರವಾಗಿ ಅವರ ಖಾತೆಗೆ ಪರಿಹಾರದ ಮೊತ್ತ ಜಮೆ ಮಾಡಿದ್ದೇವು. ಇವರು ಬರ ಹತ್ತು ತಿಂಗಳು ಕಳೆದಿದ್ದರೂ, ಸರಿಯಾಗಿ ಪರಿಹಾರ ನೀಡಿಲ್ಲ. ರೈತರಿಗೆ ಪರಿಹಾರವಾಗಿ ಎರಡು ಸಾವಿರ ರೂಪಾಯಿ ಭಿಕ್ಷೆ ನೀಡಿದಂತೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಅಭಿವೃದ್ದಿ ಶೂನ್ಯ: 

ನಾವಿದ್ದಾಗ ಒಂಭತ್ತು ಸಾವಿರ ಶಾಲಾ ಕೊಠಡಿ ಆರಂಭಿಸಿದ್ದೇವು. ಇವರು ಮುಂದುವರೆಸಲಿಲ್ಲ. ಬೆಳೆ ವಿಮೆ ಬರಲಿಲ್ಲ. ರೈತರ ಮಕ್ಕಳಿಗೆ ವಿದ್ಯಾನಿಧಿ ಮಾಡಿದ್ದೇವು. ಒಂದೇ ವರ್ಷದಲ್ಲಿ 11 ಲಕ್ಷ ವಿದ್ಯಾರ್ಥಿಗಳ ಲಾಭ ಪಡೆದಿದ್ದರು. ಲಕ್ಷ್ಮೇಶ್ವರ ತಾಲೂಕಿನಲ್ಲಿ  24 ಸಾವಿರ ವಿದ್ಯಾರ್ಥಿಗಳು ಲಾಭ ಪಡೆದುಕೊಂಡಿದ್ದಾರೆ‌.  ಇದು ಸಂಪೂರ್ಣ ರೈತ ವಿರೋಧಿ ಸರ್ಕಾರ. ಎಸ್ಸಿ ಎಸ್ಟಿ ವಿಚಾರದಲ್ಲಿಯೂ ಈ ಸರ್ಕಾರ ಅನ್ಯಾಯ ಮಾಡಿದೆ. ಎಸ್ಟಿಪಿ ಟಿಎಸ್ ಪಿ ಯೋಜನೆಯ ಹಣವನ್ನು ಗ್ಯಾರೆಂಟಿ ಗಳಿಗೆ ಕೊಡುತ್ತಿದ್ದಾರೆ.  ನಾವು ಸ್ತ್ರಿಸಾಮರ್ಥ್ಯ ಯೋಜನೆ ಮಾಡಿದ್ದೇವು ಅದನ್ನು ನಿಲ್ಲಿಸಿದ್ದಾರೆ‌. ಇದೊಂದು ಅಭಿವೃದ್ಧಿ ಶೂನ್ಯ ಸರ್ಕಾರ ಎಂದರು.

ಬಿಜೆಪಿ ಹೂ ಅರಳುತ್ತದೆ

ಈ ಬಾರಿ ದೇಶಾದ್ಯಂತ ಶೇ ತೊಂಬತ್ತರಷ್ಟು ಜನರ ಮನಸಲ್ಲಿ ಮೋದಿ ಇದ್ದಾರೆ. ಮೋದಿಯರು ಕೊರೊನಾ ಸಂದರ್ಭದಲ್ಲಿ ಉಚಿತ ಲಸಿಕೆ ಕೊಡಿಸಿ ನಮ್ಮೆಲ್ಲರ ಜೀವ ಉಳಿಸಿದ್ದಾರೆ. ಉಚಿತ ಅಕ್ಕಿ ಕೊಡುತ್ತಿದ್ದಾರೆ. ಮನೆಗಳಿಗೆ ನೀರು ಕೊಡುತ್ತಿದ್ದಾರೆ. ಅವರ ಋಣ ತೀರಿಸಲು ಎಲ್ಲರೂ ಬಿಜೆಪಿಗೆ ಆಶೀರ್ವಾದ ಮಾಡಿದರೆ, ದೇಶದಲ್ಲಿ ಮತ್ತೆ ಬಿಜೆಪಿಯ ಕಮಲದ ಹೂ ಅರಳಲಿದೆ ಎಂದು ಹೇಳಿದರು.

ಇದನ್ನೂ ಓದಿ: ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ-NDA ನಿಲುವೇನು? ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ

ರೋಡ್ ಶೋನಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ಗಂಗಣ್ಣ ಮಾನಶೆಟ್ಡರ್ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News