Heavy Rainfall : ಕೇರಳಕ್ಕೆ ಎಂಟ್ರಿ ನೀಡಿದ ಮಾನ್ಸೂನ್ : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರು!

ಈ ಎಂಟು ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆ

Last Updated : Jun 4, 2021, 10:04 AM IST
  • ಎರಡು ದಿನ ತಡವಾಗಿಯಾದರೂ ನೈಋತ್ಯ ಮಾನ್ಸೂನ್ ಕೇರಳಕ್ಕೆ ಇಂದು ಅಪ್ಪಳಿಸಿದೆ
  • ರಾಜ್ಯದಲ್ಲಿಯೂ ಮುಂಗಾರು ಮಳೆಯ ಆರ್ಭಟ ಶುರು
  • ಈ ಎಂಟು ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆ
Heavy Rainfall : ಕೇರಳಕ್ಕೆ ಎಂಟ್ರಿ ನೀಡಿದ ಮಾನ್ಸೂನ್ : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರು! title=

ಬೆಂಗಳೂರು : ಎರಡು ದಿನ ತಡವಾಗಿಯಾದರೂ ನೈಋತ್ಯ ಮಾನ್ಸೂನ್ ಕೇರಳಕ್ಕೆ ಇಂದು ಅಪ್ಪಳಿಸಿದೆ ಎಂದು ಭಾರತ ಹವಾಮಾನ ಇಲಾಖೆ (India Meteorological Department) ಖಚಿತಪಡಿಸಿದೆ. ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗಲಿದೆ.

ಇದರಿಂದ ರಾಜ್ಯಕ್ಕೆ ಮುಂಗಾರು ಮಳೆ(Monsoon Rain) ಆಗಮನಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಇದೇ ವೇಳೆ ಇದೇ ಜೂನ್​ 6 ಅಥವಾ7ರಂದು ಮುಂಗಾರು ಮಳೆ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ : ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ನಿಂದ ಕ್ಷಮೆಯಾಚನೆ

ಈಗಾಗಲೇ ನಿನ್ನೆ ಕೇರಳಕ್ಕೆ ಮಾನ್ಸೂನ್​ ಎಂಟ್ರಿ(Kerala Monsoon Entry) ಕೊಟ್ಟಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿಯೂ ಮುಂಗಾರು ಮಳೆಯ ಆರ್ಭಟ ಶುರುವಾಗಲಿದೆ. ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಾನ್ಸೂನ್​ ಮಳೆಯಾಗಲಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಜೂನ್ 14 ರವರೆಗೆ ಲಾಕ್ ಡೌನ್ ವಿಸ್ತರಣೆ

ಮೇ 31ರಂದು ಮಾನ್ಸೂನ್ ಆಗಮನವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಮಾನ್ಸೂನ್ ಮಳೆಯ 2 ದಿನಗಳ ವಿಳಂಬವಾಗಿದೆ. ಇದೀಗ ಮಾನ್ಸೂನ್(Monsoon) ಪ್ರವೇಶಿಸಿದ್ದು, ಕೇರಳದ ಮಧ್ಯ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.ಪಥನಮತ್ತಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಕಾಸರಗೋಡು, ಕಣ್ಣೂರು ಮತ್ತು ಕೋಝಿಕೋಡ್ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ : ಕನ್ನಡ ಭಾಷೆಯನ್ನು ಕೊಳಕು ಭಾಷೆ ಎಂದ ಗೂಗಲ್ ವಿರುದ್ಧ ಸಿಡಿದ್ದೆದ್ದ ಕನ್ನಡಿಗರು..!

ಈ ಎಂಟು ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆ(Rainfall)ಯಾಗುವ ಸಾಧ್ಯತೆಯಿದೆ.ರಾಜ್ಯದಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಪ್ರಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಹೋಗಬಾರದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : Karnataka Relaxes Lockdown : ರಾಜ್ಯದಲ್ಲಿ ಇಂದಿನಿಂದ ಈ ವಲಯದಲ್ಲಿ 'ಲಾಕ್ ಡೌನ್ ಸಡಲಿಕೆ'..!

ನಿನ್ನೆ ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶಿಸಲಿದೆ. ಹೀಗಾಗಿ, ಕರ್ನಾಟಕ(Karnataka)ದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕಕ್ಕೆ ಜೂನ್ 6 ಅಥವಾ 7ರಂದು ಮುಂಗಾರು ಆಗಮನವಾಗುವ ನಿರೀಕ್ಷೆಯಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News