ಚಾಮರಾಜನಗರ : ವೈರಸ್ ಸೋಂಕಿಗೆ ತುತ್ತಾಗಿ 30 ಕ್ಕೂ ಹೆಚ್ಚು ಕುರಿಗಳು ಮೃತಪಟ್ಟು ಮತ್ತಷ್ಟು ಸೋಂಕಿಗೆ ಒಳಗಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಮೇಕೆಗಳಿಗೆ ಪಿಪಿಆರ್ ಎಂಬ ಸಾಂಕ್ರಾಮಿಕ ರೋಗ ತಗುಲಿ ಅಸುನೀಗುತ್ತಿವೆ. ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಂತೆಯಿಂದ ಖರೀದಿಸಿ ತಂದ ಮೇಕೆ ಮರಿಯಿಂದ ಈ ವೈರಸ್ ಹರಡಿದ್ದು ಕಳೆದ 15 ದಿನಗಳಿಂದ 30 ಕ್ಕೂ ಹೆಚ್ಚು ಕುರಿ, ಮೇಕೆಗಳನ್ನು ಕಳೆದುಕೊಂಡಿದ್ದಾರೆ.
ಇದನ್ನೂ ಓದಿ:ಬ್ರಹ್ಮರಾಕ್ಷಸ ಸಿನಿಮಾ ಹೇಗೆ ಸಿಕ್ತು..? ಬ್ರಹ್ಮರಾಕ್ಷಸ ಸಿನಿಮಾದಲ್ಲಿ ಅಂಕುಶ್ ಪಾತ್ರ ಹೇಗಿದೆ.?
ಈ ಬಗ್ಗೆ ಸಾಮಾಜಿಕ ಹೋರಾಟಗಾರ ಕಾಂತರಾಜು ಪ್ರತಿಕ್ರಿಯೆ ಕೊಟ್ಟಿದ್ದು, ಮೇಕೆ ಸಾಕಾಣಿಕೆದಾರರು ಸತ್ತ ಮೇಕೆಗಳನ್ನು ಕಸದ ತಿಪ್ಪೆ ಅಥವಾ ಭೂಮಿಯಲ್ಲಿ ಹೂಳುವುದನ್ನು ಮಾಡುತ್ತಿರುವುದರಿಂದ ಮತ್ತಷ್ಟು ಕುರಿಗಳಿಗೆ ಈ ವೈರಸ್ ಹರಡಿದೆ. ಕಾಯಿಲೆ ನಿಯಂತ್ರಣಕ್ಕೆ ಪಶು ಇಲಾಖೆ ತ್ವರಿತ ಕ್ರಮ ಕೈಗೊಳ್ಳಬೇಕು, ಶಿವಪುರ ವಲಯದ ಪಶು ಚಿಕಿತ್ಸಕರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಕಾಯಿಲೆ ತಡೆಗೆ ಅವರ ಸಲಹೆಯಂತೆ ರೈತರೇ ಮೈಸೂರಿನಿಂದ ಲಸಿಕೆ ಖರೀದಿಸಿ ತಂದಿದ್ದಾರೆ. ಲಸಿಕೆ ನೀಡಿದ ನಂತರವೂ ನಿಯಂತ್ರಣ ಸಾಧ್ಯವಾಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರೇ ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದಾರೆ. ಇವರ ಜೊತೆಗೆ ಕ್ಷೇತ್ರದ ಶಾಸಕರು ಕಾಯಿಲೆ ಬಗ್ಗೆ ಮಾಹಿತಿ ಪಡೆದು ಸಚಿವರ ಗಮನಕ್ಕೆ ತಂದು ರೋಗ ತಡೆಗೆ ಕ್ರಮ ವಹಿಸಿ, ಮೇಕೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು. ಆ ಮೂಲಕ ರೈತ ಕುಟುಂಬಗಳು ಬೀದಿಗೆ ಬೀಳುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮುಸ್ಲಿಂ ಹಿತರಕ್ಷಣೆ ಬಗ್ಗೆ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡ ಶೆಟ್ಟರ್ ಹೇಳಿದ್ದೇನು?
ಅಧಿಕಾರಿಗಳು ಹೇಳೋದೇನು..? : ಚೌಡಹಳ್ಳಿ ಗ್ರಾಮದಲ್ಲಿ ಪಿಪಿಆರ್ ವೈರಸ್ ಸೋಂಕಿನಿಂದ ಕಳೆದ 15ದಿನಗಳಲ್ಲಿ 30 ಹೆಚ್ಚು ಮೇಕೆ ಮತ್ತು ಮರಿಗಳು ಮೃತಪಟ್ಟಿದೆ. ಸಣ್ಣ ಮರಿಗಳು ವೈರಸ್ ಸೋಂಕಿನಿಂದ ಮೃತ ಪಟ್ಟಾಗ ಮರಿಗಳನ್ನು ಹೂಳದೆ ಬೀಸಾಡಿದ್ದಾರೆ. ಆದ್ದರಿಂದ ಸೋಂಕು ಉಲ್ಬಣಗೊಂಡು ಹರಡಿದೆ. ಗ್ರಾಮದಲ್ಲಿ ಎಲ್ಲಾ ಮರಿಗಳಿಗೂ ವ್ಯಾಕ್ಸಿನೇಷನ್ ಮಾಡಲಾಗಿದೆ ಇನ್ನೂ ಮರಿಗಳ ಸಾವು ನಿಯಂತ್ರಣವಾಗಿಲ್ಲ.ಸೋಂಕು ನಿಯಂತ್ರಣಕ್ಕೆ ಬರಲು 21 ದಿನಗಳ ಕಾಲಬೇಕು. ಮೃತಪಟ್ಟ ಎಲ್ಲಾ ಮೇಕೆಗಳಿಗೆ ಪರಿಹಾರ ನೀಡಲಾಗುತ್ತದೆ ಎಂದು ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮೋಹನ್ ಕುಮಾರ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.